ಮಂಗಳೂರು: ಜೂಜಾಟದ ಅಡ್ಡೆಗೆ ಸಿಸಿಬಿ ಪೊಲೀಸರ ದಾಳಿ; 8ಮಂದಿ ವಶಕ್ಕೆ
February 17,2025
ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಕಂಕನಾಡಿ ನಗರ ವ್ಯಾಪ್ತಿಯಲ್ಲಿ ಜೂಜಾಟ ಆಟವಾಡುತ್ತಿದ್ದ ಅಡ್ಡೆಗೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 8ಮಂದಿಯನ್ನು ದಸ್ತಗಿರಿ ಮಾಡಿದ್ದಾರೆ.
ದಾಳಿ ವೇಳೆ ಜೂಜಾಟವಾಡುತ್ತಿದ್ದ ಸತ್ತಾರ್ ಸಾಬ್, ಸಂಜಯ ಸಾಹಿ, ಜಿತೇಂದ್ರ ಚೌಧರಿ, ರಾಮ್ ಪುಕಾರ್, ಅಭಿರಾಮ್ ರಾಯ್, ಕಬುತ್ ರಾಯ್, ಸಮರ್ಜೀತ್, ಮುರುಳಿ ಮಾತೋ ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
2025ರ ಜನವರಿ 13ರಂದು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಆಡಂಕುದ್ರು ಎಂಬಲ್ಲಿ ಜೂಜಾಟ ಆಟವಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ 8ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಅವರ ವಶದಿಂದ ಜೂಜಾಟಕ್ಕೆ ಉಪಯೋಗಿಸಿದ 42,800 ರೂ. ನಗದು, ಇಸ್ಪೀಟ್ ಕಾರ್ಡ್ ಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.