Dakshina Kannada: ಈ ಗ್ರಾಮದಲ್ಲಿ ಸಂಭವಿಸುತ್ತಿದ್ದ ಆಕಸ್ಮಿಕ ಸಾವುಗಳಿಗೆ ಊರಿನ ಜನ ಹುಡುಕಿದ ಪರಿಹಾರವೇನು ಗೊತ್ತಾ? | This village people of Dakshina Kannada did Maha Mrityunjaya Homa for sudden death

Dakshina Kannada: ಈ ಗ್ರಾಮದಲ್ಲಿ ಸಂಭವಿಸುತ್ತಿದ್ದ ಆಕಸ್ಮಿಕ ಸಾವುಗಳಿಗೆ ಊರಿನ ಜನ ಹುಡುಕಿದ ಪರಿಹಾರವೇನು ಗೊತ್ತಾ? | This village people of Dakshina Kannada did Maha Mrityunjaya Homa for sudden death

Last Updated:

ಮೃತ್ಯು ಭಯವನ್ನು ಶಮನಗೊಳಿಸಲು ಮಹಾ ಮೃತ್ಯುಂಜಯ ಯಾಗ ಮಾಡಲಾಗುತ್ತೆ. ಇದೀಗ ಕುಂಪಲ ಗ್ರಾಮದಲ್ಲಿಯೂ ಈ ಯಾಗ ನಡೆಸಲಾಗಿದ್ದು, ಸಕಾರಾತ್ಮಕ ವಾತಾವರಣ ಸೃಷ್ಟಿಯಾಗಿದೆ.

X

ವಿಡಿಯೋ ಇಲ್ಲಿ ನೋಡಿ

ದಕ್ಷಿಣ ಕನ್ನಡ: ದಕ್ಷಿಣಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಗ್ರಾಮದಲ್ಲಿ(Dakshina Kannada District Kumpala Village) ಇತ್ತೀಚಿನ ಕೆಲವು ದಿನಗಳಲ್ಲಿ ಸಾಲು-ಸಾಲು ಗ್ರಾಮಸ್ಥರ ಅಕಾಲಿಕ ಮೃತ್ಯು ಇಲ್ಲಿನ ಜನರನ್ನು ಬೆಚ್ಚಿಬೀಳಿಸಿತ್ತು. 2019 ರಿಂದ ಈವರೆಗೆ ಸುಮಾರು 50 ಕ್ಕೂ ಹೆಚ್ಚು ಮಂದಿ ವಯಸಲ್ಲದ ವಯಸ್ಸಿಗೆ ಅಪಮೃತ್ಯುಗೆ ಒಳಗಾಗಿದ್ದರು. ಹೆಚ್ಚಿನ ಮಂದಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ರೆ, ಇನ್ನೂ ಕೆಲವರು ಅಪಘಾತ, ಮಾರಣಾಂತಿಕ ಕಾಯಿಲೆಗಳಿಗೆ ತುತ್ತಾಗಿ ಜೀವ ಕಳೆದುಕೊಂಡಿದ್ದರು. ಅದರಲ್ಲೂ ರೂಪದರ್ಶಿಯಾಗಿದ್ದ ಪ್ರೇಕ್ಷಾ ಎಂಬ ಯುವತಿ ನೇಣಿಗೆ ಕೊರಳೊಡ್ಡಿದರೆ, ಅಶ್ವಿನಿ ಬಂಗೇರ ಎಂಬ ಯುವತಿ ಗೃಹಪ್ರವೇಶವಾದ ಐದೇ ದಿನದಲ್ಲಿ ತನ್ನದೇ ನೂತನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದರಿಂದ ಕಂಗೆಟ್ಟ ಊರ ಮಂದಿ ಕುಂಪಲದ ಆದಿಶಕ್ತಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ(Goddess Chamundeshwari Temple) ದೈವಜ್ಞರ ಮೂಲಕ ಪ್ರಶ್ನಾಚಿಂತನೆಯನ್ನಿಟ್ಟರು.

ಸಮಸ್ಯೆಗೆ ಪರಿಹಾರ ಮಹಾ ಮೃತ್ಯುಂಜಯ ಹೋಮ

ಕರಾವಳಿ, ಕೇರಳ ಭಾಗದಲ್ಲಿ ಸಾಕಷ್ಟು ಮಹತ್ವ ಪಡೆದುಕೊಂಡಿರುವ ಈ ಪ್ರಶ್ನಾ ಚಿಂತನೆಯಲ್ಲಿ ಕುಂಪಲ ಗ್ರಾಮದ ಜನತೆಯ ಸರಣಿ ಸಾವಿಗೆ ದೈವದ ಮುನಿಸೇ ಕಾರಣ ಎಂಬ ಸುಳಿವು ಸಿಕ್ಕಿತು. ಇದರ ಜೊತೆ ಗ್ರಾಮದ ಜನರ ಅಕಾಲಿಕ ಮರಣಕ್ಕೆ ತಡೆ ನೀಡಲು ಮಹಾ ಮೃತ್ಯುಂಜಯ ಯಾಗ ನಡೆಸಲು ಸೂಚಿಸಲಾಗಿತ್ತು. ಅದರಂತೆ ಈ ಸಾವು- ನೋವು ತಡೆಯಲು ಕುಂಪಲದಲ್ಲಿ ಮಹಾ ಮೃತ್ಯುಂಜಯ ಹೋಮ ನಡೆಸಲಾಯಿತು.

ಇದನ್ನೂ ಓದಿ: Dakshina Kannada: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನ ಕಂಡು ಪುಳಕಿತಗೊಂಡ ಜನರು!

ದೈವದ ಮುನಿಸಿನಿಂದ ಸಾಲು-ಸಾಲು ಸಾವು

ದೈವಜ್ಞರ ಮೂಲಕ ನಡೆದ ಪ್ರಶ್ನಾಚಿಂತನೆಯಲ್ಲಿ ಕುಂಪಲ ಗ್ರಾಮದ ಪೂರ್ವ ದಿಕ್ಕಿನಲ್ಲಿ ದೈವ ಸಾನಿಧ್ಯ ಇರುವ ಬಗ್ಗೆ ಸುಳಿವು ಸಿಕ್ಕಿತ್ತು. ಆದ್ರೆ ಈ ದೈವದ ಗುಡಿ ಪಾಳು ಬಿದ್ದು ದೈವಕ್ಕೆ ಕಾಲಾದಿಯಲ್ಲಿ ನಡೆಯುವ ಪೂಜೆ, ಪುನಸ್ಕಾರಗಳು ನಿಂತಿರುವ ಬಗ್ಗೆ ಗೋಚರವಾಗಿದೆ. ಹೀಗಾಗಿ ದೈವ ಅಸಮಾಧಾನಗೊಂಡು ತನ್ನ ರೂಪವನ್ನು ಋಣಾತ್ಮಕವಾಗಿ ತೋರಿಸುತ್ತಿದೆ ಎಂದು ತಿಳಿದುಬಂದಿದೆ. ಈ ದೈವಸ್ಥಾನ ಬೆಳಗುವ ಮೊದಲು ಗ್ರಾಮದಲ್ಲಿ ಮಹಾ ಮೃತ್ಯುಂಜಯ ಯಾಗ ನಡೆಸುವಂತೆ ಪ್ರಶ್ನೆಯಲ್ಲಿ ಕಂಡುಬಂದಿತ್ತು. ಹೀಗಾಗಿ ಮೃತ್ಯು ಪಾಶದಿಂದ ಪಾರಾಗಲು ಹಿಂದೂ ಧರ್ಮದಲ್ಲಿ ನಡೆಸಲಾಗುವ ಮಹಾ ಮೃತ್ಯುಂಜಯ ಯಾಗವನ್ನು ಕುಂಪಲದ ಚಾಮುಂಡೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಸಲಾಯಿತು.

ಮೃತ್ಯು ಭಯ ಶಮನಗೊಳಿಸಲು ಯಾಗ!

ಗ್ರಾಮದ ಕೇಸರಿ ಮಿತ್ರ ವೃಂದ ಹಾಗೂ ಗ್ರಾಮಸ್ಥರು ಸೇರಿ ಪುರೋಹಿತ ವೃಂದದ ನೇತೃತ್ವದಲ್ಲಿ, ವೇದ ಮಂತ್ರ ಪಠಣಗಳೊಂದಿಗೆ ಅತೀದೊಡ್ಡ ಯಾಗ ನಡೆಸಲಾಯಿತು. ಗ್ರಾಮದ ಜನ 21 ದಿನಗಳ ವ್ರತಾಚರಣೆಯನ್ನು ಮಾಡಿ ಭಕ್ತಿ-ಭಾವದಿಂದ ಯಾಗದಲ್ಲಿ ಭಾಗಿಯಾದರು. ಮೃತ್ಯು ಭಯವನ್ನು ಶಮನಗೊಳಿಸಲು ಮಹಾ ಮೃತ್ಯುಂಜಯ ಯಾಗ ಮಾಡಲಾಗುತ್ತೆ. ಇದೀಗ ಕುಂಪಲ ಗ್ರಾಮದಲ್ಲಿಯೂ ಈ ಯಾಗ ನಡೆಸಲಾಗಿದ್ದು, ಸಕಾರಾತ್ಮಕ ವಾತಾವರಣ ಸೃಷ್ಟಿಯಾಗಿದೆ.

ಒಟ್ಟಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದರೂ ಸಹ ಅಗೋಚರವಾದ ಶಕ್ತಿಗಳು ಇಂದಿಗೂ ಜೀವಂತವಾಗಿವೆ ಎಂದು ಪದೇ ಪದೇ ಸಾಬೀತಾಗುತ್ತಿದೆ. ಮುಂದಿನ ದಿನಗಳಲ್ಲಾದರೂ ಕುಂಪಲ ಗ್ರಾಮದಲ್ಲಿ ಧುರಿತಗಳು ನಿಂತು ಮನೆ- ಮನೆಯಲ್ಲಿ ನೆಮ್ಮದಿ ನೆಲೆಯೂರುತ್ತಾ ಎಂದು ಕಾದು ನೋಡಬೇಕಾಗಿದೆ.

Disclaimer

ಇಲ್ಲಿ ನೀಡಿರುವ ಎಲ್ಲಾ ಮಾಹಿತಿಯನ್ನು ಜ್ಯೋತಿಷ್ಯ ಶಾಸ್ತ್ರಜ್ಞರು ಮತ್ತು ತಜ್ಞರನ್ನು ಸಂಪರ್ಕಿಸಿ ರಾಶಿ, ಧರ್ಮ ಮತ್ತು ಶಾಸ್ತ್ರಗಳಿಗೆ ಅನುಸಾರವಾಗಿ ನೀಡಲಾಗಿದೆ. ಯಾವುದೇ ಘಟನೆ-ದುರ್ಘಟನೆ ಅಥವಾ ಲಾಭ-ನಷ್ಟಗಳು ಕೇವಲ ಕಾಕತಾಳೀಯ. ಸಾರ್ವಜನಿಕ ಹಿತದೃಷ್ಟಿಯಿಂದ ಜ್ಯೋತಿಷಿಗಳ ಮಾಹಿತಿ ನೀಡಲಾಗಿದೆ. ಇಲ್ಲಿ ತಿಳಿಸಿರುವ ಯಾವುದೇ ಮಾಹಿತಿಯನ್ನು ಲೋಕಲ್ 18 ವ್ಯಕ್ತಿಗತವಾಗಿ ಸಮರ್ಥಿಸಿಕೊಳ್ಳುವುದಿಲ್ಲ.