ಗುರುವಾರ ಸಂಜೆಯಿಂದ ಶ್ರೀ ದೇವರ ಪೇಟೆ ಸವಾರಿ ಆರಂಭಗೊಳ್ಳಲಿದೆ. ಪೇಟೆ ಸವಾರಿಯುದ್ದಕ್ಕೂ ಪ್ರತಿ ಕಟ್ಟೆಯಲ್ಲೂ ಶ್ರೀ ದೇವರು ಪೂಜೆ ಸ್ವೀಕರಿಸಲಿದ್ದಾರೆ. ರಾತ್ರಿ ಅಂಕುರಾರ್ಪಣೆ ಬಲಿ ಹೊರಟು ಉತ್ಸವ, ಬೊಳುವಾರು ಶ್ರೀರಾಮಪೇಟೆ ಕಾರ್ಜಾಲು, ರಕೇಶ್ವರಿ ದೇವಸ್ಥಾನ, ಕಲ್ಲೇಗ, ಕರ್ಮಲ ಸವಾರಿ ನಡೆಯಲಿದೆ. 11 ಕ್ಕೆ ಮಧ್ಯಾಹ್ನ ಕೆ.ಎಸ್.ಆರ್.ಟಿ.ಸಿ ಪುತ್ತೂರು ವಿಭಾಗದವರಿಂದ ಮಧ್ಯಾಹ ಅನಸಂತರ್ಪಣೆ ನಡೆದಿದೆ. ರಾತ್ರಿ ನೆಲ್ಲಿಕಟ್ಟೆ, ಸಾಲ್ಮರ, ಸೂತ್ರ ಬೆಟ್ಟು ಸವಾರಿ, ಏ.13 ಕ್ಕೆ ಶಿವಸೇಟೆ, ತೆಂಕಿಲ, ಕೊಟ್ಟಬೆಟ್ಟು ಎಳ್ಳಾಡುಗುತ್ತು, ಬೈಪಾಸ್ ಹೆದ್ದಾರಿ, ರಾಧಾಕೃಷ್ಣ ಮಂದಿರ ಸವಾರಿ ನಡೆಯಲಿದೆ.
ಏ.13 ರಂದು ಮೇಷ ಸಂಕ್ರಮಣ ಕೋರ್ಟ್ ರಸ್ತೆ, ಸೈನಿಕ ಭವನ ರಸ್ತೆ, ಬಪ್ಪಳಿಗೆ, ಉರ್ಲಾಂಡಿ, ಬೊಳುವಾರುಬೈಲು ಸವಾರಿ, ಏ.14 ರಂದು ಸೌರಮಾನ ಯುಗಾದಿ (ವಿಷು) ಬೆಳಿಗ್ಗೆ ಉತ್ಸವ, ವಸಂತಕಟ್ಟೆಪೂಜೆ, ರಾತ್ರಿ ಉತ್ಸವ, ಬಂಡಿ ಉತ್ಸವ, ಕೊಂಬೆಟ್ಟು, ಬೊಳುವಾರು, ಹಾರಾಡಿ, ತಾಳಪಾಡಿ, ದ್ರಾವಿಡ ಬ್ರಾಹ್ಮಣ ಹಾಸ್ಟೇಲ್, ಸಕ್ಕೆರೆಕಟ್ಟಿ ಸವಾರಿ, ಏ.15ಕ್ಕೆ ಬನ್ನೂರು, ಅಶೋಕನಗರ, ರೈಲ್ವೇ ಮಾರ್ಗ ಸವಾರಿ, ಏ.16 ಕ್ಕೆ ಬೆಳಿಗ್ಗೆ ತುಲಾಭಾರ ಸೇವೆ, ರಾತ್ರಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಮಾಮೂಲು ಪ್ರಕಾರ ಬರುವ ಕಿರುವಾಳು, ಪಾಲಕಿ ಉತ್ಸವ, ಸಣ್ಣರಥೋತ್ಸವ,
ಕೆರೆ ಉತ್ಸವ, ತೆಪ್ಪೋತ್ಸವ ನಡೆಯಲಿದೆ.
ಏ.17 ರಂದು ಬೆಳಿಗ್ಗೆ ಉತ್ಸವ ವಸಂತಕಟ್ಟೆಪೂಜೆ, ದರ್ಶನ ಬಲಿ, ಬಟ್ಟಲು ಕಾಣಿಕೆ, ರಾತ್ರಿ ಗಂಟೆ 7.30 ರಿಂದ ಉತ್ಸವ, ಸಿಡಿಮದ್ದು ಪ್ರದರ್ಶನ (ಪುತ್ತೂರು ಬೆಡಿ), ಬ್ರಹ್ಮರಥೋತ್ಸವ ನಡೆಯಲಿದೆ. ಬಳಿಕ ಬಂಗಾರ್ ಕಾಯರ್‌ಕಟ್ಟೆ ಸವಾರಿ, ಶ್ರೀ ದಂಡನಾಯಕ ಉಳ್ಳಾಲ್ತಿ ದೈವಗಳ ಬೀಳ್ಕೊಡುಗೆ, ಶ್ರೀ ಭೂತಬಲಿ, ಶಯನ ನಡೆಯಲಿದೆ. ಏ.18 ಕ್ಕೆ ಬೆಳಿಗ್ಗೆ ಗಂಟೆ 7.30 ಕ್ಕೆ ಬಾಗಿಲು ತೆರೆಯುವ ಮುಹೂರ್ತ, ತುಲಾಭಾರ ಸೇವೆ, ಸಂಜೆ ಗಂಟೆ 3.30 ರಿಂದ ವೀರಮಂಗಲ ಅವನೃತ ಸ್ನಾನಕ್ಕೆ ಸವಾರಿ ನಡೆಯಲಿದೆ. ಏ.19 ಕ್ಕೆ ಬೆಳಗ್ಗೆ ಧ್ವಜಾರೋಹಣ, ರಾತ್ರಿ ಚೋರ್ಕೋತ್ಸವ ವಸಂತ ಪೂಜೆ ಪ್ರಾರಂಭಗೊಳ್ಳಲಿದೆ. ಹುಲಿ ಭೂತ, ರಕೇಶ್ವರಿ ನೇಮ ನಡೆಯಲಿದೆ. ಏ.20 ಕ್ಕೆ ಸಂಪ್ರೋಕ್ಷಣೆ, ರಾತ್ರಿ ಮಂತ್ರಾಕ್ಷತೆ, ಅಂಣತ್ತಾಯ, ಪಂಜುರ್ಲಿ, ವಗೈರೆ ದೈವಗಳ ನೇಮ ನಡೆಯಲಿದೆ.
Dakshina Kannada,Karnataka
April 13, 2025 12:19 PM IST