ಚಾಂಪಿಯನ್ಸ್ ಟ್ರೋಫಿ: ಆಸ್ಟ್ರೇಲಿಯಾ ಬಗ್ಗು ಬಡಿದ ಭಾರತ; 5ನೇ ಬಾರಿಗೆ ಫೈನಲ್ ಪ್ರವೇಶ – INDIA BEAT AUSTRALIA
ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ.
Ind vs Aus: ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಗೆಲುವು ಸಾಧಿಸಿದೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದಿದ್ದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಆಸ್ಟ್ರೇಲಿಯಾ 264ರನ್ಗೆ ಸರ್ವಪತನ ಕಂಡಿತು.
ಈ ಸಾಮಾನ್ಯ ಗುರಿಯನ್ನು ಬೆನ್ನತ್ತಿದ್ದ ಭಾರತ 6 ವಿಕೆಟ್ಗಳನ್ನು ಕಳೆದುಕೊಂಡು ಇನ್ನೂ ಎರಡು ಓವರ್ ಬಾಕಿ ಇರುವಾಗಲೇ ಗೆಲುವಿನ ದಡ ಸೇರಿದೆ. ಭಾರತದ ಪರ ವಿರಾಟ್ ಕೊಹ್ಲಿ ಭರ್ಜರಿ ಪ್ರದರ್ಶನ ನೀಡಿದರು. 98 ಎಸೆತಗಳಲ್ಲಿ 84 ರನ್ ಬಾರಿಸಿದರು. ಆದರೆ ಶತಕಕ್ಕೆ 16 ರನ್ ಬಾಕಿ ಇರುವಾಗಲೆ ವಿಕೆಟ್ ಒಪ್ಪಿಸಿದರು.
ಸಿಕ್ಸರ್ ಸಿಡಿಸಿ ಪಂದ್ಯ ಮುಗಿಸಿದ ರಾಹುಲ್: ಭಾರತ ಗೆಲುವಿಗೆ 4 ರನ್ ಬೇಕಿದ್ದಾಗ ಕನ್ನಡಿಗ ಕೆಎಲ್ ರಾಹುಲ್ ಸಿಕ್ಸರ್ ಸಿಡಿಸಿ ಪಂದ್ಯ ಮುಗಿಸಿದ್ದಾರೆ. ಇದರೊಂದಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ 5ನೇ ಬಾರಿಗೆ ಫೈನಲ್ಗೆ ಪ್ರವೇಶ ಪಡೆದಿದೆ.