Last Updated:
ಐಪಿಎಲ್ 2025ರ 62ನೇ ಪಂದ್ಯ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಐಪಿಎಲ್ 2025ರ 62ನೇ ಪಂದ್ಯ ಮಂಗಳವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ ರಾಯಲ್ಸ್ ನಡುವೆ ನಡೆಯುತ್ತಿದ್ದು, ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 2025ರ ಆವೃತ್ತಿಯಲ್ಲಿ ಈ ಎರಡೂ ತಂಡಗಳು ಪ್ಲೇಆಫ್ ರೇಸ್‌ನಿಂದ ಹೊರಗುಳಿದಿವೆ. ಆದ್ದರಿಂದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿದ್ದು, ಈ ಪಂದ್ಯವನ್ನು ಗೆಲ್ಲುವ ಮೂಲಕ ಕೊನೆಯ ಸ್ಥಾನಿ ಎಂಬ ಕಳಪೆ ದಾಖಲೆಯನ್ನು ತಪ್ಪಿಸಿಕೊಳ್ಳುವುದಕ್ಕೆ ಹೋರಾಟ ನಡೆಸಲಿವೆ.
ಐಪಿಎಲ್ 2025ರ 11 ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ನಡೆಯಿತು, ಇದರಲ್ಲಿ ರಾಜಸ್ಥಾನ ಗೆದ್ದಿತು. ಇದೀಗ ಎರಡು ತಂಡಗಳ ನಡುವೆ ಮತ್ತೊಂದು ರೋಚಕ ಕದನ ನಡೆಯಲಿದೆ.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಸಂಜು ಸ್ಯಾಮ್ಸನ್(ವಿಕೀ/ನಾಯಕ), ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ಧ್ರುವ್ ಜುರೆಲ್, ವನಿಂದು ಹಸರಂಗ, ಕ್ವೇನಾ ಮಫಕಾ, ತುಷಾರ್ ದೇಶಪಾಂಡೆ, ಆಕಾಶ್ ಮಧ್ವಾಲ್, ಯುಧ್ವೀರ್ ಸಿಂಗ್
ಸಿಎಸ್ಕೆ: ಆಯುಷ್ ಮ್ಹಾತ್ರೆ, ಉರ್ವಿಲ್ ಪಟೇಲ್, ಡೆವೊನ್ ಕಾನ್ವೇ, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ಆರ್ ಅಶ್ವಿನ್, ಎಂಎಸ್ ಧೋನಿ (ವಿಕೀ/ನಾಯಕ), ಅನ್ಶುಲ್ ಕಾಂಬೋಜ್, ನೂರ್ ಅಹ್ಮದ್, ಖಲೀಲ್ ಅಹ್ಮದ್
ಹೆಡ್ ಟು ಹೆಡ್ ದಾಖಲೆ
ಐಪಿಎಲ್ ಇತಿಹಾಸದಲ್ಲಿ ಎರಡೂ ತಂಡಗಳು 31 ಬಾರಿ ಮುಖಾಮುಖಿಯಾಗಿದ್ದು, ಚೆನ್ನೈ ಸೂಪರ್ ಕಿಂಗ್ಸ್ 16 ಬಾರಿ, ರಾಜಸ್ಥಾನ್ ರಾಯಲ್ಸ್ 15 ಬಾರಿ ಗೆಲುವು ಸಾಧಿಸಿವೆ.