ಭಾರತದ ಮಾಜಿ ನಾಯಕ ರೋಹಿತ್ ಶರ್ಮಾರ ಮರಳುವಿಕೆಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ. ಚಾಂಪಿಯನ್ ಟ್ರೋಫಿ ಬಳಿಕ ರೋಹಿತ್ ಹಾಗೂ ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಭಾರತ ತಂಡದ ಪರ ಆಡಲಿದ್ದಾರೆ. ರೋಹಿತ್ ಶರ್ಮಾ ಇದುವರೆಗೆ ಆಸ್ಟ್ರೇಲಿಯಾ ನೆಲದಲ್ಲಿ ಒಟ್ಟು 30 ಏಕದಿನ ಪಂದ್ಯಗಳನ್ನು ಆಡಿದ್ದು, ಈ ಅವಧಿಯಲ್ಲಿ ಒಟ್ಟು 1328 ರನ್ ಗಳಿಸಿದ್ದಾರೆ.