DC vs KKR: ಕೊಲ್ಕತ್ತಾ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ! ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಕೆಕೆಆರ್ ತಂಡದಲ್ಲಿ ಒಂದು ಬದಲಾವಣೆ | IPL 2025 DC have won the toss and choose to bowling first against KKR

DC vs KKR: ಕೊಲ್ಕತ್ತಾ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ! ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಕೆಕೆಆರ್ ತಂಡದಲ್ಲಿ ಒಂದು ಬದಲಾವಣೆ | IPL 2025 DC have won the toss and choose to bowling first against KKR

Last Updated:

ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಿದ್ದು, ಟಾಸ್ ಗೆದ್ದ ಡಿಸಿ ಬೌಲಿಂಗ್ ಆಯ್ಕೆ.

ಡಿಸಿ vs ಕೆಕೆಆರ್ಡಿಸಿ vs ಕೆಕೆಆರ್
ಡಿಸಿ vs ಕೆಕೆಆರ್

ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) 2025ರ ಇಂದಿನ (ಏಪ್ರಿಲ್ 29) ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (DC) ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ (KKR) ತಂಡಗಳು ದೆಹಲಿಯ ಅರುಣ್ ಜೇಟ್ಲಿ (Arun Jaitley) ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ನಾಯಕ ಅಕ್ಸರ್ ಪಟೇಲ್ (Aksar Patel) ಮೊದಲು ಬೌಲಿಂಗ್ ಆಯ್ದುಕೊಂಡರು.

ಉಭಯ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ 9 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಡೆಲ್ಲಿ 6 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಹಾಗೂ ಇದಕ್ಕೆ ವಿರುದ್ಧ ಎಂಬಂತೆ ಡೆಲ್ಲಿ ಕ್ಯಾಪಿಟಲ್ಸ್ 3 ಗೆಲುವು 5 ಸೋಲು ಹಾಗೂ ಒಂದು ಟೈನೊಂದಿಗೆ 7 ಅಂಕದೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 7ನೇ ಸ್ಥಾನದಲ್ಲಿದೆ. ಮಾತ್ರವಲ್ಲ, ಈ ಬಾರಿ ಸೆಮಿಫೈನಲ್ ಪ್ರವೇಶ ಪಡೆಯಬೇಕೆಂದರೆ ಕೆಕೆಆರ್ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಇನ್ನೂ ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೂ 34 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಕೊಲ್ಕತಾ ನೈಟ್ ರೈಡರ್ಸ್ 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ಡೆಲ್ಲಿ ಕ್ಯಾಪಿಟಲ್ಸ್ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನೂ 1 ಪಂದ್ಯ ರದ್ದಾಗಿದೆ.  ಉಭಯ ತಂಡಗಳ ಪ್ಲೇಯಿಂಗ್ 11 ನೋಡುವುದಾದ್ರೆ.

ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೀ ), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರೋವ್ಮನ್ ಪೊವೆಲ್, ಹರ್ಷಿತ್ ರಾಣಾ, ಅನುಕುಲ್ ರಾಯ್, ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ.

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್(ಕೀಪರ್), ಕರುಣ್ ನಾಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್  ಸ್ಥಾನ ಪಡೆದುಕೊಂಡಿದ್ದಾರೆ.

ಕನ್ನಡ ಸುದ್ದಿ/ ನ್ಯೂಸ್/ಕ್ರೀಡೆ/

DC vs KKR: ಕೊಲ್ಕತ್ತಾ ವಿರುದ್ಧ ಟಾಸ್ ಗೆದ್ದ ಡೆಲ್ಲಿ ಬೌಲಿಂಗ್ ಆಯ್ಕೆ! ಗೆಲ್ಲಲೇಬೇಕಾದ ಒತ್ತಡದಲ್ಲಿರುವ ಕೆಕೆಆರ್ ತಂಡದಲ್ಲಿ ಒಂದು ಬದಲಾವಣೆ