Blood Donate: ಬ್ಲಡ್ ಬ್ಯಾಂಕ್‌ಗಳಲ್ಲಿ ರಕ್ತದ ಕೊರತೆ- ರಕ್ತದಾನ ಅಭಿಯಾನ ಆರಂಭ | Blood Donate: Blood shortage in blood banks – blood donation campaign begins

Blood Donate: ಬ್ಲಡ್ ಬ್ಯಾಂಕ್‌ಗಳಲ್ಲಿ ರಕ್ತದ ಕೊರತೆ- ರಕ್ತದಾನ ಅಭಿಯಾನ ಆರಂಭ | Blood Donate: Blood shortage in blood banks – blood donation campaign begins

Last Updated:

ಮಂಗಳೂರು ನಗರದ ಬ್ಲಡ್ ಬ್ಯಾಂಕ್‌ಗಳಲ್ಲಿ ಭಾರೀ ರಕ್ತದ ಕೊರತೆ ಉಂಟಾಗಿದೆ. ವೆನ್ಲಾಕ್ ಆಸ್ಪತ್ರೆಯಲ್ಲಿ 500 ಯುನಿಟ್‌ಗಳ ಬದಲು ಕೇವಲ 90 ಯುನಿಟ್‌ಗಳಷ್ಟೇ ರಕ್ತವಿದೆ. ಡಾ. ಶರತ್ ಕುಮಾರ್ ರಕ್ತದಾನ ಅಭಿಯಾನ ಆರಂಭಿಸಿದ್ದಾರೆ.

X

ವಿಡಿಯೋ ಇಲ್ಲಿ ನೋಡಿ

ದಕ್ಷಿಣ ಕನ್ನಡ: ಮಂಗಳೂರು ನಗರದ ಬ್ಲಡ್ ಬ್ಯಾಂಕ್‌ಗಳಲ್ಲಿ(Blood Bank) ಭಾರೀ ರಕ್ತದ ಅಭಾವ(Lack of Blood) ಉಂಟಾಗಿದೆ. ಪರಿಣಾಮ ವಿವಿಧ ಆಸ್ಪತ್ರೆಗಳಲ್ಲಿ(Various Hospitals) ಬೇಡಿಕೆಗೆ ಅನುಗುಣವಾಗಿ ರಕ್ತ ದೊರೆಯುತ್ತಿಲ್ಲ ಎಂಬ ಆತಂಕಕಾರಿ ವಿಚಾರ ಸುದ್ದಿಯಾಗಿದೆ. ಬಹುತೇಕ ಬ್ಲಡ್ ಬ್ಯಾಂಕ್‌ಗಳು ರಕ್ತದ ಕೊರತೆಯನ್ನು ಎದುರಿಸುತ್ತಿದೆ. ಪರಿಣಾಮ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ(Patients) ತಕ್ಷಣಕ್ಕೆ ಬೇಕಾದಷ್ಟು ರಕ್ತ ದೊರೆಯುತ್ತಿಲ್ಲ. ಆದ್ದರಿಂದ ತುರ್ತು ಸಂದರ್ಭದಲ್ಲಿ ರಕ್ತದ ಕೊರತೆಯಾಗದಂತೆ ಮುಂಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.

ಮಂಗಳೂರಿನ ಸರಕಾರಿ ವೆನ್ಲಾಕ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್‌ನಲ್ಲಿ ರಕ್ತದ ಭಾರೀ ಕೊರತೆ ಉಂಟಾಗಿದೆ. ಪರಿಣಾಮ ರೋಗಿಗಳಿಗೆ ರಕ್ತ ಪೂರೈಕೆಯಲ್ಲಿ ಅಭಾವವುಂಟಾಗಿದೆ. 500 ಯುನಿಟ್ ರಕ್ತದ ಶೇಕರಣೆ ಇರಬೇಕಾದ ರಕ್ತಪೂರಣ ಕೇಂದ್ರದಲ್ಲಿ ಕೇವಲ 90ಯುನಿಟ್ ರಕ್ತವಿದೆ. ಸದ್ಯ A+, A-, B+, B-, AB+, AB- , O ಮಾದರಿಯ ರಕ್ತದ ಕೊರತೆ ಎದುರಾಗಿದೆ.

ಆದ್ದರಿಂದ ಎಲ್ಲರೂ ರಕ್ತದಾನ ಮಾಡುವಂತೆ ಬ್ಲಡ್ ಬ್ಯಾಂಕ್ ಅಧಿಕಾರಿ ಕರೆ ನೀಡಿದ್ದಾರೆ. ಈ ಹಿ‌ನ್ನೆಲೆಯಲ್ಲಿ ಬ್ಲಡ್ ಬ್ಯಾಂಕ್ ಅಧಿಕಾರಿ ಡಾ.ಶರತ್ ಕುಮಾರ್ ರಕ್ತದಾನ ಅಭಿಯಾನ ಆರಂಭಿಸಿದ್ದಾರೆ. ರಕ್ತದಾನದ ಕ್ಯಾಂಪ್‌ಗಳನ್ನು ಆಯೋಜಿಸುವಂತೆ ಸಂಘ ಸಂಸ್ಥೆಗಳಿಗೆ ಕರೆ ನೀಡಿದ್ದಾರೆ.