Last Updated:
ಪ್ರಧಾನಿ ಮೋದಿ ಪಾಟ್ನಾದಲ್ಲಿ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ಭೇಟಿಯಾಗಿ, ಅವರ ಬ್ಯಾಟಿಂಗ್ ಕೌಶಲ್ಯವನ್ನು ಶ್ಲಾಘಿಸಿದರು. ವೈಭವ್ ಐಪಿಎಲ್‌ನಲ್ಲಿ 35 ಎಸೆತಗಳಲ್ಲಿ ಶತಕ ಬಾರಿಸಿದ್ದಾರೆ.
ಪಾಟ್ನಾ: ನಿನ್ನೆಯಿಂದ ಎರಡು ದಿನಗಳ ಕಾಲ ಬಿಹಾರ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶುಕ್ರವಾರ ಭಾರತದ ಸ್ಟಾರ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ (Vaibhav Suryavanshi) ಅವರನ್ನು ಭೇಟಿಯಾದರು.
ಈ ಬಾರಿಯ ಐಪಿಎಲ್ ಪಂದ್ಯದಲ್ಲಿ ಅತೀ ಕಡಿಮೆ ಬಾಲ್‌ನಲ್ಲಿ ಶತಕ ಸಿಡಿಸುವ ಮೂಲಕ ದಾಖಲೆ ನಿರ್ಮಿಸಿದ್ದ 14 ವರ್ಷದ ಕ್ರಿಕೆಟಿಗ ವೈಭವ್ ಸೂರ್ಯವಂಶಿಯನ್ನು ಪಾಟ್ನಾದ ಜೈ ಪ್ರಕಾಶ್ ನಾರಾಯಣ್ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದರು. ಈ ವೇಳೆ ವೈಭವ್ ಅವರ ಪೋಷಕರು ಸಹ ಹಾಜರಿದ್ದರು.
2025 ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಯಲ್ಲಿ ರಾಜಸ್ಥಾನ್ ರಾಯಲ್ಸ್ (ಆರ್‌ಆರ್) ಪರ ಅದ್ಭುತ ಪ್ರದರ್ಶನ ನೀಡಿದ ನಂತರ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 14 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ಭೇಟಿಯಾದರು.
ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬದೊಂದಿಗೆ ತಾವು ನಡೆಸಿದ ಭೇಟಿಯ ಚಿತ್ರಗಳನ್ನು ಪ್ರಧಾನಿ ಮೋದಿ ಅವರೇ ಹಂಚಿಕೊಂಡಿದ್ದಾರೆ. ರಾಜಸ್ತಾನ ರಾಯಲ್ಸ್ ತಂಡ ಪ್ಲೇಆಫ್‌ಗೆ ಅರ್ಹತೆ ಪಡೆಯಲು ವಿಫಲವಾದ ನಂತರ ತಮ್ಮ ಊರಿಗೆ ಮರಳಿದ ಸೂರ್ಯವಂಶಿ, ಇಂದಿನ ಮೋದಿ ಸಮಾರಂಭದಲ್ಲಿ ತಮ್ಮ ಕುಟುಂಬದೊಂದಿಗೆ ಹಾಜರಾಗಿದ್ದರು. ನಂತರ ಪ್ರಧಾನಿ ಮೋದಿ ಅವರು ಯುವ ಕ್ರಿಕೆಟಿಗನ ಅಸಾಧಾರಣ ಬ್ಯಾಟಿಂಗ್ ಕೌಶಲ್ಯವನ್ನು ಶ್ಲಾಘಿಸಿ ಸಾಮಾಜಿಕ ಮಾಧ್ಯಮದಲ್ಲಿ ಫೋಟೋಗಳನ್ನು ಹಂಚಿಕೊಂಡರು.
ಈ ಬಗ್ಗೆ ತಮ್ಮ ಟ್ವೀಟ್‌ನಲ್ಲಿ ಪ್ರಧಾನಿ ಮೋದಿ, ‘ಪಾಟ್ನಾ ವಿಮಾನ ನಿಲ್ದಾಣದಲ್ಲಿ, ಯುವ ಕ್ರಿಕೆಟ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಮತ್ತು ಅವರ ಕುಟುಂಬವನ್ನು ಭೇಟಿಯಾದೆ. ಅವರ ಕ್ರಿಕೆಟ್ ಕೌಶಲ್ಯವನ್ನು ದೇಶಾದ್ಯಂತ ಪ್ರಶಂಸಿಸಲಾಗುತ್ತಿದೆ. ಅವರ ಭವಿಷ್ಯದ ಪ್ರಯತ್ನಗಳಿಗೆ ನನ್ನ ಶುಭಾಶಯಗಳು’ ಎಂದು ಹೇಳಿದ್ದಾರೆ.
14 ವರ್ಷದ ವೈಭವ್ ಸೂರ್ಯವಂಶಿ ಈ ಸೀಸನ್‌ನ ಐಪಿಎಲ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಬಿಹಾರದ ಸಮಷ್ಟಿಪುರ ನಿವಾಸಿ ವೈಭವ್, ರಾಜಸ್ಥಾನ ರಾಯಲ್ಸ್ ಪರ ಆಡುವಾಗ, ಗುಜರಾತ್ ಟೈಟಾನ್ಸ್ ವಿರುದ್ಧ 35 ಎಸೆತಗಳಲ್ಲಿ ಶತಕ ಗಳಿಸುವ ಮೂಲಕ ಎಲ್ಲರ ಗಮನ ಸೆಳೆದರು. ಐಪಿಎಲ್‌ನಲ್ಲಿ ಶತಕ ಬಾರಿಸಿದ ಅತ್ಯಂತ ಕಿರಿಯ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ಐಪಿಎಲ್‌ನಲ್ಲಿ ಅತಿ ವೇಗದ ಶತಕ ಬಾರಿಸಿದ ಭಾರತೀಯ ಎಂಬ ಹೆಗ್ಗಳಿಕೆಗೂ ಪಾತ್ರರಾದರು. ಅವರು ಯೂಸುಫ್ ಪಠಾಣ್ ಅವರ ದಾಖಲೆಯನ್ನು ಮುರಿದಿದ್ದಾರೆ.