IND vs AUS: ಕಮ್ಮಿನ್ಸ್ ಔಟ್, ಸ್ಟಾರ್ಕ್ ಇನ್…ಭಾರತ ಎದುರಿಸಲಿರುವ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ / Australia announces squad for ODI and T20 series against India | ಕ್ರೀಡೆ

IND vs AUS: ಕಮ್ಮಿನ್ಸ್ ಔಟ್, ಸ್ಟಾರ್ಕ್ ಇನ್…ಭಾರತ ಎದುರಿಸಲಿರುವ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ / Australia announces squad for ODI and T20 series against India | ಕ್ರೀಡೆ

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಅಕ್ಟೋಬರ್ 19 ರಂದು ಏಕದಿನ ಸರಣಿ ಪ್ರಾರಂಭವಾಗಲಿದೆ. ಈ ಏಕದಿನ ಸರಣಿ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ಮ್ಯಾಥ್ಯೂ ಶಾರ್ಟ್ ಮತ್ತು ಮಿಚೆಲ್ ಓವನ್ ಸಹ ತಂಡಕ್ಕೆ ಮರಳಿದ್ದಾರೆ. ಜೊತೆಗೆ ಮ್ಯಾಥ್ಯೂ ರೆನ್‌ಶಾ ಅವರನ್ನು ಸೇರಿಸಿಕೊಳ್ಳಲಾಗಿದೆ.

ಟಿ20 ವಿಶ್ವಕಪ್ 2026 ರ ಪೂರ್ವಸಿದ್ಧತಾ ಕ್ರಮವಾಗಿ, ಅಕ್ಟೋಬರ್ 29 ರಿಂದ ನವೆಂಬರ್ 8 ರವರೆಗೆ ನಡೆಯಲಿರುವ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಎರಡು ಪಂದ್ಯಗಳಿಗೆ ಕ್ರಿಕೆಟ್ ಆಸ್ಟ್ರೇಲಿಯಾ ತಂಡವನ್ನು ಪ್ರಕಟಿಸಿದೆ. ಆಶಸ್ ಸರಣಿಗಾಗಿ ತಮ್ಮ ಕೆಲಸದ ಹೊರೆ ನಿರ್ವಹಿಸಲು ದಕ್ಷಿಣ ಆಫ್ರಿಕಾ ಸರಣಿಯನ್ನು ತಪ್ಪಿಸಿಕೊಂಡಿದ್ದ ಮಿಚೆಲ್ ಸ್ಟಾರ್ಕ್, ಈ ವರ್ಷ ಮೊದಲ ಬಾರಿಗೆ ಮೈದಾನಕ್ಕೆ ಇಳಿಯಲಿದ್ದಾರೆ. ಅವರು ಈಗಾಗಲೇ ಟಿ20 ಕ್ರಿಕೆಟ್​ನಿಂದ ನಿವೃತ್ತರಾಗಿದ್ದಾರೆ.

ಮೊದಲ ಪಂದ್ಯಕ್ಕಿಲ್ಲ ಅಲೆಕ್ಸ್ ಕ್ಯಾರಿ

ಏಕದಿನ ತಂಡದಿಂದ ಕೈಬಿಡಲಾದ ಆಟಗಾರರಲ್ಲಿ ಮಾರ್ನಸ್ ಲ್ಯಾಬುಸ್ಚಾಗ್ನೆ, ಸೀನ್ ಅಬಾಟ್, ಆರನ್ ಹಾರ್ಡಿ ಮತ್ತು ಮ್ಯಾಥ್ಯೂ ಕುಹ್ನೆಮನ್ ಸೇರಿದ್ದಾರೆ. ಈ ಆಟಗಾರರು ಆಗಸ್ಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾದ ಕೊನೆಯ ಏಕದಿನ ಪಂದ್ಯದ ಭಾಗವಾಗಿದ್ದರು. ಅಲೆಕ್ಸ್ ಕ್ಯಾರಿ ಪರ್ತ್‌ನಲ್ಲಿ ನಡೆಯಲಿರುವ ಮೊದಲ ಏಕದಿನ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಅಲೆಕ್ಸ್ ಕ್ಯಾರಿ ಕ್ವೀನ್ಸ್‌ಲ್ಯಾಂಡ್ ವಿರುದ್ಧದ ಶೆಫೀಲ್ಡ್ ಶೀಲ್ಡ್‌ನಲ್ಲಿ ದಕ್ಷಿಣ ಆಸ್ಟ್ರೇಲಿಯಾದ ರೆಡ್‌ಬ್ಯಾಕ್ಸ್ ಪರ ಆಡಲಿದ್ದಾರೆ. ಅವರು ಕೊನೆಯ ಎರಡು ಏಕದಿನ ಪಂದ್ಯಗಳಿಗೆ ಮರಳಲಿದ್ದಾರೆ. ಆಸ್ಟ್ರೇಲಿಯಾ ‘ಎ’ ಮತ್ತು ಕ್ವೀನ್ಸ್‌ಲ್ಯಾಂಡ್ ಪರ ಅದ್ಭುತ ಪ್ರದರ್ಶನದ ಮೇಲೆ 2022 ರ ನಂತರ ಮೊದಲ ಬಾರಿಗೆ ಏಕದಿನ ತಂಡಕ್ಕೆ ರೆನ್‌ಶಾ ಮರಳಿದ್ದಾರೆ.

ತಂಡದಲ್ಲಿ ಉಳಿದ ಸ್ಟಾರ್ ಆಟಗಾರರು

ಆಸ್ಟ್ರೇಲಿಯಾ ತಂಡದ ಉಳಿದ ಆಟಗಾರರಲ್ಲಿ ಟ್ರಾವಿಸ್ ಹೆಡ್ ಮತ್ತು ಜೋಶ್ ಇಂಗ್ಲಿಸ್, ಕೂಪರ್ ಕಾನೊಲಿ, ಕ್ಯಾಮರೂನ್ ಗ್ರೀನ್ ಮತ್ತು ನಾಯಕ ಮಿಚೆಲ್ ಮಾರ್ಷ್ ಸೇರಿದ್ದಾರೆ. ವೇಗದ ಬೌಲರ್‌ ವಿಭಾಗದಲ್ಲಿ ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಜಲ್‌ವುಡ್, ನಾಥನ್ ಎಲ್ಲಿಸ್, ಕ್ಸೇವಿಯರ್ ಬಾರ್ಟ್ಲೆಟ್ ಮತ್ತು ಬೆನ್ ಡ್ವಾರ್ಶುಯಿಸ್ ಇದ್ದಾರೆ. ಬಾರ್ಟ್ಲೆಟ್ ಮತ್ತು ಡ್ವಾರ್ಶುಯಿಸ್ ಕೂಡ ಬ್ಯಾಟಿಂಗ್‌ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ. ಆಡಮ್ ಜಂಪಾ ತಂಡದ ಏಕೈಕ ಸ್ಪಿನ್ನರ್ ಆಗಿದ್ದಾರೆ.

ಮ್ಯಾಕ್ಸ್‌ವೆಲ್ ಹೊರಗೆ

ಜೋಶ್ ಇಂಗ್ಲಿಸ್ ಮತ್ತು ನಾಥನ್ ಎಲ್ಲಿಸ್ ಟಿ20 ತಂಡಕ್ಕೆ ಮರಳಿದ್ದಾರೆ. ಇಂಗ್ಲಿಸ್ ಕಾಲಿನ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಆದರೆ ಎಲಿಸ್ ತನ್ನ ಮೊದಲ ಮಗುವಿನ ಜನನದ ಕಾರಣ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ತಪ್ಪಿಸಿಕೊಂಡಿದ್ದರು. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಮೊದಲು ಗ್ಲೆನ್ ಮ್ಯಾಕ್ಸ್‌ವೆಲ್ ನೆಟ್ಸ್‌ನಲ್ಲಿ ಗಾಯದಿಂದ ಬಳಲುತ್ತಿದ್ದರು. ಪರಿಣಾಮ ಭಾರತ ವಿರುದ್ಧದ ಸರಣಿಗೆ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಜೋಶ್ ಫಿಲಿಪ್ ಮತ್ತು ಅಲೆಕ್ಸ್ ಕ್ಯಾರಿ ಹಿಂದಿನ ಟಿ20 ಸರಣಿಯಿಂದ ಹೊರಗುಳಿದಿದ್ದರು. ಆದ್ದರಿಂದ, ಇಂಗ್ಲಿಷ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ಆಸ್ಟ್ರೇಲಿಯಾದ ಏಕದಿನ ತಂಡ

ಮಿಚೆಲ್ ಮಾರ್ಷ್ (ನಾಯಕ), ಕ್ಸೇವಿಯರ್ ಬಾರ್ಟ್ಲೆಟ್, ಅಲೆಕ್ಸ್ ಕ್ಯಾರಿ, ಕೂಪರ್ ಕಾನೊಲಿ, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮಿಚೆಲ್ ಓವನ್, ಮ್ಯಾಥ್ಯೂ ರೆನ್‌ಶಾ, ಮ್ಯಾಥ್ಯೂ ಶಾರ್ಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ.

ಆಸ್ಟ್ರೇಲಿಯಾ ಟಿ20 ತಂಡ (ಮೊದಲೆರಡು ಪಂದ್ಯಗಳು)

ಮಿಚೆಲ್ ಮಾರ್ಷ್ (ನಾಯಕ), ಸೀನ್ ಅಬಾಟ್, ಕ್ಸೇವಿಯರ್ ಬಾರ್ಟ್ಲೆಟ್, ಟಿಮ್ ಡೇವಿಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಮ್ಯಾಥ್ಯೂ ಕುಹ್ನೆಮನ್, ಮಿಚೆಲ್ ಓವನ್, ಮ್ಯಾಥ್ಯೂ ಶಾರ್ಟ್, ಮಾರ್ಕಸ್ ಸ್ಟೊಯಿನಿಸ್, ಆಡಮ್ ಜಂಪಾ.