CSK vs PBKS: ಸಿಎಸ್​ಕೆ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! | ipl 2025 csk vs pbks punjab kings won the toss and elected to bowl first

CSK vs PBKS: ಸಿಎಸ್​ಕೆ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಪಂಜಾಬ್! | ipl 2025 csk vs pbks punjab kings won the toss and elected to bowl first

Last Updated:

IPL 2025ರ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಚೆಪಾಕ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.

ಚೆನ್ನೈ ಸೂಪರ್ ಕಿಂಗ್ಸ್  vs   ಪಂಜಾಬ್ ಕಿಂಗ್ಸ್ಚೆನ್ನೈ ಸೂಪರ್ ಕಿಂಗ್ಸ್  vs   ಪಂಜಾಬ್ ಕಿಂಗ್ಸ್
ಚೆನ್ನೈ ಸೂಪರ್ ಕಿಂಗ್ಸ್ vs ಪಂಜಾಬ್ ಕಿಂಗ್ಸ್

IPL 2025ರ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಪಂಜಾಬ್ ಕಿಂಗ್ಸ್ ಮುಖಾಮುಖಿಯಾಗಿವೆ. ಚೆಪಾಕ್‌ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್​ ಗೆದ್ದ ಪಂಜಾಬ್ ಕಿಂಗ್ಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಈಗಾಗಲೇ ಬಹುತೇಕ ಟೂರ್ನಿಯಿಂದ ಹೊರಬಿದ್ದಿರುವ ಚೆನ್ನೈ ಸೂಪರ್ ಕಿಂಗ್ಸ್, ಅಭಿಮಾನಿಗಳಿಗಾಗಿ ಉಳಿದಿರುವ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಗುರಿ ಹೊಂದಿದೆ. ನಿಯಮಿತ ನಾಯಕ ಋತುರಾಜ್ ಗಾಯಕ್ವಾಡ್ ಗಾಯಗೊಂಡ ನಂತರ ಎಂಎಸ್ ಧೋನಿ ನಾಯಕತ್ವದಲ್ಲಿ ಚೆನ್ನೈ ತಂಡದ ಪ್ರದರ್ಶನ ತುಂಬಾ ಕಳಪೆಯಾಗಿದ್ದು, ತಂಡವು ಏಳು ಸೋಲುಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಅದೇ ಸಮಯದಲ್ಲಿ, ಪಂಜಾಬ್ ಕಿಂಗ್ಸ್ ತಂಡದ ಕೊನೆಯ ಪಂದ್ಯ ಮಳೆಯಿಂದಾಗಿ ರದ್ದಾಯಿತು, ಇದರಿಂದಾಗಿ ತಂಡವು ಅಂಕಗಳನ್ನು ಹಂಚಿಕೊಂಡಿದ್ದು, ಶ್ರೇಯಸ್ ಅಯ್ಯರ್ ನೇತೃತ್ವದ ತಂಡ ಪಾಯಿಂಟ್ಸ್ ಪಟ್ಟಿಯಲ್ಲಿ 5 ನೇ ಸ್ಥಾನದಲ್ಲಿದೆ. ಇಂದಿನ ಪಂದ್ಯ ಗೆದ್ದರೆ ಪಂಜಾಬ್ 2ನೇ ಸ್ಥಾನಕ್ಕೆ ಲಗ್ಗೆಯಿಡಲಿದೆ.

ಗ್ಲೆನ್ ಮ್ಯಾಕ್ಸ್ ವೆಲ್ ಔಟ್

ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಒಂದು ಬದಲಾವಣೆ ಮಾಡಿಕೊಂಡಿದೆ. ಬೆರಳು ಗಾಯ ಮಾಡಿಕೊಂಡಿರುವ ಆಸೀಸ್ ಆಲ್​ರೌಂಡರ್ ಗ್ಲೆನ್ ಮ್ಯಾಕ್ಸ್​ ವೆಲ್  ಪಂದ್ಯದಿಂದ ಹೊರಗುಳಿದಿದ್ದಾರೆ. ಹಜ್ಮತ್​ವುಲ್ಲಾ ಒಮರ್ಜೈ ಆಡುತ್ತಿದ್ದಾರೆ. ಕೇವಲ ಮೂವರು ವಿದೇಶಿ ಆಟಗಾರರನ್ನ ಮಾತ್ರ ಪಂಜಾಬ್ ಕಣಕ್ಕಿಳಿಸಿದೆ. ಇತ್ತ ಚೆನ್ನೈ ಸೂಪರ್ ಕಿಂಗ್ಸ್ ಕಳೆದ ಪಂದ್ಯದಲ್ಲಿ ಆಡಿಸಿದ್ದ ತಂಡವನ್ನೇ ಕಣಕ್ಕಿಳಿಸಿದೆ.

ಹೆಡ್​ ಟು ಹೆಡ್​ ದಾಖಲೆ

ಎರಡೂ ತಂಡಗಳು ಇಲ್ಲಿಯವರೆಗೆ ಐಪಿಎಲ್​​ನಲ್ಲಿ 32 ಪಂದ್ಯಗಳನ್ನಾಡಿದ್ದು, ಚೆನ್ನೈ ಸೂಪರ್ ಕಿಂಗ್ಸ್ 17ರಲ್ಲಿ ಗೆಲುವು ಸಾಧಿಸಿದರೆ, ಪಂಜಾಬ್ ಕಿಂಗ್ಸ್ ಒಂದು ಸೂಪರ್ ಓವರ್​ ಸೇರಿ 15ರಲ್ಲಿ ಗೆಲುವು ಪಡೆದಿದೆ. ಕಳೆದ ಮುಖಾಮುಖಿಯಲ್ಲಿ ಪಂಜಾಬ್ ಕಿಂಗ್ಸ್ 18 ರನ್‌ಗಳಿಂದ ಜಯಗಳಿಸಿತ್ತು.

ಚೆನ್ನೈನಲ್ಲಿ ನಡೆದಿರುವ 8 ಪಂದ್ಯಗಳಲ್ಲಿ ಎರಡೂ ತಂಡಗಳು ತಲಾ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ.  ಪಂಜಾಬ್ ಕಿಂಗ್ಸ್ ಒಂದು ಸೂಪರ್ ಓವರ್​ ಸೇರಿ 4 ಪಂದ್ಯಗಳಲ್ಲಿ ಗೆದ್ದಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್

ಪಂಜಾಬ್ ಕಿಂಗ್ಸ್ ಪ್ಲೇಯಿಂಗ್ XI: ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೀ), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಸೂರ್ಯಾಂಶ್ ಶೆಡ್ಜ್, ಹರ್‌ಪ್ರೀತ್ ಬ್ರಾರ್, ಮಾರ್ಕೊ ಜಾನ್ಸೆನ್, ಅಜ್ಮತುಲ್ಲಾ ಒಮರ್ಜಾಯ್, ಅರ್ಶ್‌ದೀಪ್ ಸಿಂಗ್, ಯುಜ್ವೇಂದ್ರ ಚಹಲ್

ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಯಿಂಗ್ XI: ಶೇಕ್ ರಶೀದ್, ಆಯುಷ್ ಮ್ಹಾತ್ರೆ, ಸ್ಯಾಮ್ ಕರ್ರನ್, ರವೀಂದ್ರ ಜಡೇಜಾ, ಡೆವಾಲ್ಡ್ ಬ್ರೆವಿಸ್, ಶಿವಂ ದುಬೆ, ದೀಪಕ್ ಹೂಡಾ, ಎಂಎಸ್ ಧೋನಿ (ಸಿ ಮತ್ತು ವಿಕೆ), ನೂರ್ ಅಹ್ಮದ್, ಖಲೀಲ್ ಅಹ್ಮದ್, ಮತೀಶ್ ಪತೀರಣ