Last Updated:
ಮೊದಲ ಪಂದ್ಯವನ್ನ ಹೀನಾಯವಾಗಿ ಸೋತ ಭಾರತ ಯಾವುದೇ ಬದಲಾವಣೆ ಇಲ್ಲದೆ 2ನೇ ಪಂದ್ಯದಲ್ಲಿ ಮತ್ತೆ ಕಣಕ್ಕಿಳಿದಿದೆ. ಪರ್ತ್ನಲ್ಲಿ ಆಡಿದ ಅದೇ ತಂಡದೊಂದಿಗೆ ಮುಂದುವರಿಸಿದ್ದು, ಸ್ಪೆಷಲಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಮತ್ತೊಮ್ಮೆ ಬೆಂಚ್ಗೆ ಸೀಮಿತಗೊಳಿಸಿದೆ.
ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳು ಅಡಿಲೇಡ್ನಲ್ಲಿ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದ್ದು, ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ತಂಡದಲ್ಲಿ ಆಸ್ಟ್ರೇಲಿಯಾ ಎರಡು ಬದಲಾವಣೆಗಳನ್ನು ಮಾಡಿಕೊಂಡಿದೆ. ಸ್ಟಾರ್ ಆಟಗಾರರಾದ ಅಲೆಕ್ಸ್ ಕ್ಯಾರಿ ಮತ್ತು ಆಡಮ್ ಜಂಪಾ ಪ್ಲೇಯಿಂಗ್ ಇಲೆವೆನ್ ಸೇರಿಕೊಂಡಿದ್ದಾರೆ. ಅಚ್ಚರಿ ಎಂದರೆ ಮೊದಲ ಪಂದ್ಯವನ್ನ ಹೀನಾಯವಾಗಿ ಸೋತ ಭಾರತ ಯಾವುದೇ ಬದಲಾವಣೆ ಇಲ್ಲದೆ ಮತ್ತೆ ಕಣಕ್ಕಿಳಿದಿದೆ. ಪರ್ತ್ನಲ್ಲಿ ಆಡಿದ ಅದೇ ತಂಡದೊಂದಿಗೆ ಮುಂದುವರಿಸಿದ್ದು, ಸ್ಪೆಷಲಿಸ್ಟ್ ಸ್ಪಿನ್ನರ್ ಕುಲದೀಪ್ ಯಾದವ್ ಅವರನ್ನು ಮತ್ತೊಮ್ಮೆ ಬೆಂಚ್ಗೆ ಸೀಮಿತಗೊಳಿಸಿದೆ.
ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿ, ಮಿಚೆಲ್ ಓವನ್, ಕ್ಸೇವಿಯರ್ ಬಾರ್ಟ್ಲೆಟ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹೆಜಲ್ವುಡ್
ಭಾರತ: ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್
ಭಾರತ ಅಡಿಲೇಡ್ ಓವಲ್ನಲ್ಲಿ 15 ODI ಪಂದ್ಯಗಳನ್ನು ಆಡಿವೆ. ಈ ಪಂದ್ಯಗಳಲ್ಲಿ ಭಾರತ 9 ಪಂದ್ಯಗಳನ್ನು ಗೆದ್ದು 6 ಪಂದ್ಯಗಳನ್ನು ಸೋತಿದೆ, ಒಂದು ಪಂದ್ಯ ಟೈನಲ್ಲಿ ಕೊನೆಗೊಂಡಿದೆ. ಈ ಸ್ಥಳದಲ್ಲಿ ಭಾರತದ ಗೆಲುವಿನ ಶೇಕಡಾವಾರು 60.00. ಆಸ್ಟ್ರೆಲಿಯಾ ವಿರುದ್ಧ 6 ಪಂದ್ಯಗಳನ್ನಾಡಿದ್ದು, 4ರಲ್ಲಿ ಸೋಲು ಕಂಡರೆ 2 ರಲ್ಲಿ ಗೆಲುವು ಸಾಧಿಸಿದೆ. ಕಳೆದ ಎರಡು ಪಂದ್ಯಗಳಲ್ಲಿ ಈ ಮೈದಾನದಲ್ಲಿ ಆಸೀಸ್ ವಿರುದ್ಧ ಭಾರತ ಗೆಲುವು ಸಾಧಿಸಿದೆ.
October 23, 2025 8:58 AM IST
IND vs AUS: 2ನೇ ಪಂದ್ಯದಲ್ಲೂ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿದ ಆಸೀಸ್! 2ನೇ ಪಂದ್ಯದಲ್ಲೂ ಸ್ಟಾರ್ ಬೌಲರ್ ಹೊರಗಿಟ್ಟ ಟೀಮ್ ಇಂಡಿಯಾ