Dakshina Kannada: ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಈ ಬಾರಿ ಮತ್ತೆ ಏರಿಕೆ; ರಾಜ್ಯದ ಅತೀ ಶ್ರೀಮಂತ ದೇಗುಲ ಎನ್ನುವ ಗರಿ! | Kukke Subramanya Temple Income Rises to 155 Crore Secures First Place

Dakshina Kannada: ಕುಕ್ಕೆ ಸುಬ್ರಹ್ಮಣ್ಯ ಆದಾಯದಲ್ಲಿ ಈ ಬಾರಿ ಮತ್ತೆ ಏರಿಕೆ; ರಾಜ್ಯದ ಅತೀ ಶ್ರೀಮಂತ ದೇಗುಲ ಎನ್ನುವ ಗರಿ! | Kukke Subramanya Temple Income Rises to 155 Crore Secures First Place

Last Updated:

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಕಂಡು, ರಾಜ್ಯದ ಶ್ರೀಮಂತ ದೇವಸ್ಥಾನ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

X

ಇಲ್ಲಿ ವಿಡಿಯೋ ನೋಡಿ

ದಕ್ಷಿಣ ಕನ್ನಡ: ಕರ್ನಾಟಕದ (Karnataka) ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ (Kukke Subramanya Temple) ಆದಾಯದಲ್ಲಿ ಈ ಬಾರಿ ಮತ್ತೆ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂಪಾಯಿ ಏರಿಕೆ ಕಂಡಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂಪಾಯಿ ಇದ್ದ ಆದಾಯ (Income) ಈ ಬಾರಿ 155.95 ರಷ್ಟು ಹೆಚ್ಚಾಗಿದೆ. ಅಂದರೆ ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ ರೂ ಆದಾಯ ಏರಿಕೆ ಆಗಿದೆ. ಆ ಮೂಲಕ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತೆ ರಾಜ್ಯದ ಶ್ರೀಮಂತ ದೇವಸ್ಥಾನ (Rich Temple) ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ.

ವರ್ಷದಿಂದ ವರ್ಷಕ್ಕೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರಿ ಹೆಚ್ಚಳವಾಗುತ್ತಿದೆ. ಕಳೆದ ವರ್ಷವೂ ಪ್ರಥಮ ಸ್ಥಾನದಲ್ಲಿತ್ತು. ಈ ಬಾರಿ ಕೂಡ ವಾರ್ಷಿಕ ಆದಾಯದಲ್ಲಿ ಏರಿಕೆಯಿಂದಾಗಿ ಮತ್ತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ತನ್ನ ಪ್ರಥಮ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ಶಕ್ತಿ ಯೋಜನೆ ಪರಿಣಾಮ ಕುಕ್ಕೆ ದೇವಸ್ಥಾನದ ಆದಾಯದಲ್ಲಿ ಹೆಚ್ಚಳವಾಗಿದೆ ಎನ್ನಲಾಗುತ್ತಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿ ಇಲಾಖೆಯಡಿ ಬರುತ್ತದೆ. ಇನ್ನು ಕುಕ್ಕೆ ಶ್ರೀ ಸುಬ್ರಹ್ಮಣ್ಯ ನಾಗಾರಾಧನೆಯ ಪ್ರಮುಖ ಕ್ಷೇತ್ರವಾಗಿದ್ದು, ಕರ್ನಾಟಕ ಸೇರಿದಂತೆ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಆಗಮಿಸುತ್ತಾರೆ. ಸರ್ಪ ಸಂಸ್ಕಾರ ಸೇರಿದಂತೆ ವಿವಿಧ ಸೇವೆ ಹಾಗೂ ಇತರ ಮೂಲಗಳಿಂದ ಒಟ್ಟು 155.95 ಕೋಟಿ ರೂ ಆದಾಯವಾಗಿದೆ. ದೇವಸ್ಥಾನದ ಒಟ್ಟು ಖರ್ಚು 79.82 ಕೋಟಿ ರೂ.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವರ್ಷವಾರು ಆದಾಯ ಈ ಕೆಳಗಿನಂತೆ ಏರಿಕೆಯಾಗಿದ್ದು,

2011-12 ರಲ್ಲಿ 56.24 ಕೋಟಿ ರೂ.

2020-21ರಲ್ಲಿ 68.94 ಕೋಟಿ ರೂ.

2021-22 ರಲ್ಲಿ 72.73 ಕೋಟಿ ರೂ.

2022-23ರಲ್ಲಿ 123 ಕೋಟಿ ರೂ.

2023-24 146.01 ಕೋಟಿ ರೂಪಾಯಿಯಷ್ಟಾಗಿದೆ.

ಇದನ್ನೂ ಓದಿ: Chamarajanagara: 35 ದಿನಗಳಲ್ಲಿ 3 ಕೋಟಿ, 47 ಗ್ರಾಂ ಚಿನ್ನ; ಹೊಸ ದಾಖಲೆ ಬರೆದ ಮಲೆ ಮಹದೇಶ್ವರ

ಅತೀ ಹೆಚ್ಚು ಆದಾಯ ಗಳಿಸುವ ದೇವಾಲಯಗಳ ಪಟ್ಟಿಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಪ್ರಥಮ ಸ್ಥಾನದಲ್ಲಿದ್ದರೆ, ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ದೇವಸ್ಥಾನ ಎರಡನೇ ಸ್ಥಾನದಲ್ಲಿದೆ. ಈ ದೇವಸ್ಥಾನದ ಆದಾಯ 31 ಕೋಟಿ ರೂ. ಅದೇ ರೀತಿಯಾಗಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನವು 20 ಕೋಟಿ ರೂ.ಗಳ ಅಂದಾಜು ಆದಾಯದೊಂದಿಗೆ ಮೂರನೇ ಸ್ಥಾನದಲ್ಲಿದೆ.