Last Updated:
ಹಳದಿ ರೋಗದಿಂದ ಅಡಿಕೆ ನಾಶವಾಗಿದೆ. ಕೃಷಿಕರು ಕಾಫಿ ಬೆಳೆ ಪ್ರಯತ್ನಿಸುತ್ತಿದ್ದು ಸಭೆ ನಡೆಸಿದ್ದಾರೆ.
ದಕ್ಷಿಣ ಕನ್ನಡ: ಕರಾವಳಿ ಭಾಗದ (Coastal Area) ಪ್ರಮುಖ ವಾಣಿಜ್ಯ ಬೆಳೆ ಅಡಿಕೆಗೆ (Arecanut) ಇಂದು ಹಲವು ರೀತಿಯ ಸಮಸ್ಯೆಗಳು ಎದುರಾಗಿದೆ. ಅದರಲ್ಲೂ ಸುಳ್ಯ ತಾಲೂಕಿನ ಸಂಪಾಜೆ, ಕಲ್ಲುಗುಂಡಿ ಹಾಗೂ ಇತರ ಭಾಗದಲ್ಲಿ ಅಡಿಕೆಗೆ ಹಳದಿ ರೋಗ ಕಳೆದ ಹಲವು ವರ್ಷಗಳಿಂದ ಕಾಡುತ್ತಿದೆ. ಹಳದಿ ರೋಗಕ್ಕೆ ತುತ್ತಾದ ಅಡಿಕೆ ತೋಟಗಳು ಸಂಪೂರ್ಣ ನಾಶವಾಗಿದೆ. ಸುಮಾರು 50 ಹೆಕ್ಟೇರ್ ಭೂಪ್ರದೇಶದಲ್ಲಿ ಬೆಳೆದ ಅಡಿಕೆ ಬೆಳೆ ನಾಶವಾಗಿದೆ. ಅಡಿಕೆಗೆ ಪರ್ಯಾಯವಾಗಿ ಇತರ ಬೆಳೆಗಳನ್ನು ಬೆಳೆಯಲು ಇಲ್ಲಿನ ಕೃಷಿಕರು ನಿರಂತರವಾಗಿ ಪ್ರಯತ್ನಿಸುತ್ತಿದ್ದರೂ, ಯಾವುದೂ ಕೂಡ ಫಲ ನೀಡಿಲ್ಲ. ಈ ಮಧ್ಯೆ ಈ ಭಾಗದಲ್ಲಿ ಕಾಫಿ (CoffeE) ಬೆಳೆ (Crop) ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಗಳೂ ಆರಂಭಗೊಂಡಿದೆ.
ಅಡಿಕೆ ವಿಚಾರವಾಗಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ ಚೌಹಾಣ್ ಅವರು ಉನ್ನತ ಮಟ್ಟದ ಸಭೆಯನ್ನು ಈಗಾಗಲೇ ನಡೆಸಿದ್ದಾರೆ. ಹಳದಿ ರೋಗ ಹಾಗೂ ಎಲೆ ಚುಕ್ಕಿ ರೋಗದ ಸಮಸ್ಯೆಯನ್ನೂ ಸಭೆಯಲ್ಲಿ ಉಲ್ಲೇಖಿಸಲಾಗಿದೆ. ರೋಗ ಬಾಧಿತ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆಯುವುದಕ್ಕೆ ಸಮಸ್ಯೆಯಿದ್ದು,ಪರಿಹಾರವಾಗಿ ಒನ್ ಟೈಮ್ ಪ್ಯಾಕೇಜ್ ಘೋಷಿಸಬೇಕು ಮತ್ತು ಪರ್ಯಾಯ ಬೆಳೆಯ ಬಗ್ಗೆ ಪ್ರಯತ್ನ ನಡೆಸಬೇಕೆಂಬ ಬೇಡಿಕೆಗಳು ಈ ಹಿಂದಿನಿಂದಲೂ ಇವೆ. ಕೇಂದ್ರ ಸಚಿವರು ಹಳದಿ ರೋಗದ ಪ್ರದೇಶವನ್ನು ಖುದ್ದು ವೀಕ್ಷಿಸುವ ಭರವಸೆಯನ್ನು ನೀಡಿದ್ದಾರೆ.
ಇದರ ಪೂರ್ವಭಾವಿ ಸಭೆಗಳು ಈಗಾಗಲೇ ತೋಟಗಾರಿಕಾ ಇಲಾಖೆಯಿಂದ ನಡೆದಿದೆ. ಕಾಫಿ ಬೋರ್ಡ್ ಅಧ್ಯಕ್ಷರನ್ನು ಕರೆಸಿ ಜಿಲ್ಲೆಯ ವಿವಿಧ ಕಡೆಯಲ್ಲಿ ಕಾಫಿ ಬೆಳೆಯುವ ನಿಟ್ಟಿನಲ್ಲಿ ಮಣ್ಣು ಪರೀಕ್ಷೆಯನ್ನು ಮಾಡಿಸಲು ಸೂಚಿಸಲಾಗಿದೆ. ರೈತರು ಈಗಾಗಲೇ ಕಾಫಿಯನ್ನು ಬೆಳೆಯುವ ಪ್ರಯತ್ನವನ್ನೂ ಮಾಡಿದ್ದಾರೆ.
Dakshina Kannada,Karnataka
October 31, 2025 11:34 AM IST