25 ವರ್ಷಗಳ ಸೋಲಿಗೆ ಸೇಡು! ನ್ಯೂಜಿಲೆಂಡ್ ಮಣಿಸಿ 3ನೇ ಬಾರಿಗೆ ‘ಚಾಂಪಿಯನ್’ ಆದ ಭಾರತ! – INDIA BEAT NEW ZEALAND
ನ್ಯೂಜಿಲೆಂಡ್ ವಿರುದ್ಧ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ.
google.com |
Ind vs NZ Final: 12 ವರ್ಷಗಳ ಬಳಿಕ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಮಣಿಸುವ ಮೂಲಕ ಟೀಮ್ ಇಂಡಿಯಾ 2025ರ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿ ವಶಪಡಿಸಿಕೊಂಡಿದೆ.
ಇದಕ್ಕೂ ಮೊದಲು 2002ರಲ್ಲಿ ಶ್ರೀಲಂಕಾ ಜೊತೆ ಜಂಟಿ ವಿಜೇತರಾಗಿದ್ದ ಭಾರತ, 2013ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಟ್ರೋಫಿ ಜಯಿಸಿತ್ತು. ಇದಾದ ಬಳಿಕ 2017ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಫೈನಲ್‌ಗೆ ತಲುಪಿತ್ತಾದರೂ ಕಪ್ ಗೆಲ್ಲಲು ಸಾಧ್ಯವಾಗಿರಲಿಲ್ಲ. ಇದೀಗ ರೋಹಿತ್ ಶರ್ಮಾ ನಾಯಕತ್ವದಲ್ಲಿ ಮತ್ತೊಮ್ಮೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.
Credits : BCCI twitter |
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್ಗೆ 7 ವಿಕೆಟ್ ಕಳೆದುಕೊಂಡು 253 ರನ್ ಕಲೆ ಹಾಕಿತ್ತು. ಈ ಗುರಿಯನ್ನು ಬೆನ್ನಟ್ಟಿದ ಭಾರತ, 6 ವಿಕೆಟ್ ಗಳನ್ನು ಕಳೆದುಕೊಂಡು ಇನ್ನು ಒಂದು ಓವರ್ ಬಾಕಿ ಇರುವಾಗಲೆ ಗೆಲುವಿನ ದಡ ಸೇರಿದೆ. ನಾಯಕ ರೋಹಿತ್ ಶರ್ಮಾ (76) ತಮ್ಮ ಅದ್ಭುತ ಬ್ಯಾಟಿಂಗ್ನಿಂದ ಮಿಂಚಿದರು. ಶ್ರೇಯಸ್ ಅಯ್ಯರ್ (48) ಮತ್ತೊಮ್ಮೆ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಕೊನೆಯಲ್ಲಿ ಕನ್ನಡಿಗ ಕೆ.ಎಲ್. ರಾಹುಲ್ (ಅಜೇಯ 34) ಪಂದ್ಯವನ್ನು ಕೊನೆಗೊಳಿಸಿದರು.
25 ವರ್ಷದ ಸೇಡು ತೀರಿಸಿಕೊಂಡ ಭಾರತ: ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಮಣಿಸಿದ ಭಾರತ 25 ವರ್ಷದ ಹಳೆ ಸೇಡನ್ನು ತೀರಿಸಿಕೊಂಡಿದೆ. ಈ ಹಿಂದೆ 2000ನೇ ಇಸವಿಯಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು ಮಣಿಸಿ ಚಾಂಪಿಯನ್ ಆಗಿತ್ತು. ಇದೀಗ ರೋಹಿತ್ ಪಡೆ ಹಳೆ ಲೆಕ್ಕಚುಕ್ತಾ ಮಾಡಿದೆ.
ಚಿನ್ ಮ್ಯಾನ್ ಆಫ್ ದಿ ಸಿರೀಸ್: ನ್ಯೂಜಿಲೆಂಡ್ನ ಯುವ ಬ್ಯಾಟರ್ ರಚಿನ್ ರವೀಂದ್ರ ಸರಣಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರು ಸರಣಿಯಲ್ಲಿ ಎರಡು ಶತಕ ಬಾರಿಸಿದ ರಚಿನ್ 263 ರನ್ ಗಳಿಸಿದ್ದಾರೆ. ಇದರೊಂದಿಗೆ ಮ್ಯಾನ್ ಆಫ್ ದಿ ಸಿರೀಸ್ ಆಗಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಇದ್ದಾರೆ. ಅವರು 243 ರನ್ ಕಲೆಹಾಕಿದ್ದಾರೆ.
ಹೆಚ್ಚು ವಿಕೆಟ್ ಪಡೆದ ಬೌಲರ್: ಈ ಸರಣಿಯಲ್ಲಿ ನ್ಯೂಜಿಲೆಂಡ್ನ ವೇಗದ ಬೌಲರ್ ಮ್ಯಾಥ್ ಹೆನ್ರಿ 10 ವಿಕೆಟ್ ಪಡೆದು ಹೆಚ್ಚು ವಿಕೆಟ್ ಪಡೆದ ಆಟಗಾರ ಎನಿಸಿಕೊಂಡಿದ್ದಾರೆ. ಎರಡನೇ ಸ್ಥಾನದಲ್ಲಿ ಭಾರತದ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿ ಇದ್ದಾರೆ. ಅವರು 9 ವಿಕೆಟ್ ಪಡೆದಿದ್ದಾರೆ.