ಡಿಸೆಂಬರ್ ಒಳಗೆ ಡಿಕೆಶಿ ಸಿಎಂ ಆಗ್ತಾರೆ, ಬೇಕಾದ್ರೆ ರಕ್ತದಲ್ಲಿ ಬರೆದು ಕೊಡ್ತೀನಿ : ಶಾಸಕ ಶಿವಗಂಗಾ ಬಸವರಾಜ್ – SHIVAGANGA BASAVARAJ
ಡಿ.ಕೆ. ಶಿವಕುಮಾರ್ ಅವರು ಡಿಸೆಂಬರ್‌ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ ಎಂದು ಶಾಸಕ ಶಿವಗಂಗಾ ಬಸವರಾಜ್ ಭವಿಷ್ಯ ನುಡಿದಿದ್ದಾರೆ.
ದಾವಣಗೆರೆ : “ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿ. ಕೆ. ಶಿವಕುಮಾರ್ ಸಿಎಂ ಆಗುತ್ತಾರೆ” ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ.
ದಾವಣಗೆರೆಯ ತಮ್ಮ ನಿವಾಸದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪಕ್ಷಕ್ಕಾಗಿ ಡಿ.ಕೆ. ಶಿವಕುಮಾರ್ ಸಾಕಷ್ಟು ದುಡಿದಿದ್ದಾರೆ. 80 ಶಾಸಕರು ಗೆಲ್ಲಲು ಡಿ. ಕೆ. ಶಿವಕುಮಾರ್ ಅವರ ಪಾತ್ರ ಇದೆ. 80 ಶಾಸಕ ಸ್ಥಾನಗಳಿಗೆ ಕುಸಿದಿದ್ದ ಕಾಂಗ್ರೆಸ್ ಪಕ್ಷದ ಬಲವನ್ನು 140 ಸ್ಥಾನಕ್ಕೆ ತರಲು ಸಾಕಷ್ಟು ಕಷ್ಟು ಪಟ್ಟಿದ್ದಾರೆ. ಅವರು ಏನೇ ನಿರ್ಧಾರ ತೆಗೆದುಕೊಂಡರು ಅದಕ್ಕೆ ನಾವು ಬದ್ಧರಾಗಿರುತ್ತೇವೆ. ಈ ಡಿಸೆಂಬರ್‌ನಿಂದ ಮುಂದಿನ ಐದು ವರ್ಷ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಅಂದರೆ ಏಳೂವರೆ ವರ್ಷ ಅವರೇ ಸಿಎಂ ಆಗಿರುತ್ತಾರೆ” ಎಂದರು.
2025 ರಲ್ಲಿ ಮನೆಯಲ್ಲೇ ಕುಳಿತುಕೊಂಡು ಹಣ ಗಳಿಸುವ ವಿಧಾನ – Work from home methods for Students & Housewives – Click Here – ಇಲ್ಲಿ ಕ್ಲಿಕ್ ಮಾಡಿ
ಮಹಾಶಿವರಾತ್ರಿ ದಿನ ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಸದ್ಗುರು ಜಗ್ಗಿ ವಾಸುದೇವ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ವೇದಿಕೆ ಹಂಚಿಕೊಂಡ ಬಗ್ಗೆ ಮಾತನಾಡಿ, “ಸದ್ಗುರು ಬಿಜೆಪಿಯಿಂದ ಅಮಿತ್ ಶಾ ಅವರನ್ನು ಕರೆದಿದ್ದರು, ಕಾಂಗ್ರೆಸ್ ಪಕ್ಷದಿಂದ ಡಿ.ಕೆ. ಶಿವಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದಕ್ಕೆ ಅವರು ಹೋಗಿದ್ದಾರೆ. ಸಚಿವ ರಾಜಣ್ಣ ಹೇಳಿಕೆಯಿಂದ ಪಕ್ಷಕ್ಕೆ, ಸರ್ಕಾರಕ್ಕೆ ಭಾರೀ ಮುಜುಗರವಾಗುತ್ತಿದೆ. ಹೈಕಮಾಂಡ್ ಇದನ್ನು ಗಮನಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ” ಎಂದು ಹೇಳಿದರು.