Last Updated:
ಶ್ರೀಲಂಕಾ ತಂಡವು ಸೂಪರ್ ಫೋರ್ನಿಂದ ಬಹುತೇಕ ಹೊರಬಿದ್ದಿದೆ. ಆದ್ದರಿಂದ ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಫೈನಲ್ ಪ್ರವೇಶದ ಹೋರಾಟ ಮಾತ್ರ ಬಾಕಿ ಉಳಿದುಕೊಂಡಿದೆ. ಇಂದಿನ ಪಂದ್ಯ ಒಂದು ಫೈನಲ್ ತಂಡವನ್ನ ಖಚಿತಪಡಿಸಲಿದೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಏಷ್ಯಾ ಕಪ್ ಟೂರ್ನಿಯ 16ನೇ ಪಂದ್ಯ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಬಾಂಗ್ಲಾದೇಶ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈ ಟೂರ್ನಿಯಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಏಷ್ಯಾಕಪ್ ಟೂರ್ನಿಯಲ್ಲಿ ಭಾರತ ತಂಡ ತನ್ನ ಎಲ್ಲಾ ಪಂದ್ಯಗಳನ್ನು ಗೆದ್ದಿದ್ದರೆ, ಬಾಂಗ್ಲಾದೇಶ ತಂಡ ಒಂದು ಪಂದ್ಯದಲ್ಲಿ ಮಾತ್ರ ಸೋತಿದೆ. ಈ ಪಂದ್ಯದಲ್ಲಿ ಯಾವುದೇ ತಂಡ ಗೆದ್ದರೂ ಅದು ಫೈನಲ್ ಪ್ರವೇಶವನ್ನ ಖಚಿತಪಡಿಸಿಕೊಳ್ಳಲಿವೆ. ಶ್ರೀಲಂಕಾ ತಂಡವು ಸೂಪರ್ ಫೋರ್ನಿಂದ ಬಹುತೇಕ ಹೊರಬಿದ್ದಿದೆ. ಆದ್ದರಿಂದ ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನ ನಡುವಿನ ಫೈನಲ್ ಪ್ರವೇಶದ ಹೋರಾಟ ಮಾತ್ರ ಬಾಕಿ ಉಳಿದುಕೊಂಡಿದೆ.
ಭಾರತ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ಸೂರ್ಯಕುಮಾರ್ ಯಾದವ್(ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್(ವಿಕೀ), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ
ಬಾಂಗ್ಲಾದೇಶ (ಪ್ಲೇಯಿಂಗ್ XI): ಸೈಫ್ ಹಸನ್, ತಾಂಜಿದ್ ಹಸನ್ ತಮೀಮ್, ಪರ್ವೇಜ್ ಹೊಸೈನ್ ಎಮನ್, ತೌಹಿದ್ ಹೃದಯ್, ಶಮೀಮ್ ಹೊಸೈನ್, ಜೇಕರ್ ಅಲಿ (w/c), ಮೊಹಮ್ಮದ್ ಸೈಫುದ್ದೀನ್, ರಿಶಾದ್ ಹೊಸೈನ್, ತಾಂಜಿದ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್
September 24, 2025 7:43 PM IST