ಟಾಸ್ ಗೆದ್ದ ಪಂಜಾಬ್ ಕಿಂಗ್ಸ್ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಬ್ಯಾಟಿಂಗ್ ಆರಂಭಿಸಿದ ರಾಯಲ್ಸ್ಗೆ ಪವರ್ಪ್ಲೇನಲ್ಲಿ ಯಶಸ್ವಿ ಜೈಸ್ವಾಲ್ ಮತ್ತು ಸಂಜು ಸ್ಯಾಮ್ಸನ್ 53 ರನ್ ಗಳಿಸಿ ಉತ್ತಮ ಆರಂಭ ಒದಗಿಸಿಕೊಟ್ಟರು. ಈ ಜೋಡಿ 11ನೇ ಓವರ್ ತನಕ ಬ್ಯಾಟಿಂಗ್ 89 ರನ್ ಸೇರಿಸಿದರು. ಈ ಸಂದರ್ಭದಲ್ಲಿ ಫರ್ಗ್ಯುಸನ್ ಬೌಲಿಂಗ್ನಲ್ಲಿ 26 ಎಸೆತಗಳಲ್ಲಿ 38 ರನ್ ಗಳಿಸಿದ್ದ ನಾಯಕ ಸಂಜು ಸ್ಯಾಮ್ಸನ್ ಔಟಾದರು. ಆರಂಭದಲ್ಲಿ ನಿಧಾನಗತಿಯ ಆಟಕ್ಕೆ ಮೊರೆ ಹೋಗಿದ್ದ ಯಶಸ್ವಿ ಜೈಸ್ವಾಲ್ ಸಂಜು ಔಟಾದ ನಂತರ ಅಬ್ಬರಿಸಿ 45 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ಗಳ ಸಹಿತ 67 ರನ್ ಗಳಿಸಿ ಅವರೂ ಕೂಡ ಫರ್ಗ್ಯುಸನ್ಗೆ 2ನೇ ಬಲಿಯಾದರು.ಕಳೆದ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಅಬ್ಬರಿಸಿದ್ದ ನಿತೀಶ್ ರಾಣಾ 7 ಎಸೆತಗಳಲ್ಲಿ ಕೇವಲ 12 ರನ್ ಗಳಿಸಲಷ್ಟೇ ಶಕ್ತರಾದರು.
ಇದನ್ನೂ ಓದಿ: 27 ಕೋಟಿ ಆಟಗಾರ ಫುಲ್ ಫ್ಲಾಪ್! 14 ಕೋಟಿಗೆ ಬೇಡ ಎಂದ ಆಟಗಾರ ಅಬ್ಬರ! ಟ್ರೋಲ್ಗೆ ಒಳಗಾದ LSG ಮಾಲೀಕ
ಕೊನೆಯಲ್ಲಿ ಪಂಜಾಬ್ ಬೌಲರ್ಗಳನ್ನ ಚೆಂಡಾಡಿದ ರಿಯಾನ್ ಪರಾಗ್, 25 ಎಸೆತಗಳಲ್ಲಿ ತಲಾ 3 ಬೌಂಡರಿ, 3 ಸಿಕ್ಸರ್ಗಳ ಸಹಿತ ಅಜೇಯ 43 ರನ್ಗಳಿಸಿತು. ಶಿಮ್ರಾನ್ ಹೆಟ್ಮೈರ್ 12 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 20 ರನ್ಗಳಿಸಿದರೆ, ಧ್ರುವ್ ಜುರೆಲ್ 5 ಎಸೆತಗಳಲ್ಲಿ ಅಜೇಯ 13 ರನ್ಗಳಿಸಿ ತಂಡದ ಮೊತ್ತವನ್ನ ಹೆಚ್ಚಿಸಿದರು.
ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಆಡುವ ಹನ್ನೊಂದರಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ. ರಾಜಸ್ಥಾನ್ ರಾಯಲ್ಸ್ ತಂಡದ ತುಷಾರ್ ದೇಶಪಾಂಡೆ ಸಣ್ಣಪುಟ್ಟ ಗಾಯದಿಂದಾಗಿ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ ಯುಧ್ವೀರ್ ಸಿಂಗ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಿಕೊಳ್ಳಲಾಗಿದೆ.
ಹೆಡ್ ಟು ಹೆಡ್ ದಾಖಲೆ
ಐಪಿಎಲ್ನಲ್ಲಿ ಎರಡೂ ತಂಡಗಳು 28 ಮುಖಾಮುಖಿಯಲ್ಲಿ ರಾಜಸ್ಥಾನ್ ರಾಯಲ್ಸ್ 16 ಗೆಲುವು ಸಾಧಿಸಿದ್ದರೆ, ಪಂಜಾಬ್ ಕಿಂಗ್ಸ್ 12 ರಲ್ಲಿ ಗೆಲುವು ಪಡೆದಿದೆ.
ಇದನ್ನೂ ಓದಿ: ಅಂತೂ ಇಂತೂ ಆ ಫ್ಲಾಫ್ ಆಟಗಾರನನ್ನ ತಂಡದಿಂದ ಹೊರಗಿಟ್ಟ ಸಿಎಸ್ಕೆ! ಈ ಪಂದ್ಯದಿಂದಾದರೂ ಬದಲಾಗುತ್ತಾ ಅದೃಷ್ಟ
ಪ್ಲೇಯಿಂಗ್ ಇಲೆವೆನ್
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಚಾರ್ ಯುದ್ವೀರ್ ಸಿಂಗ್, ಚಾರ್ ಯುದ್ವೀರ್ ಸಿಂಗ್
ಪಂಜಾಬ್ ಕಿಂಗ್ಸ್ (ಪ್ಲೇಯಿಂಗ್ XI): ಪ್ರಭ್ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ಮಾರ್ಕಸ್ ಸ್ಟೈನ್ಸ್, ನೆಹಾಲ್ ವಾಧೇರಾ, ಗ್ಲೆನ್ ಮ್ಯಾಕ್ಸ್ವೆಲ್, ಶಶಾಂಕ್ ಸಿಂಗ್, ಸೂರ್ಯಾಂಶ್ ಶೆಡ್ಜ್, ಮಾರ್ಕೊ ಜಾನ್ಸೆನ್, ಅರ್ಶ್ದೀಪ್ ಸಿಂಗ್, ಲಾಕಿ ಫರ್ಗುಸನ್, ಯುಜ್ವೇಂದ್ರ ಚಾಹಲ್
April 05, 2025 9:17 PM IST