Women’s World Cup 2025: ಜೆಮಿಮಾ ಕೆಚ್ಚೆದೆಯ ಶತಕದಾಟ; ಸೆಮಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ / India secure historic win over Australia in semi-final of ICC Women’s ODI World Cup 2025 | ಕ್ರೀಡೆ

Women’s World Cup 2025: ಜೆಮಿಮಾ ಕೆಚ್ಚೆದೆಯ ಶತಕದಾಟ; ಸೆಮಿ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ / India secure historic win over Australia in semi-final of ICC Women’s ODI World Cup 2025 | ಕ್ರೀಡೆ

Last Updated:

ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2025 ರ ಸೆಮಿಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿದೆ.

Jemimah Rodrigues
Jemimah Rodrigues

ನವಿ ಮುಂಬೈನ ಡಿವೈ ಪಾಟೀಲ್(DY Patil) ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ನಡೆದ ಐಸಿಸಿ(ICC) ಮಹಿಳಾ ಏಕದಿನ ವಿಶ್ವಕಪ್(World Cup) 2025 ರ ಸೆಮಿಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಭಾರತ ಸೋಲಿಸಿದೆ. ಜೆಮಿಮಾ ರೋಡ್ರಿಗಸ್(Jemimah Rodrigues) ಭರ್ಜರಿ ಶತಕ ಸಿಡಿಸಿ ಭಾರತ ತಂಡವನ್ನು ಫೈನಲ್​ಗೆ ಮುನ್ನಡೆಸಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸೆಮಿಫೈನಲ್ ಪಂದ್ಯ ಭಾರೀ ಕುತೂಹಲ ಮೂಡಿಸಿತ್ತು. ಕೊನೆಗೂ ಆಸ್ಟ್ರೇಲಿಯಾ ತಂಡವನ್ನು ಬಗ್ಗು ಬಡಿದ ಹರ್ಮನ್​ಪ್ರೀತ್ ಕೌರ್ ಮುನ್ನಡೆಸುತ್ತಿರುವ ಭಾರತ ತಂಡ ವಿಶ್ವಕಪ್ ಗೆಲುವಿನ ನಿರೀಕ್ಷೆಯಲ್ಲಿದೆ.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ 49.5 ಓವರ್‌ಗಳಲ್ಲಿ 338 ರನ್‌ಗಳನ್ನು ಗಳಿಸಿತು. ಇದಕ್ಕೆ ಉತ್ತರವಾಗಿ, ಜೆಮಿಮಾ ಭಾರತ ಪರ ಶತಕ ಗಳಿಸಿದರು. ನಾಯಕಿ ಹರ್ಮನ್‌ಪ್ರೀತ್ ಜೊತೆಗೆ ಜೆಮಿಯಾ ಮೂರನೇ ವಿಕೆಟ್‌ಗೆ 167 ರನ್‌ಗಳ ಜೊತೆಯಾಟ ಆಡಿದರು. ಪರಿಣಾಮ ಭಾರತ ತಂಡವು 48.3 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 341 ರನ್ ಗಳಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿತು.

ಮೂರನೇ ಬಾರಿಗೆ ಫೈನಲ್

ಭಾರತ ತಂಡ ಏಕದಿನ ವಿಶ್ವಕಪ್‌ನ ಫೈನಲ್ ತಲುಪುತ್ತಿರುವುದು ಇದು ಮೂರನೇ ಬಾರಿ. ಈ ಹಿಂದೆ 2005 ಮತ್ತು 2017 ರಲ್ಲಿ ಭಾರತ ತಂಡವು ಫೈನಲ್ ತಲುಪಿತ್ತು. ಭಾರತ ಇದುವರೆಗೆ ವಿಶ್ವಕಪ್ ಗೆದ್ದಿಲ್ಲ. ಈಗ ತವರಿನಲ್ಲಿ ಭಾರತ ವಿಶ್ವಕಪ್ ಬರವನ್ನು ಕೊನೆಗೊಳಿಸಲು ಉತ್ತಮ ಅವಕಾಶವನ್ನು ಹೊಂದಿದೆ.