Last Updated:
ವಿರಾಟ್ ಕೊಹ್ಲಿ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಲಂಡನ್ನಲ್ಲಿದ್ದಾರೆ. ಈ ಮಧ್ಯೆ, ಅವರ ಫೋಟೋವೊಂದು ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ವಿರಾಟ್ ಕೊಹ್ಲಿ ಸ್ವೆಟ್ಶರ್ಟ್ ಮತ್ತು ಕಪ್ಪು ಕ್ಯಾಪ್ ಧರಿಸಿದ ಅಭಿಮಾನಿಯೊಂದಿಗೆ ಪೋಸ್ ನೀಡಿದ್ದಾರೆ.
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಪ್ರಸ್ತುತ ಕ್ರಿಕೆಟ್ ನಿಂದ ದೂರವಿದ್ದಾರೆ. ಟೆಸ್ಟ್ (Test Cricket) ನಿಂದ ನಿವೃತ್ತಿ ಹೊಂದಿದ್ದರಿಂದ ಅವರು ಇಂಗ್ಲೆಂಡ್ ಪ್ರವಾಸ (England Tour) ಕೈಗೊಂಡಿರಲಿಲ್ಲ. ಆದರೆ ಭಾರತದ ಪ್ರತಿಯೊಬ್ಬ ಕ್ರಿಕೆಟ್ ಅಭಿಮಾನಿಯೂ ಅವರನ್ನು ಈ ಸರಣಿ ವೇಳೆ ಅನೇಕ ಬಾರಿ ನೆನಪಿಸಿಕೊಂಡಿದ್ದಾರೆ. ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ 2-2 ಡ್ರಾದಲ್ಲಿ ಕೊನೆಗೊಂಡಿತು. ಈ ಸರಣಿಯ ನಂತರ, ವಿರಾಟ್ ಕೊಹ್ಲಿಯ ಲೇಟೆಸ್ಟ್ ಫೋಟೋ ಈಗ ವೈರಲ್ ಆಗುತ್ತಿದೆ. ಈ ಫೋಟೋ ನೋಡಿದ ನಂತರ ಅನೇಕ ಜನರು ವಿರಾಟ್ ಕೊಹ್ಲಿ ಗುರುತಿಸಲು ಸಾಧ್ಯವಾಗಷ್ಟು ಬದಲಾಗಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ.
ವಿರಾಟ್ ಕೊಹ್ಲಿ ಪ್ರಸ್ತುತ ತಮ್ಮ ಕುಟುಂಬದೊಂದಿಗೆ ಲಂಡನ್ನಲ್ಲಿದ್ದಾರೆ. ಈ ಮಧ್ಯೆ, ಅವರ ಫೋಟೋವೊಂದು ವೈರಲ್ ಆಗುತ್ತಿದೆ. ಈ ಫೋಟೋದಲ್ಲಿ ವಿರಾಟ್ ಕೊಹ್ಲಿ ಸ್ವೆಟ್ಶರ್ಟ್ ಮತ್ತು ಕಪ್ಪು ಕ್ಯಾಪ್ ಧರಿಸಿದ ಅಭಿಮಾನಿಯೊಂದಿಗೆ ಪೋಸ್ ನೀಡಿದ್ದಾರೆ. ಆದರೆ ಈ ಫೋಟೋದಲ್ಲಿ ಅನೇಕರಿಗೆ ಅವರನ್ನು ಗುರುತಿಸಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣ ವಿರಾಟ್ ಕೊಹ್ಲಿ ಅವರ ಗಡ್ಡ.
ವಿರಾಟ್ ಕೊಹ್ಲಿ ಅವರ ಗಡ್ಡ ಬಿಳಿ ಬಣ್ಣಕ್ಕೆ ತಿರುಗಿರುವುದರಿಂದ ಫೋಟೋದಲ್ಲಿ ತುಂಬಾ ವಯಸ್ಸಾದವರಂತೆ ಕಾಣುತ್ತಿದ್ದಾರೆ. ಈ ಅವತಾರದಲ್ಲಿ ಅವರನ್ನು ಗುರುತಿಸಲು ಸಾಧ್ಯಗುತ್ತಿಲ್ಲ, ಆದರೂ ಈ ಫೋಟೋಗೆ ಪ್ರಸ್ತುತ ಸಾಕಷ್ಟು ಲೈಕ್ಗಳು ಮತ್ತು ಕಾಮೆಂಟ್ಗಳು ಬಂದಿರುವುದು ಮತ್ತೊಂದು ವಿಶೇಷ. ಈ ಫೋಟೋ ವೈರಲ್ ಆಗುವುದಕ್ಕೆ ಒಂದು ತಿಂಗಳ ಮೊದಲು ವಿರಾಟ್ ಕೊಹ್ಲಿ ವಿಂಬಲ್ಡನ್ ಫೈನಲ್ ವೀಕ್ಷಿಸಲು ಆಗಮಿಸಿದ್ದರು. ಈ ಫೋಟೋದಲ್ಲಿ ಅವರ ಗಡ್ಡ ಕಪ್ಪು ಬಣ್ಣದಲ್ಲಿತ್ತು. ಆದರೆ ಸರಿಯಾಗಿ ಒಂದು ತಿಂಗಳ ನಂತರ ವಿರಾಟ್ ಸ್ಥಿತಿ ನೋಡಿ ಅನೇಕರು ಆಘಾತಕ್ಕೊಳಗಾಗಿದ್ದಾರೆ.
ವಿರಾಟ್ ಕೊಹ್ಲಿ ಕಳೆದ ಮೇ ತಿಂಗಳಲ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತರಾದರು, ಹಾಗಾಗಿ ಅವರು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಭಾಗವಾಗಿರಲಿಲ್ಲ. ವಿರಾಟ್ ಕೊಹ್ಲಿ ಕೊನೆಯ ಬಾರಿಗೆ ಐಪಿಎಲ್ನಲ್ಲಿ ಕಾಣಿಸಿಕೊಂಡಿದ್ದರು. ಈ ಬಾರಿ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐಪಿಎಲ್ ಟ್ರೋಫಿಯನ್ನು ಗೆದ್ದುಕೊಂಡಿತು. ಈ ಬಾರಿ ಆರ್ಸಿಬಿ ತಂಡವು 18 ವರ್ಷಗಳ ಪ್ರಶಸ್ತಿ ಬರವನ್ನು ಕೊನೆಗೊಳಿಸಿ ಪ್ರಶಸ್ತಿಯನ್ನು ಗೆದ್ದುಕೊಂಡಿತ್ತು.
2024ರ ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾದರು. ನಂತರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಐಪಿಎಲ್ ಸಮಯದಲ್ಲಿ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದರು. ಸದ್ಯಕ್ಕೆ ವಿರಾಟ್ ಕೊಹ್ಲಿ ಈಗ ಏಕದಿನ ಕ್ರಿಕೆಟ್ನ ಏಕೈಕ ಸ್ವರೂಪದಲ್ಲಿ ಆಡುವುದಾಗಿ ತಿಳಿಸಿದ್ದಾರೆ. ನವೆಂಬರ್ನಲ್ಲಿ ಆಸ್ಟ್ರೇಲಿಯಾ ಪ್ರವಾಸಕ್ಕೆ ಕೈಗೊಳ್ಳುವ ಸಾಧ್ಯತೆ ಇದೆ.
August 09, 2025 7:40 PM IST