Last Updated:
ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ಗಳಿಸಿತ್ತು. 185 ರನ್ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡ 18.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.
2025ರ ಐಪಿಎಲ್ನಲ್ಲಿ ಮೊದಲ 2 ಸ್ಥಾನವನ್ನು ನಿರ್ಧರಿಸುವ ಪ್ರಮುಖ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸುಲಭ ಜಯ ಸಾಧಿಸಿದ ಪಂಜಾಬ್ ಕಿಂಗ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ. ನಿರ್ಣಾಯಕ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 184 ರನ್ಗಳಿಸಿತ್ತು. 185 ರನ್ಗಳ ಗುರಿ ಬೆನ್ನಟ್ಟಿದ ಪಂಜಾಬ್ ತಂಡ 18.3 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು ಗುರಿ ತಲುಪಿತು. ಜೋಶ್ ಇಂಗ್ಲಿಸ್ (73) ಹಾಗೂ ಪ್ರಿಯಾಂಶ್ ಆರ್ಯ (62) ಅರ್ಧಶತಕ ಸಿಡಿಸಿ ತಂಡ ಗೆಲುವು ತಂದುಕೊಟ್ಟರು.
185ರನ್ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಕೇವಲ 34 ರನ್ಗಳಾಗುಷ್ಟರಲ್ಲಿ ಇನ್ಫಾರ್ಮ್ ಬ್ಯಾಟರ್ ಪ್ರಭಸಿಮ್ರನ್ ಸಿಂಗ್ ವಿಕೆಟ್ ಕಳೆದುಕೊಂಡಿತು. ಸಿಂಗ್ 16 ಎಸೆತಗಳಲ್ಲಿ ತಲಾ 1 ಬೌಂಡರಿ, ಸಿಕ್ಸರ್ ಸಹಿತ 13 ರನ್ಗಳಿಸಿ ಔಟ್ ಆದರು. ಆದರೆ 2ನೇ ವಿಕೆಟ್ಗೆ ಒಂದಾದ ಪ್ರಿಯಾಂಶ್ ಆರ್ಯ ಹಾಗೂ ಜೋಶ್ ಇಂಗ್ಲಿಸ್ 59 ಎಸೆತಗಳಲ್ಲಿ 109 ರನ್ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟ ನಡೆಸಿದರು. ಪ್ರಿಯಾಂಶ್ ಆರ್ಯ 35 ಎಸೆತಗಳಲ್ಲಿ 9 ಬೌಂಡರಿ, 2 ಸಿಕ್ಸರ್ ಸಹಿತ 62 ರನ್ಗಳಿಸಿ ಔಟ್ ಆದರು.
ಸ್ಫೋಟಕ ಬ್ಯಾಟಿಂಗ್ ಮಾಡಿದ ಜೋಸ್ ಇಂಗ್ಲಿಸ್ 42 ಎಸೆತಗಳಲ್ಲಿ 9 ಬೌಂಡರಿ, 3 ಸಿಕ್ಸರ್ಗಳ ಸಹಿತ 73 ರನ್ಗಳಿಸಿ ಗೆಲುವಿಗೆ 14 ರನ್ಗಳ ಅಗತ್ಯವಿದ್ದಾಗ ವಿಕೆಟ್ ಒಪ್ಪಿಸಿದರು. ನಾಯಕ ಶ್ರೇಯಸ್ ಅಯ್ಯರ್ 16 ಎಸೆತಗಳಲ್ಲಿ 1 ಬೌಂಡರಿ, 2 ಸಿಕ್ಸರ್ಗಳ ಸಹಿತ 26 ರನ್ಗಳಿಸಿ ತಂಡವನ್ನ ಗೆಲುವಿನ ಗಡಿ ದಾಟಿಸಿದರು.
ಮುಂಬೈ ಪರ ಮಿಚೆಲ್ ಸ್ಯಾಂಟ್ನರ್ 41ಕ್ಕೆ2 ವಿಕೆಟ್ ಪಡೆದರೆ, ಬುಮ್ರಾ 23ಕ್ಕೆ1 ವಿಕೆಟ್ ಪಡೆದರು. ಪಂಜಾಬ್ ಕಿಂಗ್ಸ್ ಈ ಗೆಲುವಿನೊಂದಿಗೆ ಟೂರ್ನಿಯಲ್ಲಿ 14 ಪಂದ್ಯಗಳಲ್ಲಿ 9 ಗೆಲುವುಗಳ ಸಹಿತ 19 ಅಂಕ ಪಡೆದು ಅಗ್ರಸ್ಥಾನಕ್ಕೇರಿತು. 2014ರ ಬಳಿಕ ತಂಡ ಮೊದಲ ಬಾರಿಗೆ ಅಗ್ರಸ್ಥಾನಕ್ಕೇರಿದಂತಾಗಿದೆ.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ಇಂಡಿಯನ್ಸ್ ಸ್ಫೋಟಕ ಆರಂಭ ಪಡೆಯಲು ವಿಫಲವಾಯಿತು. ಮೊದಲ ವಿಕೆಟ್ಗೆ ರೋಹಿತ್-ರಯಾನ್ ರಿಕಲ್ಟನ್ ಜೋಡಿ 45 ರನ್ಗಳ ಜೊತೆಯಾಟ ನಡೆಸಿತು. ರಿಕಲ್ಟನ್ 20 ಎಸೆತಗಳಲ್ಲಿ 5 ಬೌಂಡರಿಗಳ ಸಹಿತ 27 ರನ್ಗಳಿಸಿ ಔಟ್ ಆದರು. ರೋಹಿತ್ ಶರ್ಮಾ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಮತ್ತೊಮ್ಮೆ ವಿಫಲರಾದರು. ಶರ್ಮಾ 22 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 24 ರನ್ಗಳಿಸಿ ಔಟ್ ಆದರು. ನಂತರ ಬಂದ ತಿಲಕ್ ವರ್ಮಾ ಕೇವಲ 1 ರನ್ಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ವಿಲ್ ಜಾಕ್ಸ್ ಕೂಡ 8 ಎಸೆತಗಳಲ್ಲಿ 17 ರನ್ಗಳಿಸಿ ಔಟ್ ಆದರು.
ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿದ್ದ ಮುಂಬೈಗೆ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಚೇತರಿಕೆ ನೀಡಿದರು. ಇವರಿಬ್ಬರು 5ನೇ ವಿಕೆಟ್ ಜೊತೆಯಾಟದಲ್ಲಿ 23 ಎಸೆತಗಳಲ್ಲಿ 44 ರನ್ಗಳಿಸಿದರು. ಪಾಂಡ್ಯ 15 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸೇರಿ 26 ರನ್ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಸೂರ್ಯಕುಮಾರ್ ಹಾಗೂ ನಮನ್ ಧೀರ್ ಜೋಡಿ 6ನೇ ವಿಕೆಟ್ ಜೊತೆಯಾಟದಲ್ಲಿ 17 ಎಸೆತಗಳಲ್ಲಿ 31 ರನ್ ಸೇರಿಸಿದರು. ನಮನ್ 12 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 20 ರನ್ಗಳಿಸಿದರು. ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ಗಳ ಸಹಿತ 57 ರನ್ಗಳಿಸಿ ಕೊನೆಯ ಎಸೆತದಲ್ಲಿ ಅರ್ಶದೀಪ್ ಸಿಂಗ್ಗೆ ವಿಕೆಟ್ ಒಪ್ಪಿಸಿದರು.
May 26, 2025 11:26 PM IST