Last Updated:
ಐಪಿಎಲ್ 2025 ರಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕವೇ ಕ್ರಿಕೆಟ್ ಜಗತ್ತು ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದ 14 ವರ್ಷದ ವೈಭವ್ ಸೂರ್ಯವಂಶಿ ಮತ್ತೆ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿದ್ದಾರೆ.
ಐಪಿಎಲ್ 2025 ರಲ್ಲಿ (IPL 2025) ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕವೇ ಕ್ರಿಕೆಟ್ ಜಗತ್ತು ತಮ್ಮತ್ತ ತಿರುಗಿ ನೋಡುವಂತೆ ಮಾಡಿದ್ದ 14 ವರ್ಷದ ವೈಭವ್ ಸೂರ್ಯವಂಶಿ (Vaibhav Suryavanshi) ಮತ್ತೆ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿದ್ದಾರೆ. ವೈಭವ್ ಸೂರ್ಯವಂಶಿ ಸದ್ಯ 90 ಎಸೆತಗಳಲ್ಲಿ 190 ರನ್ ಗಳಿಸಿದ್ದಾರೆ. 14 ವರ್ಷದ ವೈಭವ್ ಐಪಿಎಲ್ ನಂತರ ಇಂಗ್ಲೆಂಡ್ (England U19 vs India U19) ಪ್ರವಾಸಕ್ಕೆ ತಯಾರಿ ನಡೆಸುತ್ತಿದ್ದಾರೆ.
200ಕ್ಕೂ ಅಧಿಕ ಸ್ಟ್ರೈಕ್ರೇಟ್ನಲ್ಲಿ ಬ್ಯಾಟಿಂಗ್
ಬಿಹಾರದ ವೈಭವ್ ಸೂರ್ಯವಂಶಿ ಇಂಗ್ಲೆಂಡ್ಗೆ ಹೋಗುವ ಮೊದಲು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ (ಎನ್ಸಿಎ) ಅಭ್ಯಾಸ ಪಂದ್ಯ ಆಡಿದ್ದಾರೆ. ಮಂಗಳವಾರ ನಡೆದ ಈ ಪಂದ್ಯದಲ್ಲಿ ಅವರು 200 ಕ್ಕೂ ಅಧಿಕ ಸ್ಟ್ರೈಕ್ ರೇಟ್ನಲ್ಲಿ ರನ್ ಗಳಿಸಿದರು. ಆ ಮೂಲಕ ಇಂಗ್ಲೆಂಡ್ ಅಂಡರ್-19 ವಿರುದ್ಧ ಭಾರತ ಅಂಡರ್19 ತಂಡದಲ್ಲಿ ಆಯುಷ್ ಮ್ಹಾತ್ರೆ ಜೊತೆ ಆರಂಭಿಕನಾಗಿ ಅಬ್ಬರಿಸಲು ಸಿದ್ದರಾಗಿದ್ದಾರೆ.
ಐಪಿಎಲ್ನಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ವೈಭವ್ ಸೂರ್ಯವಂಶಿ ಅವರ ಅತ್ಯುತ್ತಮ ಪ್ರದರ್ಶನದಿಂದಾಗಿ ಭಾರತದ ಅಂಡರ್-19 ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ತಂಡ ಜೂನ್ 24 ರಿಂದ ಜುಲೈ 23, 2025 ರವರೆಗೆ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ. ಈ ಅವಧಿಯಲ್ಲಿ ಅಂಡರ್-19 ಭಾರತೀಯ ತಂಡವು ಆತಿಥೇಯ ಇಂಗ್ಲೆಂಡ್ ವಿರುದ್ಧ 5 ಏಕದಿನ ಪಂದ್ಯಗಳು ಮತ್ತು 2 ನಾಲ್ಕು ದಿನದ ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದರ ಜೊತೆಗೆ, 50 ಓವರ್ಗಳ ಅಭ್ಯಾಸ ಪಂದ್ಯವೂ ನಡೆಯಲಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ವೈಭವ್ ಸೂರ್ಯವಂಶಿ ತಮ್ಮ ನಾಯಕ ಆಯುಷ್ ಮ್ಹಾತ್ರೆ ಅವರೊಂದಿಗೆ ಇನ್ನಿಂಗ್ಸ್ ಪ್ರಾರಂಭಿಸಲಿದ್ದಾರೆ.
ಐಪಿಎಲ್ನಲ್ಲಿ ಶತಕ ಸಿಡಿಸಿದ ವೈಭವ್
ವೈಭವ್ ಸೂರ್ಯವಂಶಿ 12ನೇ ವಯಸ್ಸಿನಲ್ಲಿ ಭಾರತೀಯ ಕ್ರಿಕೆಟ್ ಜಗತ್ತಿನಲ್ಲಿ ತಮ್ಮ ಛಾಪು ಮೂಡಿಸಲು ಪ್ರಾರಂಭಿಸಿದರು. ರಣಜಿ ಟ್ರೋಫಿಯಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಪಾದಾರ್ಪಣೆ ಮಾಡಿದ ದಾಖಲೆಯನ್ನೂ ಅವರು ಮಾಡಿದ್ದಾರೆ. ಆದರೆ 2025 ರ ಐಪಿಎಲ್ನಲ್ಲಿ ಅವರು 35 ಎಸೆತಗಳಲ್ಲಿ ಶತಕ ಗಳಿಸಿದಾಗ, ಇಡೀ ಜಗತ್ತು ಅವರತ್ತ ತಿರುಗಿ ನೋಡಿತು. ಅವರು ಭಾರತೀಯ ಟೆಸ್ಟ್ ನಾಯಕ ಶುಭಮನ್ ಗಿಲ್ ಅವರ ತಂಡ ಗುಜರಾತ್ ಟೈಟಾನ್ಸ್ ವಿರುದ್ಧದ ಇನ್ನಿಂಗ್ಸ್ನಲ್ಲಿ ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. ಇದು ಟಿ-20 ಇತಿಹಾಸದಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ಆಟಗಾರ ಎಂದ ದಾಖಲೆ ಬರೆದಿದ್ದಾರೆ.
NCA ನಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ, ವೈಭವ್ ಸೂರ್ಯವಂಶಿ ಅವರು ತಮ್ಮ ಛಾಪು ಮೂಡಿಸಿದ್ದು, ಐಪಿಎಲ್ ಪ್ರದರ್ಶನ ಮುಂದುವರೆಸಿದ್ದಾರೆ. ಮಂಗಳವಾರ ನಡೆದ ಈ ಅಭ್ಯಾಸ ಪಂದ್ಯದಲ್ಲಿ, ವೈಭವ್ ಲಾಂಗ್-ಆನ್ ಮತ್ತು ಮಿಡ್ ವಿಕೆಟ್ ಮೇಲೆ ಲಾಂಗ್ ಸಿಕ್ಸರ್ ಬಾರಿಸಿದರು. ಇದು ಮಾತ್ರವಲ್ಲದೆ, ಅವರು ಸಿಕ್ಸ್ ಓವರ್ ಪಾಯಿಂಟ್ ಕೂಡ ಗಳಿಸಿದರು. ಅವರ ಇನ್ನಿಂಗ್ಸ್ನ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.
June 11, 2025 11:22 PM IST