ಕರಾವಳಿಯಲ್ಲಿ ಬಿಸಿಗಾಳಿ ಆತಂಕ: ಆರೋಗ್ಯದ ಮೇಲೆ ದುಷ್ಪರಿಣಾಮ- ಮುಂಜಾಗ್ರತೆ ಹೇಗೆ? – HEATWAVES
ಕರಾವಳಿಯಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಹೆಚ್ಚಿದ್ದು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರಿಗೆ ಕೆಲವು ಸಲಹೆಗಳನ್ನು ನೀಡಿದೆ.
ಮಂಗಳೂರು(ದಕ್ಷಿಣ ಕನ್ನಡ): ಕರಾವಳಿ ಭಾಗದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿಸಿ ಗಾಳಿ ಬೀಸುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಕೆ ನೀಡಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಸೆಲ್ಸಿಯಸ್ಗಿಂತಲೂ ಅಧಿಕ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ)ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದ್ದು, ಅಗತ್ಯ ಮುಂಜಾಗರೂಕತೆ ವಹಿಸಬೇಕಾಗಿದೆ.
ಆರೋಗ್ಯಾಧಿಕಾರಿ ಡಾ.ತಿಮ್ಮಯ್ಯ ಹಾಗೂ ಡಾ.ನವೀನ್ ಚಂದ್ರ ಕುಲಾಲ್ ಅವರು ಮಾತನಾಡಿದ್ದಾರೆ. (ETV Bharat)watch video here