IND vs AUS: ಶುಭ್​ಮನ್ ಗಿಲ್​ಗೆ ಭಾರತ ಏಕದಿನ ತಂಡದ ನಾಯಕತ್ವ ಒಲಿದಿದ್ದೇಗೆ? ಇಲ್ಲಿದೆ ಪ್ರಮುಖ ಕಾರಣಗಳು / What are the reasons for appointing Shubman Gill instead of Rohit Sharma as India ODI captain for Australia tour | ಕ್ರೀಡೆ

IND vs AUS: ಶುಭ್​ಮನ್ ಗಿಲ್​ಗೆ ಭಾರತ ಏಕದಿನ ತಂಡದ ನಾಯಕತ್ವ ಒಲಿದಿದ್ದೇಗೆ? ಇಲ್ಲಿದೆ ಪ್ರಮುಖ ಕಾರಣಗಳು / What are the reasons for appointing Shubman Gill instead of Rohit Sharma as India ODI captain for Australia tour | ಕ್ರೀಡೆ

Last Updated:

ಆಸ್ಟ್ರೇಲಿಯಾ ಪ್ರವಾಸಕ್ಕೆ ಭಾರತ ಏಕದಿನ ತಂಡದ ನಾಯಕನ್ನಾಗಿ ರೋಹಿತ್ ಶರ್ಮಾ ಬದಲಿಗೆ ಶುಭಮನ್ ಗಿಲ್ ಅವರನ್ನು ನೇಮಿಸಲಾಗಿದೆ. ಇದಕ್ಕೆ ಪ್ರಮುಖ ಕಾರಣಗಳು ಇಲ್ಲಿವೆ.

Shubman GillShubman Gill
Shubman Gill

ರೋಹಿತ್ ಶರ್ಮಾ (Rohit Sharma) ಮತ್ತು ವಿರಾಟ್ ಕೊಹ್ಲಿ (Virat kohli) ಅವರನ್ನು ಮೈದಾನದಲ್ಲಿ ನೋಡಲು ಭಾರತೀಯ ಅಭಿಮಾನಿಗಳು ಕಾತರರಾಗಿದ್ದರು. ಐಪಿಎಲ್ (IPL) ಮಧ್ಯದಲ್ಲಿ ಇಬ್ಬರೂ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದರು. ಆದರೆ ಈಗ ಕಾಯುವಿಕೆ ಮುಗಿದ ನಂತರ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಭಿಮಾನಿಗಳಿಗೆ ಮತ್ತೊಂದು ಕಹಿ ಸುದ್ದಿ ನೀಡಿದೆ. ಆಸ್ಟ್ರೇಲಿಯಾ ಪ್ರವಾಸ (Australia tour)ಕ್ಕಾಗಿ ಭಾರತ ತಂಡವನ್ನು (Team India) ಘೋಷಿಸಿದೆ. ಈ ತಂಡ ಘೋಷಿಸುವಾಗ ಬಿಸಿಸಿಐ ಕೆಲವು ಮಹತ್ವದ ನಿರ್ಧಾರಗಳೊಂದಿಗೆ ಎಲ್ಲರನ್ನು ಅಚ್ಚರಿಗೊಳಿಸಿದೆ. ಟೆಸ್ಟ್ ಕ್ರಿಕೆಟ್ ನಂತರ ಶುಭಮನ್ ಗಿಲ್ (Shubman Gill) ಅವರನ್ನು ಏಕದಿನ ತಂಡದ ನಾಯಕನನ್ನಾಗಿ ನೇಮಿಸಲಾಗಿದೆ. ರೋಹಿತ್ ಶರ್ಮಾ ಏಕದಿನ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿಲ್ಲವಾದರೂ, ಅವರು ನಾಯಕತ್ವವನ್ನು ಕಳೆದುಕೊಂಡಿರುವ ಅಭಿಮಾನಿಗಳಿಗೆ ಅಚ್ಚರಿಯನ್ನುಂಟುಮಾಡಿದೆ.

ಪ್ರಸ್ತುತ ಭಾರತ ತಂಡದ ಪರ ಶುಭಮನ್ ಗಿಲ್ ಅದ್ಭುತ ಪ್ರದರ್ಶನ ನೀಡುತ್ತಿದ್ದಾರೆ. ಇತ್ತೀಚೆಗೆ ಇಂಗ್ಲೆಂಡ್ ಪ್ರವಾಸದ ಟೆಸ್ಟ್ ಸರಣಿಯಲ್ಲಿ ಶುಭಮನ್ ಗಿಲ್ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶನದ ಜೊತೆಗೆ ಅಚ್ಚುಕಟ್ಟಾಗಿ ನಾಯಕತ್ವವನ್ನು ನಿರ್ವಹಿಸಿದ್ದರು. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯನ್ನು ಸಮಬಲ ಮಾಡುವಲ್ಲಿ ಗಿಲ್ ಯಶಸ್ವಿಯಾಗಿದ್ದರು.

ಶುಭಮನ್ ಗಿಲ್ ಅವರನ್ನು ಟೀಮ್ ಇಂಡಿಯಾದ ಮುಂದಿನ ಸೂಪರ್ ಸ್ಟಾರ್ ಎಂದು ಪರಿಗಣಿಸಲಾಗಿದೆ. ಇದಕ್ಕೆ ಅವರು ತಮ್ಮ ಫಾರ್ಮ್ ಮೂಲಕ ಭರವಸೆ ಮೂಡಿಸಿದ್ದಾರೆ. ಈ ನಿಟ್ಟಿನಲ್ಲಿ ರೋಹಿತ್ ಶರ್ಮಾ ಅವರನ್ನು ಶುಭಮನ್ ಗಿಲ್ ಹಿಂದಿಕ್ಕಿ ನಾಯಕತ್ವ ಗಿಟ್ಟಿಸಿಕೊಂಡಿದ್ದಾರೆ.

ಪಟ್ಟ ಕಳೆದುಕೊಂಡ ರೋಹಿತ್ ಶರ್ಮಾ

ರೋಹಿತ್ ಶರ್ಮಾ ಡಿಸೆಂಬರ್ 2021 ರಿಂದ ಭಾರತ ಏಕದಿನ ತಂಡಕ್ಕೆ ನಾಯಕರಾಗಿದ್ದರು. ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ತಂಡದ ನಾಯಕತ್ವ ವಹಿಸಿದ್ದರು. ಟೂರ್ನಿಯುದ್ದಕ್ಕೂ ಅದ್ಭುತ ಪ್ರದರ್ಶನ ನೀಡಿದ ಭಾರತ ಫೈನಲ್ ತಲುಪಿತು. ಭಾರತ ತಂಡವು ಸತತ 10 ಪಂದ್ಯಗಳನ್ನು ಗೆದ್ದಿತ್ತು. ಆದರೆ, ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸೋಲು ಕಂಡಿತ್ತು. ಈ ವರ್ಷದ ಆರಂಭದಲ್ಲಿ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದು ಬೀಗಿತ್ತು. ಇದಕ್ಕೂ ಮುನ್ನ ಭಾರತ ತಂಡ 2024 ರ ಟಿ20 ವಿಶ್ವಕಪ್ ಅನ್ನು ಒಂದೇ ಒಂದು ಪಂದ್ಯವನ್ನು ಸೋಲದೆ ಗೆದ್ದುಕೊಂಡಿತು.

ರೋಹಿತ್ ಶರ್ಮಾ ಟೆಸ್ಟ್ ಮತ್ತು ಟಿ20 ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದು, ಏಕದಿನ ಮಾದರಿಯಲ್ಲಿ ಆಡಲು ಸಜ್ಜಾಗಿದ್ದಾರೆ, ಇಂತಹ ಸಂದರ್ಭದಲ್ಲಿ ರೋಹಿತ್ ಶರ್ಮಾ 2027 ರ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿದ್ದಾರೆ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ, ಬಿಸಿಸಿಐ ಆಯ್ಕೆ ಸಮಿತಿ ರೋಹಿತ್ ಶರ್ಮಾ ಅಭಿಮಾನಿಗಳಿಗೆ ಶಾಕ್ ನೀಡಿದೆ.

ಶುಭಮನ್ ಗಿಲ್ ಆಯ್ಕೆ

ಏಕದಿನ ವಿಶ್ವಕಪ್ 2027 ರ ವೇಳೆಗೆ ರೋಹಿತ್ ಶರ್ಮಾ ಅವರಿಗೆ 40 ವರ್ಷ ವಯಸ್ಸು ಆಗಲಿದೆ. ಇಂತಹ ಸಂದರ್ಭದಲ್ಲಿ ಭಾರತ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸುವುದರ ಜೊತೆಗೆ ಫಾರ್ಮ್ ಉಳಿಸಿಕೊಳ್ಳುವುದು ದೊಡ್ಡ ಸವಾಲಾಗಬಹುದು. ಹೀಗಾಗಿ ರೋಹಿತ್ ಶರ್ಮಾ ಅವರಿಗೆ ಕೆಲಸ ಹೊರೆ ಕಡಿಮೆ ಮಾಡಲು ನಾಯಕನ ಬದಲಾವಣೆ ಮಾಡಲಾಗಿದೆ. ಇದಲ್ಲದೆ, 2027 ರ ವಿಶ್ವಕಪ್ ಟೂರ್ನಿಯ ಸಮೀಪದಲ್ಲಿ ಹೊಸ ನಾಯಕನನ್ನು ಘೋಷಣೆ ಮಾಡಿದರೆ,ತಂಡದ ಮೇಲೆ ಪರಿಣಾಮ ಬೀಳಬಹುದು ಎಂದು ರೋಹಿತ್ ಶರ್ಮಾ ಬದಲಿಗೆ ಶುಭಮನ್ ಗಿಲ್ ಅವರನ್ನು ನಾಯಕನ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ.

ಬಿಸಿಸಿಐ ಅಯ್ಕೆ ಸಮಿತಿ ನಿರ್ಧಾರ

ಬಿಸಿಸಿಐ ಟೀಮ್ ಇಂಡಿಯಾ ಆಯ್ಕೆ ಸಮಿತಿ 2027 ರ ಏಕದಿನ ವಿಶ್ವಕಪ್‌ನಲ್ಲಿ ಭಾರತ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಬೇಕೆಂದು ಬಯಸಿದೆ. ಏಕದಿನ ಕ್ರಿಕೆಟ್‌ನಲ್ಲಿ ನಾಯಕತ್ವ ಬದಲಾವಣೆಯ ಕುರಿತು ಹೆಡ್​ಕೋಚ್ ಗೌತಮ್ ಗಂಭೀರ್, ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಅವರೊಂದಿಗೆ ಬಿಸಿಸಿಐ ಆಯ್ಕೆ ಸಮಿತಿ ಚರ್ಚಿಸಿದ್ದಾರೆ. 38 ವರ್ಷ ವಯಸ್ಸಿನ ರೋಹಿತ್ ಶರ್ಮಾಗಿಂತ 10 ವರ್ಷ ಕಿರಿಯರಾದ ಶುಭಮನ್ ಗಿಲ್ ಅವರಿಗೆ ನಾಯಕತ್ವ ನೀಡಿರುವುದು ಪ್ರಮುಖ ಬದಲಾವಣೆಯಾಗಿದೆ. ಸದ್ಯಕ್ಕೆ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಏಕದಿನ ತಂಡದಲ್ಲಿ ಉಳಿದಿದ್ದಾರೆ.