ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ! ಭಾರತ ತಂಡದಲ್ಲಿ ಕನ್ನಡಿಗ ಸೇರಿ ಇಬ್ಬರಿಗೆ ಚಾನ್ಸ್​ | australia won the toss and elected bat first in 3rd odi match india made two changes | ಕ್ರೀಡೆ

ಟಾಸ್​ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಆಸ್ಟ್ರೇಲಿಯಾ! ಭಾರತ ತಂಡದಲ್ಲಿ ಕನ್ನಡಿಗ ಸೇರಿ ಇಬ್ಬರಿಗೆ ಚಾನ್ಸ್​ | australia won the toss and elected bat first in 3rd odi match india made two changes | ಕ್ರೀಡೆ

Last Updated:

ಈಗಾಗಲೇ ಸರಣಿ ಗೆದ್ದಿರುವ ಆಸ್ಟ್ರೇಲಿಯಾ ಇಂದು ಬ್ಯಾಟಿಂಗ್ ಪರೀಕ್ಷೆ ನಡೆಸಲು ಸಿದ್ಧವಾಗಿದೆ. ಕಳೆದ ಎರಡು ಪಂದ್ಯಗಳಲ್ಲಿ ಟಾಸ್ ಗೆದ್ದು ಚೇಸಿಂಗ್ ಮಾಡಿ ಸಕ್ಸಸ್ ಆಗಿತ್ತು.

ind vs aus
ind vs aus

3 ಪಂದ್ಯಗಳ ಏಕದಿನ ಸರಣಿಯ ಕೊನೆ ಪಂದ್ಯದಲ್ಲಿ ಭಾರತ-ಆಸ್ಟ್ರೇಲಿಯಾ ಸಿಡ್ನಿಯಲ್ಲಿ ಮುಖಾಮುಖಿಯಾಗುತ್ತಿದ್ದು, ಆಸ್ಟ್ರೇಲಿಯಾ ಸತತ 3ನೇ ಪಂದ್ಯದಲ್ಲೂ ಟಾಸ್ ಗೆದ್ದಿದ್ದು, ಇಂದು ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದೆ.

ಈಗಾಗಲೇ ಸರಣಿ ಗೆದ್ದಿರುವ ಆಸ್ಟ್ರೇಲಿಯಾ ಇಂದು ಬ್ಯಾಟಿಂಗ್ ಪರೀಕ್ಷೆ ನಡೆಸಲು ಸಿದ್ಧವಾಗಿದೆ. ಕಳೆದ ಎರಡು ಪಂದ್ಯಗಳಲ್ಲಿ ಟಾಸ್ ಗೆದ್ದು ಚೇಸಿಂಗ್ ಮಾಡಿ ಸಕ್ಸಸ್ ಆಗಿತ್ತು. ಇನ್ನು ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಒಂದು ಬದಲಾವಣೆ ಮಾಡಿಕೊಂಡರೆ, ಭಾರತ 2 ಬದಲಾವಣೆ ಮಾಡಿಕೊಂಡಿದೆ.

ಭಾರತ ಪ್ಲೇಯಿಂಗ್ ಇಲೆವೆನ್: ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ

ಆಸ್ಟ್ರೇಲಿಯಾ ಪ್ಲೇಯಿಂಗ್ ಇಲೆವೆನ್: ಮಿಚೆಲ್ ಮಾರ್ಷ್ (ನಾಯಕ), ಟ್ರಾವಿಸ್ ಹೆಡ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಕೂಪರ್ ಕೊನೊಲಿದ, ಮಿಚೆಲ್ ಓವನ್, ನೇಥನ್ ಎಲ್ಲಿಸ್, ಮಿಚೆಲ್ ಸ್ಟಾರ್ಕ್, ಆಡಮ್ ಜಂಪಾ, ಜೋಶ್ ಹೇಜಲ್‌ವುಡ್