ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್​ ಚಿಟ್​ ನೀಡಿದ ಲೋಕಾಯುಕ್ತ – MUDA CASE

 

ಮುಡಾ ಹಗರಣದಲ್ಲಿ ಸಾಕ್ಷ್ಯಾಧಾರ ಕೊರತೆ; ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಕ್ಲೀನ್​ ಚಿಟ್​ ನೀಡಿದ ಲೋಕಾಯುಕ್ತ – MUDA CASE

ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್​ಚಿಟ್​ ನೀಡಿದೆ.

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿನ (ಮುಡಾ) ನಿವೇಶನ ಹಂಚಿಕೆ ಅವ್ಯವಹಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕುಟುಂಬಸ್ಥರು ಸೇರಿದಂತೆ ದಾಖಲಾಗಿದ್ದ ಪ್ರಕರಣ ಸಂಬಂಧ ಬಹುತೇಕ ತನಿಖೆ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ನಾಳೆ ನ್ಯಾಯಾಲಯಕ್ಕೆ ತನಿಖಾ ವರದಿ ಸಲ್ಲಿಸಲಿದ್ದಾರೆ.

ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪಾತ್ರವಿಲ್ಲ ಎಂಬುದು ತನಿಖೆಯಲ್ಲಿ ಕಂಡುಬಂದಿದೆ. ಅಲ್ಲದೆ, ಆರೋಪಕ್ಕೆ ಪೂರಕವಾಗಿ ಯಾವುದೇ ಸಾಕ್ಷ್ಯಾಧಾರ ಸಿಕ್ಕಿಲ್ಲ ಎಂದು ತನಿಖಾ ವರದಿಯಲ್ಲಿ ಹೇಳಿದೆ.

ಸಾಕ್ಷಿ ಕೊರತೆ ಹಿನ್ನೆಲೆಯಲ್ಲಿ ಪ್ರಕರಣದ ಬಿ- ರಿಪೋರ್ಟ್ ಸಲ್ಲಿಸಲು ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ. ಗುರುವಾರ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ವರದಿಯನ್ನು ಅಧಿಕಾರಿಗಳು ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ನೀಡಿದ ದೂರಿನ ಆಧಾರದ ಮೇರೆಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.