ಏಷ್ಯಾ ಕಪ್ 2025 ಟಿ20 ಫಾರ್ಮ್ಯಾಟ್‌ನಲ್ಲಿ ಸೆಪ್ಟೆಂಬರ್ 9 ರಿಂದ 28ರವರೆಗೆ ಯುಎಇಯ ದುಬೈ ಮತ್ತು ಅಬುಧಾಬಿಯಲ್ಲಿ ನಡೆಯಲಿದೆ. ಮುಂದಿನ ವರ್ಷ ಟಿ20 ವಿಶ್ವಕಪ್ ಇರುವುದರಿಂದ ಈ ಟೂರ್ನಮೆಂಟ್‌ನ ಟಿ20 ಫಾರ್ಮ್ಯಾಟ್‌ನಲ್ಲಿ ನಡೆಸಲಾಗುತ್ತಿದೆ. ಈ ಸುದ್ದಿಯಲ್ಲಿ ಟಿ20 ಏಷ್ಯಾಕಪ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಟಾಪ್ 5 ಬೌಲರ್‌ಗಳ ಬಗ್ಗೆ ತಿಳಿದುಕೊಳ್ಳೋಣ. ಈ ಮಹತ್ವದ ಪಟ್ಟಿಯಲ್ಲಿ ಭಾರತದ ಇಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.