Last Updated:
ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಅಂಗವಾಗಿ ನ.19 ರಂದು ಪುತ್ತೂರಿನಲ್ಲಿ `ಅಟಲ್ ವಿರಾಸತ್’ ಕಾರ್ಯಕ್ರಮ ನಡೆಯಲಿದೆ.
ದಕ್ಷಿಣ ಕನ್ನಡ: ಮಾಜಿ ಪ್ರಧಾನಿ, ಭಾರತರತ್ನ, ಅಜಾತಶತ್ರು ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ `ಜನ್ಮ ಶತಾಬ್ದಿ’ ಹಿನ್ನೆಲೆಯಲ್ಲಿ ನವಂಬರ್ 19 ರಂದು ಪುತ್ತೂರಿನಲ್ಲಿ (Puttur) ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಮಟ್ಟದ `ಅಟಲ್ ವಿರಾಸತ್’ (Atal Virasat) ನಡೆಯಲಿದೆ. ಕಾರ್ಯಕ್ರಮದಲ್ಲಿ ಪಕ್ಷಾತೀತವಾಗಿ ವಾಜಪೇಯಿ ಅಭಿಮಾನಿಗಳು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಲಿದ್ದು, ಐತಿಹಾಸಿಕ ಕಾರ್ಯಕ್ರಮವಾಗಿ ಗುರುತಿಸಿಕೊಳ್ಳಲಿದೆ ಕಾರ್ಯಕ್ರಮ ಪುತ್ತೂರು ನಗರದ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯ ಮೈದಾನದಲ್ಲಿ ನಡೆಯಲಿದೆ.ಬೆಳಗ್ಗೆ 9.30 ಕ್ಕೆ ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದಿಂದ ಕಾರ್ಯಕ್ರಮ ನಡೆಯುವ ಶ್ರೀ ಲಕ್ಷ್ಮೀ ವೆಂಕಟರಮಣ ದೇವಾಲಯದ ಬಳಿಯ ಮೈದಾನಕ್ಕೆ ಮೆರವಣಿಗೆ ನಡೆಯಲಿದೆ.
ಹಿಂದೆ 1991 ರಲ್ಲಿ ಏಪ್ರಿಲ್ 14 ರಂದು ಅಟಲ್ ಬಿಹಾರಿ ವಾಜಪೇಯಿ ಅವರು ಪುತ್ತೂರಿಗೆ ಬಂದು ಭಾಗವಹಿಸಿದ ಕಾರ್ಯಕ್ರಮ ನಡೆದ ಸ್ಥಳದಲ್ಲೇ ಜನ್ಮ ಶತಾಬ್ದಿಯ ಕಾರ್ಯಕ್ರಮವನ್ನೂ ಆಯೋಜಿಸಿರುವುದು ಈ ಕಾರ್ಯಕ್ರಮದ ವಿಶೇಷವಾಗಿದೆ. ಅವರು ಪುತ್ತೂರಿಗೆ ಒಟ್ಟು 3 ಬಾರಿ ಭೇಟಿ ನೀಡಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ಅವರು 1980 ರಿಂದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿ ಬಿಜೆಪಿಯನ್ನು ಕಟ್ಟಿ ಬೆಳೆಸಿದವರು.
Dakshina Kannada,Karnataka
November 13, 2025 8:15 AM IST