Last Updated:
ಗುಜರಾತ್ ಟೈಟನ್ಸ್ ಮತ್ತು ರಾಜಸ್ಥಾನ ರಾಯಲ್ಸ್ ತಂಡಗಳು ಐಪಿಎಲ್ 2025ರಲ್ಲಿ ಜೈಪುರದಲ್ಲಿ ಮುಖಾಮುಖಿಯಾಗಲಿವೆ. ನಾಯಕ ಸಂಜು ಸ್ಯಾಮ್ಸನ್ ಇಂಜುರಿಯಿಂದ ಹೊರಗುಳಿದಿದ್ದು, ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ.
ಐಪಿಎಲ್ 2025ನೇ ಸಾಲಿನಲ್ಲಿ ಇಂದು (ಏಪ್ರಿಲ್ 28) ಜೈಪುರದ ಸವಾಯಿ ಮಾನ್ಸೂನ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಬಲಿಷ್ಠ ಗುಜರಾತ್ ಟೈಟನ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗಲಿವೆ. ಇಂಜುರಿಯಿಂದ ಕಳೆದ ಎರಡು ಪಂದ್ಯಗಳನ್ನು ಮಿಸ್ ಮಾಡಿಕೋಂಡಿದ್ದ ನಾಯಕ ಸಂಜು ಸ್ಯಾಮ್ಸನ್ ಇಂದಿನ ಪಂದ್ಯದಿಂದಲೂ ಹೊರಗುಳಿದಿದ್ದು, ಇಂದು ಕೂಡ ಹಂಗಾಮಿ ನಾಯಕ ರಿಯಾನ್ ಪರಾಗ್ ಮುನ್ನಡೆಸಲಿದ್ದಾರೆ. ಇಂದಿನ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ.
ಅಗ್ರಸ್ಥಾನಕ್ಕೇರುತ್ತಾ ಗುಜರಾತ್ ಟೈಟನ್ಸ್?
ಉಭಯ ತಂಡಗಳು ಕೂಡ ಐಪಿಎಲ್‌ನಲ್ಲಿ ಇದುವರೆಗೂ 7 ಬಾರಿ ಮುಖಾಮುಖಿಯಾಗಿವೆ. ಆದ್ರೆ, ಇದರಲ್ಲಿ ಗುಜರಾತ್ ಟೈಟನ್ಸ್ ಬರೋಬ್ಬರಿ 6 ಪಂದ್ಯ ಗೆದ್ದು ಮುನ್ನಡೆ ಸಾಧಿಸಿದೆ. ಆದ್ರೆ, ರಾಜಸ್ಥಾನ ರಾಯಲ್ಸ್ ಕೇವಲ ಒಂದೇ ಒಂದು ಪಂದ್ಯವನ್ನು ಗೆದ್ದಿದೆ. ಇಂದಿನ ಪಂದ್ಯವನ್ನು ಗುಜರಾತ್ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲಿದೆ.
ಐಪಿಎಲ್ 2025ರಲ್ಲಿ ಉಭಯ ತಂಡಗಳ ಸಾಧನೆ
ಈ ಬಾರಿಯ ಐಪಿಎಲ್‌ನಲ್ಲಿ ಗುಜರಾತ್ ಟೈಟನ್ಸ್ 8 ಪಂದ್ಯಗಳಲ್ಲಿ 6 ಗೆಲುವು, 2 ಸೋಲಿನೊಂದಿಗೆ ಪಾಯಿಂಟ್ ಟೇಬಲ್‌ನಲ್ಲಿ ಎರಡನೇ ಸ್ಥಾನದಲ್ಲಿದೆ. ಹಾಗೂ ಬಲಿಷ್ಠ ತಂಡವಾಗಿರುವ ರಾಜಸ್ಥಾನ ರಾಯಲ್ಸ್ ಆಡಿರುವ 9 ಪಂದ್ಯಗಳಲ್ಲಿ 2 ಗೆಲುವು ಹಾಗೂ 7 ಸೋಲುಗಳೊಂದಿಗೆ 9ನೇ ಸ್ಥಾನದಲ್ಲಿದೆ. ಒಂದುವೇಳೆ ಸೆಮಿಫೈನಲ್ ರೇಸ್‌ನಲ್ಲಿ ಉಳಿದುಕೊಳ್ಳಬೇಕು ಅಂದ್ರೆ ರಾಜಸ್ಥಾನ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ರಾಜಸ್ಥಾನ್ ರಾಯಲ್ಸ್ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ನಿತೀಶ್ ರಾಣಾ, ರಿಯಾನ್ ಪರಾಗ್ (ನಾಯಕ), ಧ್ರುವ್ ಜುರೆಲ್ (ವಿಕೀ), ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೀಶ್ ತೀಕ್ಷಣ, ಸಂದೀಪ್ ಶರ್ಮಾ, ಯುಧ್ವೀರ್ ಸಿಂಗ್ ಚರಕ್ ಪ್ಲೇಯಿಂಗ್11 ನಲ್ಲಿ ಸ್ಥಾನ ಪಡೆದಿದ್ದಾರೆ.
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಸಾಯಿ ಸುದರ್ಶನ್, ಶುಬ್ಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೀ), ವಾಷಿಂಗ್ಟನ್ ಸುಂದರ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ಕರೀಂ ಜನತ್, ರಶೀದ್ ಖಾನ್, ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ ಪ್ಲೇಯಿಂಗ್11 ನಲ್ಲಿದ್ದಾರೆ.
April 28, 2025 7:15 PM IST
GT vs RR: ಬಲಿಷ್ಠ ಗುಜರಾತ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ರಾಜಸ್ಥಾನ! ರಾಯಲ್ಸ್‌ಗೆ ಸ್ಟಾರ್ ಸ್ಪಿನ್ನರ್ ಕಂಬ್ಯಾಕ್