Last Updated:
ಇಂಗ್ಲೆಂಡ್-ಭಾರತ ಮೊದಲ ಟೆಸ್ಟ್ ಲೀಡ್ಸ್ನಲ್ಲಿ ಆರಂಭ, ಇಂಗ್ಲೆಂಡ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಶುಭಮನ್ ಗಿಲ್ ನಾಯಕತ್ವದ ಯುವ ತಂಡಕ್ಕೆ ಸಾಕಷ್ಟು ಚಾಲೆಂಜ್ ಇದೆ.
ಪ್ರತಿಷ್ಠಿತ ಇಂಗ್ಲೆಂಡ್ ಹಾಗೂ ಭಾರತ (India vs England) ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್ನ ಹೆಡಿಂಗ್ಲೆಯಲ್ಲಿ ಆರಂಭವಾಗಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ (Rohit Sharma) ಹಾಗೂ ಆರ್ ಅಶ್ವಿನ್ (R Ashwin) ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಹೇಳಿದ ಬಳಿಕ ಈ ಟೂರ್ನಿ ಯುವ ಆಟಗಾರರಿಗೆ ಅತ್ಯಂತ ಮಹತ್ವದ ಸರಣಿಯಾಗಿದೆ.
ಇಂಗ್ಲೆಂಡ್ (ಪ್ಲೇಯಿಂಗ್ XI): ಝಾಕ್ ಕ್ರಾಲಿ, ಬೆನ್ ಡಕೆಟ್, ಒಲ್ಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್(ಸಿ), ಜೇಮೀ ಸ್ಮಿತ್(w), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್
ಭಾರತ (ಪ್ಲೇಯಿಂಗ್ XI): ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಶುಭಮನ್ ಗಿಲ್(ಸಿ), ರಿಷಭ್ ಪಂತ್(ಡಬ್ಲ್ಯೂ), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ
June 20, 2025 3:11 PM IST