Last Updated:
ಎರಡು ಬಾರಿ ವಿಶ್ವ ಚಾಂಪಿಯನ್ ಆದ ವೇಳೆ ಇಂಗ್ಲೆಂಡ್ ತಂಡದ ಪರ ಮಿಂಚಿದ ಸ್ಟಾರ್ ಆಲ್ರೌಂಡರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ.
ಭಾನುವಾರ ನಡೆದ ಏಷ್ಯಾಕಪ್ 2025 ರ ಫೈನಲ್ (Asia Cup Final 2025) ಪಂದ್ಯದಲ್ಲಿ ಬದ್ಧ ವೈರಿ ಪಾಕಿಸ್ತಾನವನ್ನು ಸೋಲಿಸಿ ಭಾರತ (India vs Pakistan) ಚಾಂಪಿಯನ್ ಆಗಿತ್ತು. ಭಾರತ ಟ್ರೋಫಿ ಗೆದ್ದ ಸಂತಸದಲ್ಲಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಕಹಿ ಸುದ್ದಿ ತಲುಪಿದೆ. ಎರಡು ಬಾರಿ ವಿಶ್ವ ಚಾಂಪಿಯನ್ ಆದ ವೇಳೆ ಇಂಗ್ಲೆಂಡ್ (England) ತಂಡದ ಪರ ಮಿಂಚಿದ ಸ್ಟಾರ್ ಆಲ್ರೌಂಡರ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ (International cricket) ಗುಡ್ ಬೈ (Retirement) ಹೇಳಿದ್ದಾರೆ.
ಇಂಗ್ಲೆಂಡ್ ತಂಡದ ಬೌಲಿಂಗ್ ಆಲ್ರೌಂಡರ್ ಕ್ರಿಸ್ ವೋಕ್ಸ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆ. 36 ವರ್ಷದ ಕ್ರಿಸ್ ವೋಕ್ಸ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವುದು ಅಭಿಮಾನಿಗಳಿಗೆ ಬೇಸರ ತರಿಸಿದೆ.
ಕ್ರಿಸ್ ವೋಕ್ಸ್ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಎಲ್ಲಾ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳಿದ್ದಾರೆ. ಕ್ರಿಸ್ ವೋಕ್ಸ್ ಕೊನೆಯ ಬಾರಿಗೆ ಭಾರತ ವಿರುದ್ಧದ ಓವಲ್ ಟೆಸ್ಟ್ ಪಂದ್ಯದಲ್ಲಿ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಈ ವೇಳೆ ಅವರು ಭುಜದ ಗಾಯಕ್ಕೆ ತುತ್ತಾಗಿದ್ದರು. ಬಳಿಕ ನೋವಿನಲ್ಲೂ ಬ್ಯಾಟಿಂಗ್ ಮಾಡಿ ಎಲ್ಲರ ಗಮನ ಸೆಳೆದಿದ್ದರು.
ಆ ಕ್ಷಣ ಬಂದಿದೆ, ನಾನು ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಲು ಸರಿಯಾದ ಸಮಯ ಎಂದು ನಿರ್ಧರಿಸಿದ್ದೇನೆ. ಇಂಗ್ಲೆಂಡ್ ಪರ ಆಡುವುದು ನನ್ನ ಕನಸಾಗಿತ್ತು. ಆ ಕನಸುಗಳನ್ನು ನನಸಾಗಿಸಲು ನನಗೆ ಅವಕಾಶ ಸಿಕ್ಕಿದ್ದು ತುಂಬಾ ಅದೃಷ್ಟ ಅಂದುಕೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಕೌಂಟಿ ಕ್ರಿಕೆಟ್ನಲ್ಲಿ ಆಡುವುದು ಮತ್ತು ಹೆಚ್ಚಿನ ಫ್ರಾಂಚೈಸಿ ತಂಡಗಳ ಪರ ಆಡುವ ಅವಕಾಶಗಳನ್ನು ಹುಡುವುದನ್ನು ನಾನು ಎದುರು ನೋಡುತ್ತಿದ್ದೇನೆ ಎಂದು ವೋಕ್ಸ್ ಹೇಳಿದ್ದಾರೆ.
ಕ್ರಿಸ್ ವೋಕ್ಸ್ 2011 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಟಿ20 ಪಂದ್ಯವನ್ನು ಆಡುವ ಮೂಲಕ ಇಂಗ್ಲೆಂಡ್ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದರು. ಆದರೆ ವಿಶೇಷವಾಗಿ ವೋಕ್ಸ್ ತಮ್ಮ ತವರಿನ ಸ್ವಿಂಗ್ ಪಿಚ್ಗಳಲ್ಲಿ ರೆಡ್ ಬಾಲ್ ಬೌಲರ್ ಆಗಿ ಮಿಂಚಿದರು. ಇಂಗ್ಲೆಂಡ್ ಪರ 12 ವರ್ಷಗಳಲ್ಲಿ 62 ಟೆಸ್ಟ್ ಪಂದ್ಯಗಳನ್ನು ಆಡಿರುವ ವೋಕ್ಸ್ 29.61 ಸರಾಸರಿಯಲ್ಲಿ 192 ವಿಕೆಟ್ಗಳನ್ನು ಕಬಳಿಸಿದ್ದು, ಒಂದು ಶತಕ ಮತ್ತು ಏಳು ಅರ್ಧಶತಕಗಳು ಸೇರಿದಂತೆ 2034 ರನ್ಗಳನ್ನು ಕಲೆ ಹಾಕಿದ್ದಾರೆ.
ತವರಿನಲ್ಲಿ ನಡೆದ ವಿಶ್ವಕಪ್ 2019 ರಲ್ಲಿ ಇಂಗ್ಲೆಂಡ್ ತಂಡದ ಭಾಗವಾಗಿದ್ದ ವೋಕ್ಸ್, ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ನಲ್ಲಿ ಮೂರು ಸೇರಿದಂತೆ 11 ಪಂದ್ಯಗಳಲ್ಲಿ 16 ವಿಕೆಟ್ಗಳನ್ನು ಕಬಳಿಸಿದರು. ಸೂಪರ್ ಓವರ್ನಲ್ಲಿ ಟೈ ಆದ ನಂತರ ಬೌಂಡರಿ ಎಣಿಕೆಯ ಆಧಾರದ ಮೇಲೆ ನ್ಯೂಜಿಲೆಂಡ್ ವಿರುದ್ ಇಂಗ್ಲೆಂಡ್ ತಂಡವು ಜಯಗಳಿಸಿತ್ತು. ಈ ಫೈನಲ್ ಪಂದ್ಯದಲ್ಲಿ ವೋಕ್ಸ್ ಮೂರು ವಿಕೆಟ್ಗಳನ್ನು ಉರುಳಿಸಿ ತಂಡದ ಗೆಲುವಿಗೆ ಕಾರಣವಾಗಿದ್ದರು. ಬಳಿಕ ಅವರು 2022 ರಲ್ಲಿ ಟಿ20 ವಿಶ್ವಕಪ್ ಗೆದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದರು .
September 29, 2025 7:19 PM IST