SRH vs KKR: ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಹೈದರಾಬಾದ್! ಟೂರ್ನಿಯ ತಮ್ಮ ಕೊನೆಯ ಪಂದ್ಯದಲ್ಲಿ ಗೆಲ್ಲೋದ್ಯಾರು? | SRH have won the toss and choose to batting first against to kkr

SRH vs KKR: ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಹೈದರಾಬಾದ್! ಟೂರ್ನಿಯ ತಮ್ಮ ಕೊನೆಯ ಪಂದ್ಯದಲ್ಲಿ ಗೆಲ್ಲೋದ್ಯಾರು? | SRH have won the toss and choose to batting first against to kkr

Last Updated:

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಐಪಿಎಲ್ 2025ರ 68ನೇ ಪಂದ್ಯದಲ್ಲಿ ಡೆಲ್ಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಖಾಮುಖಿಯಾಗಿದ್ದು, ಹೈದರಾಬಾದ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು.

ಹೈದರಾಬಾದ್-ಕೆಕೆಆರ್ಹೈದರಾಬಾದ್-ಕೆಕೆಆರ್
ಹೈದರಾಬಾದ್-ಕೆಕೆಆರ್

ಇಂಡಿಯನ್ ಪ್ರೀಮಿಯರ್ ಲೀಗ್ 2025ರ (IPL 2025) 68ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ತಮ್ಮ ಕೊನೆಯ ಪಂದ್ಯವನ್ನು ಡೆಲ್ಲಿಯ ಅರುಣ್ ಜೇಟ್ಲಿ (Arun Jaitley) ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಹೈದರಾಬಾದ್ ನಾಯಕ ಕಮಿನ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದರು. ಇಂದಿನ ಪಂದ್ಯ ಉಭಯ ತಂಡಗಳಿಗೂ ಹೆಚ್ಚಿನ ಮಹತ್ವದಲ್ಲದೇ ಇದ್ರೂ ಕೂಡ ಟೂರ್ನಿಯನ್ನು ಗೆಲುವಿನೊಂದಿಗೆ ಅಭಿಯಾನ ಮುಗಿಸಲು ಉಭಯ ತಂಡಗಳಿಗೆ ಇದು ಉತ್ತಮ ಅವಕಾಶವಾಗಿದೆ.

ಉಭಯ ತಂಡಗಳು ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದ್ದು, ಇಂದಿನ ಪಂದ್ಯವನ್ನು ಔಪಚಾರಿಕವಾಗಿ ಆಡಲಿವೆ. ಟೂರ್ನಿಯಲ್ಲಿ ಉಭಯ ತಂಡಗಳು 7 ಹಾಗೂ 8ನೇ ಸ್ಥಾನದಲ್ಲಿದ್ದು, ಇಂದಿನ ಪಂದ್ಯದ ಗೆಲುವು ಅಥವಾ ಸೋಲು ಏನನ್ನು ನಿರ್ಧರಿಸುವುದಿಲ್ಲ. ಹಾಗಾಗಿ ಔಪಚಾರಿಕವಾಗಿ ಇಂದಿನ ಪಂದ್ಯವನ್ನು ಆಡಲಿವೆ.

ಉಭಯ ತಂಡಗಳ ಪ್ಲೇಯಿಂಗ್ 11

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್ (ವಿಕೀ), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ಮನೀಷ್ ಪಾಂಡೆ, ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ವೈಭವ್ ಅರೋರಾ, ಹರ್ಷಿತ್ ರಾಣಾ, ಆನ್ರಿಚ್ ನಾರ್ಟ್ಜೆ, ವರುಣ್ ಚಕ್ರವರ್ತಿ

ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI): ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೀ), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಅಭಿನವ್ ಮನೋಹರ್, ಪ್ಯಾಟ್ ಕಮಿನ್ಸ್ (ನಾಯಕ), ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಎಶನ್ ಮಾಲಿಂಗ ಸ್ಥಾನ ಪಡೆದಿದ್ದಾರೆ.

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

SRH vs KKR: ಕೆಕೆಆರ್ ವಿರುದ್ಧ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಹೈದರಾಬಾದ್! ಟೂರ್ನಿಯ ತಮ್ಮ ಕೊನೆಯ ಪಂದ್ಯದಲ್ಲಿ ಗೆಲ್ಲೋದ್ಯಾರು?