Last Updated:
ಕುಮಾರಧಾರಾ ನದಿಯಲ್ಲಿ ನಿರ್ಮಿಸಿದ ಜಳಕದ ಗುಂಡಿಯಲ್ಲಿ ದೇವರ ಅವಭೃತೋತ್ಸವದ ಧಾರ್ಮಿಕ ವಿಧಿವಿಧಾನವನ್ನು ಪ್ರಧಾನ ಅರ್ಚಕರು ಪೂರೈಸಿದ್ದಾರೆ. ದೇವರ ಜಳಕದ ಬಳಿಕ ಕುಮಾರಧಾರ ನದಿತೀರದ ಅವಭೃತಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನೆರವೇರಿದೆ.
ದಕ್ಷಿಣಕನ್ನಡ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ(Kukke Subramanya) ಚಂಪಾಷಷ್ಠಿ ಜಾತ್ರಾ ಮಹೋತ್ಸವ(Champashashti Jatra Mahotsav) ಸಂಪನ್ನಗೊಂಡಿದೆ. ಮುಕ್ತಾಯದಲ್ಲಿ ಕುಕ್ಕೆ ಸ್ವಾಮಿಯ ಅವಭೃತ ಸ್ನಾನವೂ ಕ್ಷೇತ್ರದ ಹಲವು ಆಕರ್ಷಕ ಧಾರ್ಮಿಕ ಆಚರಣೆಗಳಲ್ಲಿ ಒಂದು. ಉತ್ಸವ ಮುಗಿದ ಬಳಿಕ ಸುಬ್ರಹ್ಮಣ್ಯ ಸ್ವಾಮಿ ಕುಮಾರಾಧಾರಾ ನದಿಯಲ್ಲಿ ಅವಭೃತಸ್ನಾನ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಹಸ್ರಾರು ಸಂಖ್ಯೆಯ ಭಕ್ತಾದಿಗಳೂ(Devotees) ಶ್ರೀ ದೇವರ ಅವಭೃತ ಸ್ನಾನದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡಿ ಕೃತಾರ್ಥರಾಗಿದ್ದಾರೆ.
ಬೆಳಗ್ಗೆ ದೇವಳದ ದ್ವಾದಶಿ ಮಂಟಪದಲ್ಲಿ ಓಕುಳಿ ಪೂಜೆ ಮತ್ತು ಓಕುಳಿ ಚೆಲ್ಲಾಟ ನೆರವೇರಿದೆ. ಬಳಿಕ ದೇವರಿಗೆ ಓಕುಳಿ ಸಮರ್ಪಣೆಯಾಗಿ ಭಕ್ತಾದಿಗಳಿಗೆ ಓಕುಳಿ ಪ್ರೋಕ್ಷ ಣೆ ಮತ್ತು ಓಕುಳಿ ಚೆಲ್ಲಾಟ ನಡೆದಿದೆ. ನಂತರ ಶ್ರೀ ದೇವರ ಅವಭೃತೋತ್ಸವ ಸವಾರಿ ಶ್ರೀ ದೇವಳದಿಂದ ಹೊರಟು, ಬಿಲದ್ವಾರದ ಕಟ್ಟೆಯಲ್ಲಿ ಕಟ್ಟೆಪೂಜೆ ನೆರವೇರಿದೆ.
ಇದನ್ನೂ ಓದಿ: Belagavi: ಗಡಿಯಲ್ಲಿ ಕನ್ನಡಕ್ಕೆ ಕುತ್ತು- ಶಾಲಾ ಪಠ್ಯ ಪುಸ್ತಕ ಹಂಚುವಲ್ಲಿ ವಿಳಂಬ
ಬಳಿಕ ಕುಮಾರಧಾರ ನದಿಯ ಮತ್ಸ್ಯತೀರ್ಥದಲ್ಲಿ ಶ್ರೀ ದೇವರ ನೌಕಾ ವಿಹಾರ ನಡೆದಿದೆ. ಮಾವು, ಬಾಳೆ, ತಳಿರು-ತೋರಣ ಮತ್ತು ಹೂವುಗಳಿಂದ ಸಿಂಗರಿಸಲ್ಪಟ್ಟ ಅವಳಿ ದೋಣಿಗಳನ್ನು ಒಂದಾಗಿಸಿ ನಿರ್ಮಿಸಿದ ತೆಪ್ಪದಲ್ಲಿ ಕುಕ್ಕೆ ಸುಬ್ರಹ್ಮಣ್ಯನ ನೌಕಾವಿಹಾರ ನಡೆದಿದೆ. ಕುಮಾರಧಾರಾ ನದಿಯಲ್ಲಿ ನಿರ್ಮಿಸಿದ ಜಳಕದ ಗುಂಡಿಯಲ್ಲಿ ದೇವರ ಅವಭೃತೋತ್ಸವದ ಧಾರ್ಮಿಕ ವಿಧಿವಿಧಾನವನ್ನು ಪ್ರಧಾನ ಅರ್ಚಕರು ಪೂರೈಸಿದ್ದಾರೆ. ದೇವರ ಜಳಕದ ಬಳಿಕ ಕುಮಾರಧಾರ ನದಿತೀರದ ಅವಭೃತಕಟ್ಟೆಯಲ್ಲಿ ದೇವರಿಗೆ ವಿಶೇಷ ಕಟ್ಟೆಪೂಜೆ ನೆರವೇರಿದೆ.
ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರ ನೌಕಾವಿಹಾರ ಮತ್ತು ಅವಭೃತೋತ್ಸವದ ಸಂದರ್ಭದಲ್ಲಿ ಕ್ಷೇತ್ರದ ಗಜರಾಣಿ ಯಶಸ್ವಿ ಎಲ್ಲರಂತೆ ತಾನೂ ಕೂಡಾ ಸ್ನಾನ ಮಾಡಿ ಜಲಕ್ರೀಡೆಯಲ್ಲಿ ಸಂಭ್ರಮಿಸಿತು. ಆನೆ ನದಿಯಲ್ಲಿ ಪುಟ್ಟ ಮಕ್ಕಳಂತೆ ತಾನೂ ಕೂಡಾ ನೀರಿನಲ್ಲಿ ಮುಳುಗೇಳುತ್ತಾ , ತನ್ನ ಸೊಂಡಿಲಿನಿಂದ ನೀರನ್ನು ಹಾರಿಸುತ್ತಾ, ನೀರಲ್ಲಿ ಈಜಾಡಿತು. ಶ್ರೀ ದೇವರ ನೌಕಾ ವಿಹಾರದ ಸಮಯದಲ್ಲಿ ದೇವರಿಗೆ ನಮಸ್ಕರಿಸಿತು.
Dakshina Kannada,Karnataka
December 10, 2024 5:19 PM IST