Last Updated:
ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಶನಿವಾರ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ 2025 ಸೂಪರ್ ಫೋರ್ ಮೊದಲ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವೆ ಶನಿವಾರ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಏಷ್ಯಾ ಕಪ್ 2025 ಸೂಪರ್ ಫೋರ್ ಮೊದಲ ಪಂದ್ಯ ನಡೆಯುತ್ತಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಚರಿತ್ ಅಸಲಂಕಾ ನೇತೃತ್ವದ ಶ್ರೀಲಂಕಾ ತಂಡವು ನಡೆಯುತ್ತಿರುವ ಟೂರ್ನಮೆಂಟ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದು, ತನ್ನ ಅಜೇಯ ಓಟವನ್ನ ಮುಂದುವರಿಸಲು ಸಿದ್ಧವಾಗಿದೆ. ಮತ್ತೊಂದೆಡೆ, ಲಿಟನ್ ದಾಸ್ ನೇತೃತ್ವದ ಬಾಂಗ್ಲಾದೇಶ ಎರಡು ಪಂದ್ಯಗಳನ್ನು ಗೆದ್ದಿದೆ. ಆದರೆ ಶ್ರೀಲಂಕಾ ವಿರುದ್ಧದ ಲೀಗ್ ಪಂದ್ಯದಲ್ಲಿ ತಂಡ ಸೋಲನ್ನು ಎದುರಿಸಿದ್ದು, ಇದೀಗ ಸೇಡು ತೀರಿಸಿಕೊಳ್ಳುವ ಅವಕಾಶ ಸಿಕ್ಕಿದೆ.
ಬಾಂಗ್ಲಾದೇಶ (ಪ್ಲೇಯಿಂಗ್ XI) – ಸೈಫ್ ಹಸನ್, ತಂಝಿದ್ ಹಸನ್, ತೌಹಿದ್ ಹೃದಯ್, ಲಿಟ್ಟನ್ ದಾಸ್ (C/WK), ಶಮೀಮ್ ಹೊಸೈನ್, ಜಾಕರ್ ಅಲಿ, ಮಹೇದಿ ಹಸನ್ (ನೂರುಲ್ ಹಸನ್ ಬದಲಿಗೆ), ನಸುಮ್ ಅಹ್ಮದ್, ತಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ (ರಿಶಾದ್ ಹೊಸೈನ್ ಬದಲಿಗೆ ),
ಶ್ರೀಲಂಕಾ (ಪ್ಲೇಯಿಂಗ್ XI) – ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (WK), ಕಮಿಲ್ ಮಿಶ್ರಾ, ಕುಸಲ್ ಪೆರೆರಾ, ಚರಿತ್ ಅಸಲಂಕಾ (ನಾಯಕ), ಕಮಿಂದು ಮೆಂಡಿಸ್, ದಸುನ್ ಶನಕ, ವನಿಂದು ಹಸರಂಗ, ದುನಿತ್ ವೆಲ್ಲಲಾಗೆ, ದುಷ್ಮಂತ ಚಮೀರ, ನುವಾನ್ ತುಷಾರ.
September 20, 2025 7:54 PM IST