Bengaluru Stampede: ತಪ್ಪಿತಸ್ಥರ ಬಂಧನಕ್ಕೆ ಸಿದ್ಧವಾಗುರುತ್ತಿರುವಾಗಲೇ ಕಮಿಷನರ್ ಅಮಾನತು! ಸರ್ಕಾರದ ನಿರ್ಧಾರದಿಂದ ಆಘಾತಕ್ಕೊಳಗಾದ ಅಧಿಕಾರಿಗಳು! | Commissioner among other Suspended Amid Preparations to Arrest Culprits

Bengaluru Stampede: ತಪ್ಪಿತಸ್ಥರ ಬಂಧನಕ್ಕೆ ಸಿದ್ಧವಾಗುರುತ್ತಿರುವಾಗಲೇ ಕಮಿಷನರ್ ಅಮಾನತು! ಸರ್ಕಾರದ ನಿರ್ಧಾರದಿಂದ ಆಘಾತಕ್ಕೊಳಗಾದ ಅಧಿಕಾರಿಗಳು! | Commissioner among other Suspended Amid Preparations to Arrest Culprits

Last Updated:

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್‌​, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್‌.ಟಿ.ಶೇಖರ್ ಅವರನ್ನು ಅಮಾನತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಮಾನತಾದ ಕಮಿಷನರ್ ದಯಾನಂದ್, ಎಸಿಪಿ ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್ಅಮಾನತಾದ ಕಮಿಷನರ್ ದಯಾನಂದ್, ಎಸಿಪಿ ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್
ಅಮಾನತಾದ ಕಮಿಷನರ್ ದಯಾನಂದ್, ಎಸಿಪಿ ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್

ಬೆಂಗಳೂರು: ಬುಧವಾರ ಆರ್​ಸಿಬಿ ವಿಜಯಯಾತ್ರೆ (RCB Victory Parade) ಆಚರಣೆಯ ವೇಳೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂ (M Chinnaswamy Stadium) ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿರುವುದು ದೇಶಾದ್ಯಂತ ದೊಡ್ಡ ಸುದ್ದಿಯಾಗಿದೆ. 11 ಅಮಾಯಕರು ಪ್ರಾಣ ಕಳೆದುಕೊಂಡಿರುವುದಕ್ಕೆ ರಾಜ್ಯ ಸರ್ಕಾರ (State Government), ಆರ್​ಸಿಬಿ ಮಂಡಳಿ ಹಾಗೂ ಕೆಎಸ್​ಸಿಎ (KCSA) ಮಂಡಳಿ ವಿರುದ್ಧ ಕಿಡಿ ಕಾರಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್‌​, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್‌.ಟಿ.ಶೇಖರ್ ಅವರನ್ನು ಅಮಾನತು ಮಾಡಿದ್ದಾರೆ.

ಸಭೆ ನಡೆಯುತ್ತಿದ್ದಾಗಲೇ ಸಸ್ಪೆಂಡ್ ಆದೇಶ

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಘಟನೆಯ ತನಿಖೆಗೆ ಸಂಬಂಧಿಸಿದಂತೆ, ಬೆಂಗಳೂರು ಪೊಲೀಸ್ ಕಮೀಷನರ್ ತಮ್ಮ ಸರ್ಕಾರಿ ನಿವಾಸದಲ್ಲಿ ಒಂದು ಗೌಪ್ಯ ಸಭೆಯನ್ನು ನಡೆಸುತ್ತಿದ್ದರು. ಈ ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಎಸಿಪಿ ಬಾಲಕೃಷ್ಣ, ಡಿಪ್ಯುಟಿ ಕಮಿಷನರ್ ಆಫ್ ಪೊಲೀಸ್ (ಡಿಸಿಪಿ) ಶೇಖರ್ ಸೇರಿದಂತೆ ಇತರ ಉನ್ನತ ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯ ಉದ್ದೇಶವು ಈ ದುರಂತಕ್ಕೆ ಕಾರಣರಾದ ಮೂರು ಸಂಸ್ಥೆಗಳ (ಆರ್‌ಸಿಬಿ ಆಡಳಿತ ಮಂಡಳಿ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ-ಕೆಎಸ್‌ಸಿಎ, ಮತ್ತು ಈವೆಂಟ್ ಆಯೋಜಕರ ಸಂಸ್ಥೆ) ಮುಖ್ಯಸ್ಥರ ವಿರುದ್ಧ ಅರೆಸ್ಟ್ ಸಂಬಂಧಿತ ಕ್ರಮಗಳನ್ನು ಚರ್ಚಿಸುವುದಾಗಿತ್ತು. ಆದರೆ, ಈ ಸಭೆ ನಡೆಯುತ್ತಿರುವಾಗಲೇ ಕರ್ನಾಟಕ ಸರ್ಕಾರವು ಕಮಿಷನರ್ ಸೇರಿದಂತೆ ಐವರು ಉನ್ನತ ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿರುವ ಸುದ್ದಿ ಬಂದೆರಗಿದೆ. ಈ ಸುದ್ದಿ ಕೇಳಿ ಅಧಿಕಾರಿಗಳೆಲ್ಲಾ ಶಾಕ್ ಆಗಿದ್ದಾರೆ.

ಅಮಾನತುಗೊಂಡ ಅಧಿಕಾರಿಗಳು? 

ಬೆಂಗಳೂರು ಕಮಿಷನರ್ ದಯಾನಂದ್

ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ವಿಕಾಸ್

ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್‌.ಟಿ.ಶೇಖರ್

ಕಬ್ಬನ್ ಪಾರ್ಕ್ ಇನ್ಸ್ ಪೆಕ್ಟರ್ ಗಿರೀಶ್

ಎಸಿಪಿ ಬಾಲಕೃಷ್ಣ

ಸುದ್ದಿಗೋಷ್ಠಿಯ ಮುಖ್ಯಾಂಶಗಳು

  • ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರು ಜಸ್ಟೀಸ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನು ರಚಿಸಲಾಗಿದೆ.
  • ಆರ್ ಸಿ ಬಿ ಸಂಸ್ಥೆ ಹಾಗೂ ಕಾರ್ಯಕ್ರಮ ಆಯೋಜಕರಾದ ಡಿಎನ್​ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಈ ಮೂರು ಸಂಸ್ಥೆಗಳ ಪ್ರತಿನಿಧಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಂಡು, ಬಂಧಿಸಲು ಸೂಚನೆ ನೀಡಲಾಗಿದೆ. ಇವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
  • ಕಬ್ಬನ್ ಪಾರ್ಕ್ ಪೊಲೀಸ್ ಸ್ಟೇಷನ್ ಪೊಲೀಸ್ ಇನ್ಸಪೆಕ್ಞರ್ ಸೇರಿದಂತೆ ಆ ಭಾಗದ ಎಸಿಪಿ, ಸೆಂಟ್ರಲ್ ಡಿಸಿಪಿ , ಕ್ರೀಡಾಂಗಣದ ಉಸ್ತುವಾರಿ ವಹಿಸಿದ್ದ ಹೆಚ್ಚುವರಿ ಪೊಲೀಸ್ ಆಯುಕ್ತರು ಮತ್ತು ಬೆಂಗಳೂರು ನಗರದ ಪೊಲೀಸ್ ಕಮೀಷನರ್ ರನ್ನು ತಕ್ಷಣದಿಂದ ಅಮಾನತ್ತು ಗೊಳಿಸಲು ತೀರ್ಮಾನಿಸಲಾಗಿದೆ. ಈ ದುರಂತಕ್ಕೆ ಸಂಬಂಧಪಟ್ಟ ಚರ್ಚೆಯ ನಂತರ ತೆಗೆದುಕೊಂಡ ತೀರ್ಮಾನಗಳಾಗಿವೆ. ಉಪಮುಖ್ಯಮಂತ್ರಿಗಳು, ಗೃಹಸಚಿವರು, ಸಚಿವರಾದ ಎಚ್.ಕೆ.ಪಾಟೀಲ್, ಸುಧಾಕರ್ , ಮಹಾದೇವಪ್ಪ ಸೇರಿದಂತೆ ಅಧಿಕಾರಿಗಳು ಚರ್ಚೆ ನಡೆಸಿ ತೀರ್ಮಾನ.
  • ಮೇಲ್ನೋಟಕ್ಕೆ ಈ ಅಧಿಕಾರಿಗಳ ಬೇಜವಾಬ್ದಾರಿತನ, ಅಲಕ್ಷ್ಯ ಕಂಡುಬರುತ್ತಿದ್ದು, ಇವರುಗಳನ್ನು ಅಮಾನತುಗೊಳಿಸಲು ತೀರ್ಮಾನಿಸಲಾಗಿದೆ.
  • ನಾನು ಶಾಸಕರು, ಸಚಿವ, ಡಿಸಿಎಂ ಹಾಗೂ ಮುಖ್ಯಮಂತ್ರಿಯಾದ ನಂತರ ಇಂತಹ ಘಟನೆ ನಡೆದಿರಲಿಲ್ಲ. ಈ ಘಟನೆ ನಮ್ಮನ್ನು ಘಾಸಿಗೊಳಿಸಿದೆ.
  • ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತಾ, ಕುಟುಂಬದವರ ಜೊತೆ ಸರ್ಕಾರವಿದೆ ಎಂದು ಭರವಸೆ ನೀಡುತ್ತೇನೆ.
  • ನಿನ್ನೆ ಆದೇಶ ನೀಡಿದಂತೆ ಮ್ಯಾಜಿಸ್ಟ್ರೇಟ್ ತನಿಖೆ ಪ್ರಾರಂಭವಾಗಿದೆ. ಈ ಮಹಾದುರಂತದ ಬಗ್ಗೆ ಕೆಲವು ಮಾಹಿತಿಗಳು ದೊರೆತ ನಂತರ, ಸಚಿವಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಮೂರು ಸಂಸ್ಥೆಗಳು ವಿರುದ್ಧದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

Bengaluru Stampede: ಕಾಲ್ತುಳಿತ ಪ್ರಕರಣದ ತಪ್ಪಿತಸ್ಥರ ಬಂಧನಕ್ಕೆ ಸಿದ್ಧವಾಗುರುತ್ತಿರುವಾಗಲೇ ಕಮಿಷನರ್ ಅಮಾನತು! ಸರ್ಕಾರದ ನಿರ್ಧಾರದಿಂದ ಆಘಾತಕ್ಕೊಳಗಾದ ಅಧಿಕಾರಿಗಳು