Last Updated:
ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ಕ ಪಡೆಗೆ ಚಾಲನೆ, ಮಹಿಳೆ ಮತ್ತು ಮಕ್ಕಳಿಗೆ ತಕ್ಷಣ ಸಹಾಯ, 112 ಕರೆ ಮೂಲಕ ಸಂಪರ್ಕ, ಅನಿಲ್ ಬೂಮಾರೆಡ್ಡಿ ನೇತೃತ್ವದಲ್ಲಿ ದಕ್ಷಿಣ ಕನ್ನಡದಲ್ಲಿ ಕಾರ್ಯಾಚರಣೆ.
ದಕ್ಷಿಣ ಕನ್ನಡ: ಸಂಕಷ್ಟದಲ್ಲಿರುವ ಮಹಿಳೆಯರು (Women) ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ ನೀಡುವ ಹಾಗೂ ಸಕಾಲಿಕವಾಗಿ ಸಹಾಯ ಹಸ್ತ (Help) ನೀಡುವ ಉದ್ದೇಶದಿಂದ (Reason) ರಾಜ್ಯ ಸರ್ಕಾರ ‘ಅಕ್ಕ ಪಡೆ’ ಆರಂಭಿಸಿದ್ದು, ಪುತ್ತೂರು ಮಹಿಳಾ ಪೊಲೀಸ್ ಠಾಣೆ (Police Station) ವ್ಯಾಪ್ತಿಗೆ ಪೂರಕವಾಗಿ ಕಾರ್ಯಾರಂಭಕ್ಕೆ ಚಾಲನೆ ನೀಡಲಾಗಿದೆ.
ಎರಡು ವರ್ಷಗಳ ಹಿಂದೆ ಬೀದರ್‌ನಲ್ಲಿ ಪ್ರಾಯೋಗಿಕವಾಗಿ ಅಕ್ಕ ಪಡೆ ಆರಂಭಿಸಲಾಗಿತ್ತು. ಅಲ್ಲಿ ಯಶಸ್ವಿಯಾಗಿದ್ದರಿಂದ ಅಕ್ಕಪಡೆಯನ್ನು ರಾಜ್ಯವ್ಯಾಪಿ ವಿಸ್ತರಿಸಿ, ಜಿಲ್ಲೆಗೆ ಒಂದರಂತೆ ವಾಹನ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಈ ಪಡೆ ಕಾರ್ಯನಿರ್ವಹಿಸಲಿದೆ.
ಸಹಾನುಭೂತಿ ಮತ್ತು ಸಮುದಾಯ ಸೇವೆಯಲ್ಲಿ ಸ್ಪಂದಿಸುವ ಸುರಕ್ಷತಾ ಘಟಕವಾಗಿ ಮತ್ತು ಶೈಕ್ಷಣಿಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಅಕ್ಕಪಡೆಯನ್ನು ಸಹಾಯಕ ಪೊಲೀಸ್ ಅಧೀಕ್ಷಕ ಅನಿಲ್ ಬೂಮಾರೆಡ್ಡಿಯವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ಪುತ್ತೂರಿನಲ್ಲಿ ಮಾತ್ರ ಏಕೈಕ ಮಹಿಳಾ ಪೊಲೀಸ್ ಠಾಣೆಯಿದೆ. ಅಕ್ಕ ಪಡೆಯು ಪುತ್ತೂರು ಮಹಿಳಾ ಠಾಣೆಯನ್ನು ಕೇಂದ್ರೀಕರಿಸಿ ಕಾರ್ಯ ನಿರ್ವಹಿಸಲಿದ್ದು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಕಡಬ, ಸುಳ್ಯ ತಾಲೂಕಿನ ಎಲ್ಲಾ ಕಡೆಗಳಲ್ಲೂ ಇದು ತನ್ನ ಕಾರ್ಯಾಚರಣೆ ನಡೆಸಲಿದೆ. ಅಕ್ಕ ಪಡೆಗಾಗಿಯೇ ನಾಲ್ಕು ಮಹಿಳಾ ಹೋಮ್ ಗಾರ್ಡ್‌ಗಳನ್ನ ನಿಯೋಜಿಸಲಾಗಿದೆ. ಇವರಲ್ಲಿ ಇಬ್ಬರು ಎರಡು ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲಿದ್ದು, ಇವರ ಜೊತೆಗೆ ಓರ್ವ ಮಹಿಳಾ ಪೊಲೀಸ್ ಸಿಬ್ಬಂದಿಯೂ ಇರಲಿದ್ದಾರೆ.
ಸಾರ್ವಜನಿಕರು ಸಂಪರ್ಕಿಸಬೇಕಾದ ವಿವರ
Dakshina Kannada,Karnataka