Last Updated:
ಮಂಗಳೂರು ಕಂಬಳದ 9ನೇ ವರ್ಷಾಚರಣೆಯಲ್ಲಿ 9 ಚಟುವಟಿಕೆಗಳು, ರಾಣಿ ಅಬ್ಬಕ್ಕ ಚಿತ್ರ ಪ್ರದರ್ಶನ, ವಂದೇ ಮಾತರಂ ಗೀತ, ಪ್ರಶಸ್ತಿ ಪ್ರದಾನ, ಏಕ್ ಪೇಡ್ ಮಾ ಕೆ ನಾಮ್ ಕಾರ್ಯಕ್ರಮ, ಗಣ್ಯರ ಭಾಗವಹಿಸುವಿಕೆ.
ಮಂಗಳೂರು: ಸಂಸದ ಕ್ಯಾ.ಬ್ರಿಜೇಶ್ ಶೆಟ್ಟಿಯವರ ಸಾರಥ್ಯದಲ್ಲಿ ನಗರದ (City) ಬಂಗ್ರಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ನಡೆಯುವ 9ನೇ ವರ್ಷದ ಮಂಗಳೂರು (Mangaluru) ಕಂಬಳದಲ್ಲಿ ಈ ಬಾರಿ 9ವಿವಿಧ ಚಟುವಟಿಕೆಗಳನ್ನು ಆಯೋಜಿಸಲಾಗಿದೆ.
ಮಂಗಳೂರು ನಗರ ಪ್ರದೇಶದಲ್ಲಿ ಬೆಳೆದವರಿಗೆ ತುಳು ಸಂಸ್ಕೃತಿ ಕಂಬಳದ ಪರಿಚಯ ಆಗಬೇಕೆಂಬ ಉದ್ದೇಶದಿಂದ ಸಣ್ಣ ಪ್ರಯತ್ನವಾಗಿ 9ವರ್ಷದ ಹಿಂದೆ ಆರಂಭಗೊಂಡ ಮಂಗಳೂರು ಕಂಬಳ ಈಗ ಹೆಮ್ಮರವಾಗಿ ಬೆಳೆದಿದೆ. ಈ ಬಾರಿಯ ಕಂಬಳ ಡಿ.27ರಂದು ನಡೆಯಲಿದ್ದು, ಅಂದು ಬೆಳಗ್ಗೆ 8.30ಕ್ಕೆ ಕಂಕನಾಡಿ ಬ್ರಹ್ಮಬೈದ್ಯರ್ಕಳ ಗರೋಡಿಯ ಅಧ್ಯಕ್ಷ ಚಿತ್ತರಂಜನ್ ಶೆಟ್ಟಿ ಉದ್ಘಾಟಿಸಲಿದ್ದಾರೆ.
ಮಂಗಳೂರು ಕಂಬಳದಲ್ಲಿ ಪ್ರತೀ ವರ್ಷ ಹೊಸತನವನ್ನು ಪರಿಚಯಿಸಲಾಗುತ್ತಿದೆ. ಈ ಬಾರಿಯ 9ನೇ ವರ್ಷದ ಕಂಬಳಕ್ಕೆ 9ಚಟುವಟಿಕೆಗಳನ್ನು ಆಯೋಜಿಸಲಾಗಿದೆ. ರಾಣಿ ಅಬ್ಬಕ್ಕನ 500ನೇ ವರ್ಷದ ನೆನಪಿನಲ್ಲಿ ಚಾರಿತ್ರಿಕ ಚಿತ್ರ ಪ್ರದರ್ಶನ ಮಾಡಲಾಗುತ್ತಿದೆ. ವಂದೇ ಮಾತರಂ 150ನೇ ವರ್ಷದ ನೆನಪಿನಲ್ಲಿ 150ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ನೂರೈವತ್ತು ವಿದ್ಯಾರ್ಥಿನಿಯರಿಂದ ವಂದೇ ಮಾತರಂ ಸಾಮೂಹಿಕ ಗೀತ ಗಾಯನ ಉದ್ಘಾಟನೆಯ ದಿನ ಬೆಳಗ್ಗೆ 8.30ಕ್ಕೆ ನಡೆಯಲಿದೆ.
ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಹಾಗೂ ‘ಬ್ಯಾಕ್ ಟು ಊರು’ ಪರಿಕಲ್ಪನೆಗೆ ಶಕ್ತಿ ತುಂಬುತ್ತಿರುವ 9ಮಂದಿಗೆ ಮಂಗಳೂರು ಕಂಬಳ ಪ್ರಶಸ್ತಿ 2025 ನೀಡಿ ಗೌರವಿಸಲಾಗುವುದು. ಪ್ರಧಾನಿ ಮೋದಿಯವರ ನವ ಸಂಕಲ್ಪಗಳಲ್ಲಿ ಒಂದಾಗಿರುವ ‘ಏಕ್ ಪೇಡ್ ಮಾ ಕೆ ನಾಮ್ – ತಾಯಿಯ ಹೆಸರಿನಲ್ಲಿ ಒಂದು ಗಿಡ’ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ವಿಶೇಷ ಸಾಮರ್ಥ್ಯ ಹಾಗೂ ಓಲ್ಡ್ ಏಜ್ಡ್ ಹೋಮ್‌ನಲ್ಲಿ ನೆಲೆಸಿರುವ ಮಂಗಳೂರು ನಗರ ಪರಿಸರದ ನಿವಾಸಿಗಳನ್ನು ಕರೆತಂದು ಕಂಬಳ ವೀಕ್ಷಣೆಗೆ ಅವಕಾಶ ಮಾಡಿಕೊಡಲಾಗುವುದು.
ರಂಗ್‌ದ ಕೂಟ – ಹೆಸರಿನಲ್ಲಿ ಚಿತ್ರಕಲಾ ಸ್ಪರ್ಧೆಯು ರಂಗ್‌ದ ಕಿನ್ಯ, ರಂಗ್‌ದ ಎಲ್ಯ, ರಂಗ್‌ದ ಮಲ್ಲ ಹಾಗೂ ರಂಗ್‌ದ ಕೂಟ ವಿಭಾಗಗಳಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿರುತ್ತದೆ. ಮಂಗಳೂರು ಕಂಬಳದ ಕ್ಷಣಗಳನ್ನು ರೀಲ್ಸ್ ಮಾಡುವ ಮೂಲಕ ಅತೀ ಹೆಚ್ಚು ವೀಕ್ಷಣೆ ಪಡೆಯುವ ರೀಲ್ಸ್‌ಗೆ ಬಹುಮಾನವನ್ನು ನೀಡಲಾಗುವುದು. ಫೋಟೋಗ್ರಾಫಿ ಸ್ಪರ್ಧೆ ಆಯೋಜನೆ ಮಾಡಲಾಗಿದ್ದು, ನುರಿತ ತೀರ್ಪುಗಾರರ ಮೂಲಕ ಆಯ್ಕೆಯಾದ ಚಿತ್ರಕ್ಕೆ ನಗದು ಬಹುಮಾನ ನೀಡಲಾಗುವುದು. ಕೃತಕ ಬುದ್ಧಿಮತ್ತೆ (ಎಐ) ಉಪಯೋಗಿಸಿ ಮಂಗಳೂರು ಕಂಬಳ ಕಲಾಕೃತಿಯ ರಚಿಸುವ ಸ್ಪರ್ಧೆ ನಡೆಯಲಿದ್ದು ಉತ್ತಮ ಕಲಾಕೃತಿಗೆ ಬಹುಮಾನ ನೀಡಲಾಗುತ್ತದೆ.
ನೂರಾರು ಗಣ್ಯರು ಭಾಗವಹಿಸುವ ಸಭೆ
Dakshina Kannada,Karnataka