Last Updated:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಶಿಕ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಗಳಿವೆ. ಹೀಟ್ ವೇವ್ ಸ್ಟ್ರೋಕ್ ನಿಂದ ಜನರ ಆರೋಗ್ಯ ದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇದೆ.
ಮಂಗಳೂರು: ಭಾರತೀಯ ಹವಾಮಾನ ಇಲಾಖೆ (Indian Meteorological Department) ಕರಾವಳಿ ಕರ್ನಾಟಕದ (Coastal Karnataka) ಭಾಗದಲ್ಲಿ ಮುಂದಿನ ಎರಡು ದಿನದಲ್ಲಿ ಬಿಸಿ ಶಾಖದ ಅಲೆಯಿದೆ (Heat Wave) ಎಂಬ ಎಚ್ಚರಿಕೆ ನೀಡಿದೆ. ಎರಡು ದಿನಗಳ ಕಾಲ ಬಿಸಿ ಮತ್ತು ಆರ್ದ್ರ ಪರಿಸ್ಥಿತಿ ಹೆಚ್ಚಾಗಿರುವ ಸಾಧ್ಯತೆಯಿದೆ. ಆದ್ದರಿಂದ ಐಎಂಡಿ (IMD) ಎಲ್ಲೋ ಅಲರ್ಟ್ ಘೋಷಿಸಿದ್ದು (Yellow Alert), ಜನರು ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಶಿಕ ತಾಪಮಾನ ದಾಖಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಗಳಿವೆ. ಹೀಟ್ ವೇವ್ ಸ್ಟ್ರೋಕ್ ನಿಂದ ಜನರ ಆರೋಗ್ಯ ದ ಮೇಲೆ ದುಷ್ಟರಿಣಾಮ ಬೀರುವ ಸಾಧ್ಯತೆ ಇದೆ. ಈ ಹಿನ್ನಲೆ ಜಿಲ್ಲಾಡಳಿತ ಅಗತ್ಯ ಮುನ್ನಚ್ಚೆರಿಕೆ ವಹಿಸಲು ಸೂಚನೆ ನೀಡಿದೆ.
ಬಿಸಿಗಾಳಿ ಸಂದರ್ಭ ಅನುಸರಿಸಬೇಕಾದ ಕ್ರಮಗಳ ಪಟ್ಟಿ
- ಸಾಧ್ಯವಾದಷ್ಟು ತಂಪಾದ ಸ್ಥಳಗಳ ಇರಿ
- ಬಿಸಿಲಿನ ಅವಧಿಯಲ್ಲಿ ಕೊಡೆಗಳನ್ನು ಬಳಸಿ
- ಸಾಧ್ಯವಾದಷ್ಟು ಹತ್ತಿಯ ಉಡುಪುಗಳನ್ನು ಧರಿಸಿ
- ಹತ್ತಿಯ ಟೋಪಿಗಳನ್ನು ಬಳಸಿ
- ಹೆಚ್ಚಿನ ಬಿಸಿಲು ಅವಧಿಯಲ್ಲಿ ವಿಶ್ರಾಂತಿ ಪಡೆಯಿರಿ
- ಸಾಕಷ್ಟು ನೀರು, ಮಜ್ಜಿಗೆ ಕುಡಿಯಿರಿ
- ವಾಸವಿರುವ ಕೋಣೆಯನ್ನು ತಂಪಾಗಿರಿಸಿ
- ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಿ
- ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಕೂಡಲೇ ಚಿಕಿತ್ಸೆ ನೀಡಿ
- ಬಿಸಿಗಾಳಿ ತುತ್ತಾದವರಿಗೆ ಸಾಕಷ್ಟು ಕುಡಿಯುವ ನೀರು, ಮಜ್ಜಿಗೆ, ದ್ರವಾಹಾರ ನೀಡಿ
ಇನ್ನು, ಬಿಸಿಲಿನ ಶಾಖದಿಂದ ಹಲವು ಸಮಸ್ಯೆ ಎದುರಿಸುವ ಸಾಧ್ಯತೆಗಳಿತ್ತವೆ. ಈ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಇಲಾಖೆ ಜನರಿಗೆ ಮಾಹಿತಿ ನೀಡಿದೆ. ವಿಪರೀತ ಬಿಸಿಲಿನ ಶಾಖ ಮತ್ತು ಹೆಚ್ಚಿರುವ ತಾಪಮಾನ ಮಾನವನ ಶರೀರದ ಮೇಲೆ ವ್ಯಾಪಕವಾದ ಪರಿಣಾಮಗಳನ್ನು ಬೀರುತ್ತದೆ. ಆರೋಗ್ಯಕ್ಕೆ ಹೊಸ ತೊಂದರೆಗಳು ಅಥವಾ ಮುಂಚೆಯಿಂದ ಅಸ್ತಿತ್ವದಲ್ಲಿರುವ ತೊಂದರೆಗಳನ್ನು ಹೆಚ್ಚಿಸುವ ಕೆಲಸವನ್ನು ಈ ವಿಪರೀತ ಬಿಸಿಲಿನ ಶಾಖ ಮಾಡುತ್ತದೆ. ವಿಪರೀತ ಶಾಖವು ದೇಹಕ್ಕೆ ಮಾರಕವಾಗಬಹುದು. ಆದ್ದರಿಂದ ಈ ಕೆಳಗೆ ನೀಡಿರುವ ಕ್ರಮಗಳನ್ನು ಯಾವುದೇ ಕಾರಣಕ್ಕೂ ಮಾಡಬೇಡಿ.
ಇದನ್ನೂ ಓದಿ: Basava Sagar Reservoir: ನಾರಾಯಣಪುರ ಡ್ಯಾಂನಿಂದ ತೆಲಂಗಾಣಕ್ಕೆ ನೀರು ಬಿಡುಗಡೆ; ನೀರು ಬಿಟ್ರೆ ತಪ್ಪೇನು ಅಂದ್ರು ಸಚಿವರು
ಅನುಸರಿಸಬಾರದ ಕ್ರಮಗಳು
- ನೇರ ಬಿಸಿಲು/ಬಿಸಿಗಾಳಿಗೆ ಒಡ್ಡಿಕೊಳ್ಳಬೇಡಿ
- ಬಿಸಿಲಿನ ಅವಧಿಯಲ್ಲಿ ಕೊಡೆ ಇಲ್ಲದೆ ಹೊರಗೆ ಹೋಗಬೇಡಿ
- ಕಪ್ಪು /ಘಾಡ ಬಣ್ಣದ ತೆಳುವಾದ ಹಾಗೂ ಸಿಂಥಟಿಕ್ ಉಡುಪುಗಳನ್ನು ಧರಿಸಬೇಡಿ
- ನೇರವಾಗಿ ಬಿಸಿಲಿನ ಝಳಕ್ಕೆ ತಲೆ ಒಡಬೇಡಿ
- ಹೆಚ್ಚಿನ ಬಿಸಿಲು ಇರುವ ಅವಧಿಯಲ್ಲಿ ಶ್ರಮದಾಯಕ ದೈಹಿಕ ಕೆಲಸಗಳನ್ನು ಮಾಡಬೇಡಿ
- ಬಿಸಿ ಚಹ, ಮದ್ಯ ಸೇವಿಸಬೇಡಿ
- ವಾಸವಿರುವ ಕೋಣೆಯಲ್ಲಿ ನೇರವಾಗಿ ಬಿಸಿಲು ಬೀಳುವುದನ್ನು ತಪ್ಪಿಸಿ
- ಬಿಸಿಗಾಳಿಗೆ ತುತ್ತಾದ ವ್ಯಕ್ತಿಯನ್ನು ಕೂಡಲೇ ತಂಪಾದ ಸ್ಥಳಕ್ಕೆ ರವಾನಿಸಲು ತಡಮಾಡಬೇಡಿ
- ಬಿಸಿಗಾಳಿ ತುತ್ತಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವುದನ್ನು ತಡಮಾಡಬೇಡಿ
- ಬಿಸಿಗಾಳಿ ಸಂದರ್ಭಗಳಲ್ಲಿ ಚಹಾ, ಕಾಫಿ ಮತ್ತು ಜೇನು ಸೇವಿಸಬೇಡಿ
Dakshina Kannada,Karnataka
February 28, 2025 12:27 PM IST