Krishna Janmashtami: ವಾರದ ಮೊದಲೇ ಶುರುವಾಗಿದೆ ಕೃಷ್ಣಜನ್ಮಾಷ್ಟಮಿಯ ಸಂಭ್ರಮ, ನೀವೂ ಈ ಸ್ಪರ್ಧೆಗಳಲ್ಲಿ ಭಾಗವಹಿಸಿ! | Dakshina Kannada Program | ದಕ್ಷಿಣ ಕನ್ನಡ

Krishna Janmashtami: ವಾರದ ಮೊದಲೇ ಶುರುವಾಗಿದೆ ಕೃಷ್ಣಜನ್ಮಾಷ್ಟಮಿಯ ಸಂಭ್ರಮ, ನೀವೂ ಈ ಸ್ಪರ್ಧೆಗಳಲ್ಲಿ ಭಾಗವಹಿಸಿ! | Dakshina Kannada Program | ದಕ್ಷಿಣ ಕನ್ನಡ

Last Updated:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪುತ್ತೂರಿನಲ್ಲಿ ಕಬಡ್ಡಿ, ಮಡಿಕೆ ಒಡೆಯುವ ಸ್ಪರ್ಧೆ, ಮುದ್ದು ಕೃಷ್ಣ ಸ್ಪರ್ಧೆ ಮೊದಲಾದ ಕಾರ್ಯಕ್ರಮಗಳು ನಡೆಯುತ್ತಿವೆ.

+

ಇಲ್ಲಿ ವಿಡಿಯೋ ನೋಡಿ

ದಕ್ಷಿಣ ಕನ್ನಡ: ಕೃಷ್ಣ ಜನ್ಮಾಷ್ಟಮಿಯ (Krishna Janmashtami) ಆಚರಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಎಲ್ಲಾ ಕಡೆಗಳಲ್ಲೂ ಜನ್ಮಾಷ್ಟಮಿ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು (Program) ಹಮ್ಮಿಕೊಳ್ಳಲಾಗಿತ್ತದೆ. ಮೊದರು ಕುಡಿಕೆಯನ್ನು ಅತ್ಯಂತ ಸಂಭ್ರಮದಿಂದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಆಚರಿಸಲಾಗುತ್ತಿದ್ದು, ಮೊಸರು ಕುಡಿಕೆ ಹಬ್ಬಕ್ಕೆ (Festival) ವಾರಗಳು ಬಾಕಿ ಇರುವುದಕ್ಕೂ ಮೊದಲೇ ಮೊಸರು ಕುಡಿಕೆ ಪ್ರಯುಕ್ತ ಕಾರ್ಯಕ್ರಮಗಳು ನಡೆಯುತ್ತಿವೆ.

ಕಬ್ಬಡಿ ಪಂದ್ಯ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹಲವು ಸಂಘಸಂಸ್ಥೆಗಳು ಮೊಸರು ಕುಡಿಕೆ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಂಡು ಬರುತ್ತಿದೆ. ಪುತ್ತೂರಿನ ವಿಶ್ವಹಿಂದೂ ಪರಿಷರ್, ಭಜರಂಗದಳ ಮತ್ತು ಮಾತೃಶಕ್ತಿ ಸಂಘಟನೆಗಳು ಜಂಟಿಯಾಗಿ ಲಳೆದ 16 ವರ್ಷಗಳಿಂದ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಮೊಸರು ಕುಡಿಕೆ ಪ್ರಯುಕ್ತ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಆಹ್ವಾನಿತ ಶಾಲೆಗಳ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವನ್ನು ಆಯೋಜಿಸಿದೆ. ಅಲ್ಲದೆ ಸಂಘಟನೆಗಳ ಕಾರ್ಯಕರ್ತರಿಗೆ, ಪುರುಷರ ಮುಕ್ತ ಕಬಡ್ಡಿ ಪಂದ್ಯಾಟವನ್ನು ಇಲ್ಲಿ ನಡೆಸಲಾಗುತ್ತಿದೆ.

ವಿವಿಧ ಸ್ಪರ್ಧೆಗಳು

ಶಾಲಾ ಮಟ್ಟದ ಆಯ್ದ ಬಾಲಕಿಯರ ಕಬಡ್ಡಿ ಪಂದ್ಯಾಟ ಕ್ರೀಡಾ ಪ್ರಿಯರ ಆಕರ್ಷಣೆಯ ಕೇಂದ್ರವೂ ಆಗಿತ್ತು. ಯಾವುದೇ ನುರಿತ ಆಟಗಾರರಿಗೆ ಕಡಿಮೆಯಿಲ್ಲದಂತೆ ಈ ಬಾಲಕಿಯನ್ನು ತಮ್ಮ ಅದ್ಭುತ ಆಟದ ಪ್ರದರ್ಶನವನ್ನು ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಒಟ್ಟು 5 ಬಾಲಕಿಯ ಕಬಡ್ಡಿ ತಂಡ ಈ ಪಂದ್ಯಾಟದಲ್ಲಿ ಭಾಗವಹಿಸಿ, ಕಬಡ್ಡಿಯಲ್ಲಿರುವ ತಮ್ಮ ಸಾಮಥ್ರ್ಯವನ್ನು ತೋರಿಸಿಕೊಟ್ಟಿದ್ದಾರೆ.