ಮಾ. 22ರಂದು ಕರ್ನಾಟಕ ಬಂದ್: ಹೋರಾಟಕ್ಕೆ ಕೈ ಜೋಡಿಸುವಂತೆ ವಾಟಾಳ್‌ ನಾಗರಾಜ್‌ ಮನವಿ – KARNATAKA BANDH

ಮಾ. 22ರಂದು ಕರ್ನಾಟಕ ಬಂದ್: ಹೋರಾಟಕ್ಕೆ ಕೈ ಜೋಡಿಸುವಂತೆ ವಾಟಾಳ್‌ ನಾಗರಾಜ್‌ ಮನವಿ – KARNATAKA BANDH

ಮಾ. 22ರಂದು ಕರ್ನಾಟಕ ಬಂದ್: ಹೋರಾಟಕ್ಕೆ ಕೈ ಜೋಡಿಸುವಂತೆ ವಾಟಾಳ್‌ ನಾಗರಾಜ್‌ ಮನವಿ – KARNATAKA BANDH

ಕರ್ನಾಟಕ ಬಂದ್ ಯಶಸ್ವಿಗೊಳಿಸಲು ಎಲ್ಲರೂ ಕೈ ಜೋಡಿಸುವಂತೆ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.

ಮೈಸೂರು : ಮಾ. 22ರಂದು ಕನ್ನಡಪರ ಸಂಘಟನೆಗಳು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆ ಖಂಡಿಸಿ ಕರೆ ನೀಡಿರುವ ಕರ್ನಾಟಕ ಬಂದ್​ಗೆ ಎಲ್ಲರೂ ಬೆಂಬಲ ನೀಡುವಂತೆ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಮನವಿ ಮಾಡಿದ್ದಾರೆ. ನಗರದಲ್ಲಿಂದು ಈಟಿವಿ ಭಾರತದ ಜೊತೆ ಮಾತನಾಡಿದ ಅವರು ಈ ಬಂದ್‌ ಏಕೆ ಎಂಬ ಕುರಿತು ಮಾಹಿತಿ ನೀಡಿದರು.

ಬೆಳಗಾವಿಯ ಕೆಲವೆಡೆ ಕನ್ನಡಿಗನ ಮೇಲೆ ಮರಾಠಿಗರ ದಬ್ಬಾಳಿಕೆ ಹೆಚ್ಚಾಗಿದ್ದು, ಇದನ್ನ ಖಂಡಿಸಿ ಮಾ. 22ರಂದು ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಇದಲ್ಲದೇ ಮಹದಾಯಿ, ಕಳಸಾ ಬಂಡೂರಿ ಹಾಗೂ ಮೇಕೆದಾಟು ಯೋಜನೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಜಾಥಾ ನಡೆಸಲಾಗುತ್ತದೆ. ಕನ್ನಡಿಗರಿಗಾಗಿ, ಕನ್ನಡಗರ ಸ್ವಾಭಿಮಾನಕ್ಕಾಗಿ ಈ ಬಂದ್‌ ಅನ್ನು ನಡೆಸಲಾಗುತ್ತಿದೆ. ರಾಜ್ಯ ಬಂದ್​ಗೆ ​ಎಲ್ಲಾ ಸಂಘಟನೆಯವರು ಬೆಂಬಲಿಸಬೇಕು ಎಂದು ವಾಟಾಳ್‌ ನಾಗರಾಜ್‌ ಮನವಿ ಮಾಡಿದರು.