Last Updated:
ಆರ್ಸಿಬಿ ನಾಯಕ ರಜತ್ ಪಾಟಿದಾರ್ ಹಾಗೂ ಫಿಲ್ ಸಾಲ್ಟ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಚೆಪಾಕ್ನ ಕಠಿಣ ಪಿಚ್ನಲ್ಲಿ 200 ರನ್ಗಳ ಗುರಿ ನೀಡಿತು. ಪಾಟಿದಾರ್ 51, ಸಾಲ್ಟ್ 32, ಕೊಹ್ಲಿ 31 ರನ್ಗಳಿಸಿದರು.
ನಾಯಕ ರಜತ್ ಪಾಟಿದಾರ್ ಹಾಗೂ ಫಿಲ್ ಸಾಲ್ಟ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಆರ್ಸಿಬಿ ತಂಡ ಚೆಪಾಕ್ನಂತಹ ಕಠಿಣ ಪಿಚ್ನಲ್ಲೂ ಅದ್ಭುತ ಬ್ಯಾಟಿಂಗ್ ಮಾಡುವ ಮೂಲಕ 197ರನ್ಗಳ ಕಠಿಣ ಗುರಿ ನೀಡಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಬೆಂಗಳೂರು ತಂಡ ಆರಂಭದಿಂದಲೇ ಸ್ಫೋಟಕ ಆಟಕ್ಕೆ ಒತ್ತು ನೀಡಿದರು. ಫಿಲ್ ಸಾಲ್ಟ್ (32) ಕಳೆದ ಪಂದ್ಯದಂತೆಯೂ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ವಿರಾಟ್ ಕೊಹ್ಲಿ 31, ರಜತ್ ಪಾಟಿದಾರ್ ಅರ್ಧಶತಕ ಸಿಡಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.
ಟಾಸ್ ಗೆದ್ದ ಸಿಎಸ್ಕೆ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಬ್ಯಾಟಿಂಗ್ ಆರಂಭಿಸಿದ ಆರ್ಸಿಬಿ ಮೊದಲ ವಿಕೆಟ್ಗೆ 45 ರನ್ಗಳ ಜೊತೆಯಾಟ ನೀಡಿದರು. ಫಿಲ್ ಸಾಲ್ಟ್ 16 ಎಸೆರಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 32 ರನ್ಗಳಿಸಿ ನೂರ್ ಅಹ್ಮದ್ ಬೌಲಿಂಗ್ನಲ್ಲಿ ಧೋನಿ ಕೈಚಳಕಕ್ಕೆ ಸ್ಟಂಪ್ ಔಟ್ ಆದರು. ನಂತರ ಬಂದ ದೇವದತ್ ಪಡಿಕ್ಕಲ್ ಕೂಡ ಸ್ಫೋಟದ ಆಟಕ್ಕೆ ಮುಂದಾಗಿ ವಿಕೆಟ್ ಕೈಚೆಲ್ಲಿದರು. ಆದರೆ ಕೇವಲ 14 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 27 ರನ್ಗಳಿಸಿದರು. ಇನ್ನು ಕೊಹ್ಲಿ ಆರಂಭದಲ್ಲಿ ರನ್ಗಳಿಸಲು ಪರದಾಡಿದರೂ, ಉತ್ತಮ ಲಯಕ್ಕೆ ಮರಳುತ್ತಿದ್ದ ವೇಳೆ 31 ರನ್ಗಳಿಸಿ ನೂರ್ ಅಹ್ಮದ್ ಬೌಲಿಂಗ್ನ್ಲಲೇ ರಚಿನ್ ರವೀಂದ್ರಗೆ ಕ್ಯಾಚ್ ನೀಡಿ ಔಟ್ ಆದರು.
ನಾಯಕ ರಜತ್ ಪಾಟಿದಾರ್ 32 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ಗಳ ಸಹಿತ 51 ರನ್ಗಳಿಸಿದರು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟರ್ಗಳು ವಿಫಲರಾಗಿದ್ದರಿಂದ 200ರ ಗಡಿ ದಾಟಲು ಸಾಧ್ಯವಾಗಲಿಲ್ಲ. ಜಿತೇಶ್ ಶರ್ಮಾ 12, ಲಿಯಾಮ್ ಲಿವಂಗ್ಸ್ಟೋನ್ 10 ರನ್ಗಳಿಸಿ ವಿಕೆಟ್ ಒಪ್ಪಿಸಿದರು. ಕೊನೆಯಲ್ಲಿ ಅಬ್ಬರಿಸಿದ ಟಿಮ್ ಡೇವಿಡ್ 8 ಎಸೆತಗಳಲ್ಲಿ 3 ಸಿಕ್ಸರ್, ಒಂದು ಬೌಂಡರಿ ಸಹಿತ ಅಜೇಯ 22 ರನ್ಗಳಿಸಿ ತಂಡದ ಮೊತ್ತವನ್ನು ಹೆಚ್ಚಿಸಿದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ನೂರ್ ಅಹ್ಮದ್ 36ಕ್ಕೆ 3, ಮತೀಶ್ ಪತೀರಣ 36ಕ್ಕೆ2, ಖಲೀಲ್ ಅಹ್ಮದ್ ಹಾಗೂ ರವಿಚಂದ್ರನ್ ಅಶ್ವಿನ್ ತಲಾ 1 ವಿಕೆಟ್ ಪಡೆದು ಮಿಂಚಿದರು.
March 28, 2025 9:17 PM IST