APL Card: ಎಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್ ಕೊಟ್ಟ ದಿನೇಶ್‌ ಗುಂಡೂರಾವ್‌

 APL Card: ಎಪಿಎಲ್ ಕಾರ್ಡ್‌ದಾರರಿಗೆ ಗುಡ್ ನ್ಯೂಸ್ ಕೊಟ್ಟ ದಿನೇಶ್‌ ಗುಂಡೂರಾವ್‌


ಬೆಂಗಳೂರು, ಫೆಬ್ರವರಿ16: ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಒಂದೇ ದಿನ ಚಿಕ್ಕಮಗಳೂರಲ್ಲಿ ನಾಲ್ವರಿಗೆ ಮಂಗನಕಾಯಿಲೆ ಸೋಂಕು ದೃಢಪಟ್ಟಿತ್ತು. ಹೀಗಾಗಿ ರಾಜ್ಯದಲ್ಲಿ ದಿನೇ ದಿನೇ ಮಂಗನ ಕಾಯಿಲೆ ಉಲ್ಬಣಗೊಳ್ಳುತ್ತಿದೆ ಎಂಬುದಾಗಿ ವರದಿಯಾಗಿತ್ತು. ಈ ಬೆನ್ನಲ್ಲೇ ರಾಜ್ಯದ ಎಪಿಎಲ್ ಕಾರ್ಡ್ ದಾರರಿಗೂ ಕೆಎಫ್ ಡಿ ರೋಗಕ್ಕೆ ಉಚಿತ ಚಿಕಿತ್ಸೆಯನ್ನು ನೀಡಲಾಗುವುದು ಅಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಲೆನಾಡು ಭಾಗಗಳಲ್ಲಿ ಹೆಚ್ಚು ಕಾಡುತ್ತಿರುವ ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ ಎಂದು ಹೇಳಿದ್ದಾರೆ.



ರಾಜ್ಯದಲ್ಲಿ ಕೆಎಫ್‌ಡಿ ಬಾಧಿತ ಎಪಿಎಲ್ ಕುಟುಂಬದ ಸದಸ್ಯರಿಗೆ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ. ಈಗಾಗಲೇ ಮಂಗನ ಕಾಯಿಲೆ ವಿರುದ್ಧ ನಿರ್ಣಾಯಕ ಹೆಜ್ಜೆಯಿಟ್ಟಿರುವ ನಮ್ಮ ಸರ್ಕಾರ ಐಸಿಎಂಆರ್ ಜೊತೆಗೆ ಚರ್ಚೆ ನಡೆಸಿದ್ದು, ಪ್ರಯೋಗಗಳ ಬಳಿಕ 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಸಿಗಲಿದೆ. ರಾಜ್ಯದ ಜನರ ಆರೋಗ್ಯ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ.

ಕ್ಯಾಸನೂರು ಫಾರೆಸ್ಟ್‌ ಡಿಸೀಸ್ (ಕೆಎಫ್‌ಡಿ) ನಿಯಂತ್ರಣಕ್ಕೆ ನಮ್ಮ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ. ರೋಗದಿಂದ ಬಾಧಿತರಾದವರಿಗೆ ಚಿಕಿತ್ಸೆ ಉಚಿತವಾಗಿದ್ದು, ಈ ಯೋಜನೆಯನ್ನು ಎಪಿಎಲ್‌ ಕುಟುಂಬಗಳಿಗೂ ವಿಸ್ತರಿಸಲಾಗಿದೆ. ಅಲ್ಲದೇ ರಾಜ್ಯದಲ್ಲಿ ಕೆ ಎಫ್ ಡಿ ಬಾಧಿತ ಎಪಿಎಲ್ ಕುಟುಂಬಕ್ಕೂ ಉಚಿತ ಚಿಕಿತ್ಸೆ ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಅಡಿ ನೋಂದಾಯಿಸಿಕೊಂಡಿರುವ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರೆಯಲಿದೆ. ಇದರಿಂದ ನೂರಾರು ಕುಟುಂಬಗಳಿಗೆ ಸಹಾಯವಾಗಲಿದೆ ಎಂದು ಆರೋಗ್ಯ ಸಚಿವರಾದ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

ರಾಜ್ಯವನ್ನು ಆನೆಕಾಲು ರೋಗದಿಂದ ಮುಕ್ತಗೊಳಿಸಲು ನಮ್ಮ ಸರ್ಕಾರ ಸಕಲ ಪ್ರಯತ್ನಗಳನ್ನು ನಡೆಸುತ್ತಿದ್ದು, ಆನೆಕಾಲು ರೋಗ ಪೀಡಿತರಿಗೆ ಮನೆ ಮನೆಗೆ ತೆರಳಿ ಉಚಿತ ಔಷಧಗಳನ್ನು ವಿತರಿಸಲಾಗುವುದು. ಈ ಯೋಜನೆಯು ಅಪಾಯದಲ್ಲಿರುವ 18.6 ಲಕ್ಷಕ್ಕೂ ಹೆಚ್ಚು ಜನರಿಗೆ ಪ್ರಯೋಜನ ನೀಡಲಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಕೇಂದ್ರ (NCVBDC)ದ ನೇತೃತ್ವದ ಲಿಂಫಾಟಿಕ್ ಫೈಲೇರಿಯಾಸಿಸ್ ನಿರ್ಮೂಲನೆ ತಡೆ ಕಾರ್ಯಕ್ರಮದ ಭಾಗವಾಗಿ ನಮ್ಮ ಸರ್ಕಾರ ಉಚಿತ ಔಷಧಿಗಳನ್ನು ಒದಗಿಸಲಿದೆ. ನಾಡಿನ ಜನತೆಗೆ ಉತ್ತಮ ಆರೋಗ್ಯ ಸೇವೆಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈಗಾಗಲೇ ಮಹತ್ವದ ಯೋಜನೆಗಳಿಗೆ ನಮ್ಮ ಸರ್ಕಾರ ಅನುಮೋದನೆ ನೀಡಿದ್ದು, ಜನರ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.