ಟಾಸ್ ಸೋತು ಬ್ಯಾಟಿಂಗ್ ಇಳಿದ ಕೆಕೆಆರ್ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕರಾದ ರೆಹ್ಮಾನುಲ್ಲಾ ಗುರ್ಬಜ್ ಹಾಗೂ ನರೈನ್ ಮೊದಲ ವಿಕೆಟ್ ಜೊತೆಯಾಟದಲ್ಲಿ 3 ಓವರ್ಗಳಲ್ಲೇ 48 ರನ್ ಸೇರಿಸಿದರು. ಗುರ್ಬಜ್ 12 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 26 ರನ್ಗಳಿಸಿದರೆ, ನರೈನ್ 16 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸಹಿತ 27 ರನ್ಗಳಿಸಿದರು. ನಾಯಕ ಅಜಿಂಕ್ಯಾ ರಹಾನೆ 14 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಿತ 26 ರನ್ಗಳಿಸಿದರು.
ಉತ್ತಮ ಆರಂಭ ಪಡೆದಿದ್ದ ಕೆಕೆಆರ್ ಕೆಲವು ರನ್ಗಳ ಅಂತರದಲ್ಲಿ ವಿಕೆಟ್ ಕಳೆದುಕೊಂಡಿತು. 23 ಕೋಟಿ ಪಡೆದಿರುವ ವೆಂಕಟೇಶ್ ಅಯ್ಯರ್ 5 ಎಸೆತಗಳಲ್ಲಿ ಕೇವಲ 7 ರನ್ಗಳಿಸಿ ಔಟ್ ಆದರು.ಆದರೆ ಯುವ ಆಟಗಾರ ಅಂಗ್ಕ್ರಿಸ್ ರಘುವಂಶಿ 32 ಎಸೆತಗಳಲ್ಲಿ 3 ಬೌಂಡರಿ, 2 ಸಿಕ್ಸರ್ ಸಹಿತ 44 ರನ್ಗಳಿಸಿದರು. ಇದು ತಂಡದ ಗರಿಷ್ಠ ಸ್ಕೋರ್ ಆಯಿತು. ರಿಂಕು ಸಿಂಗ್ 25 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 36 ರನ್ಗಳಿಸಿದರು. ಆ್ಯಂಡ್ರೆ ರಸೆಲ್ 9 ಎಸೆತಗಳಲ್ಲಿ 2 ಬೌಂಡರಿ, 1 ಸಿಕ್ಸರ್ ಸಹಿತ 17 ರನ್ಗಳಿಸಿದರು.
ಕೊನೆಯ ಓವರ್ನಲ್ಲಿ ಮಿಚೆಲ್ ಸ್ಟಾರ್ಕ್ ಕೇವಲ 9 ರನ್ ನೀಡಿದ 2 ವಿಕೆಟ್ ಪಡೆದರು. ಒಟ್ಟಾರೆ 4 ಓವರ್ಗಳಲ್ಲಿ 43 ರನ್ ನೀಡಿ 3 ವಿಕೆಟ್ ಉಡಾಯಿಸಿದರು. ವಿಪ್ರಜ್ ನಿಗಮ್ 41ಕ್ಕೆ 2, ಅಕ್ಷರ್ ಪಟೇಲ್ 27ಕ್ಕೆ2, ದುಷ್ಮಂತ್ ಚಮೀರಾ 46ಕ್ಕೆ1 ವಿಕೆಟ್ ಪಡೆದು ಮಿಂಚಿದರು.
2025ರ ಐಪಿಎಲ್‌ನಲ್ಲಿ 2 ತಂಡಗಳ ಪ್ರದರ್ಶನ
ಉಭಯ ತಂಡಗಳು ಈ ಬಾರಿಯ ಐಪಿಎಲ್‌ನಲ್ಲಿ 9 ಪಂದ್ಯಗಳನ್ನು ಆಡಿದ್ದು, ಇದರಲ್ಲಿ ಡೆಲ್ಲಿ 6 ಗೆಲುವು ಹಾಗೂ 3 ಸೋಲಿನೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಹಾಗೂ ಇದಕ್ಕೆ ವಿರುದ್ಧ ಎಂಬಂತೆ ಡೆಲ್ಲಿ ಕ್ಯಾಪಿಟಲ್ಸ್ 3 ಗೆಲುವು 5 ಸೋಲು ಹಾಗೂ ಒಂದು ಟೈನೊಂದಿಗೆ 7 ಅಂಕದೊಂದಿಗೆ ಪಾಯಿಂಟ್ಸ್ ಟೇಬಲ್‌ನಲ್ಲಿ 7ನೇ ಸ್ಥಾನದಲ್ಲಿದೆ. ಮಾತ್ರವಲ್ಲ, ಈ ಬಾರಿ ಸೆಮಿಫೈನಲ್ ಪ್ರವೇಶ ಪಡೆಯಬೇಕೆಂದರೆ ಕೆಕೆಆರ್ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
ಹೆಡ್ ಟು ಹೆಡ್ ದಾಖಲೆ
ಇನ್ನೂ ಐಪಿಎಲ್ ಇತಿಹಾಸದಲ್ಲಿ ಉಭಯ ತಂಡಗಳು ಇದುವರೆಗೂ 34 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಕೊಲ್ಕತಾ ನೈಟ್ ರೈಡರ್ಸ್ 18 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ರೆ, ಡೆಲ್ಲಿ ಕ್ಯಾಪಿಟಲ್ಸ್ 15 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇನ್ನೂ 1 ಪಂದ್ಯ ರದ್ದಾಗಿದೆ.
ಉಭಯ ತಂಡಗಳ ಪ್ಲೇಯಿಂಗ್ 11
ಕೋಲ್ಕತ್ತಾ ನೈಟ್ ರೈಡರ್ಸ್ (ಪ್ಲೇಯಿಂಗ್ XI): ರಹಮಾನುಲ್ಲಾ ಗುರ್ಬಾಜ್ (ವಿಕೀ ), ಸುನಿಲ್ ನರೈನ್, ಅಜಿಂಕ್ಯ ರಹಾನೆ (ನಾಯಕ), ವೆಂಕಟೇಶ್ ಅಯ್ಯರ್, ರಿಂಕು ಸಿಂಗ್, ಆಂಗ್ಕ್ರಿಶ್ ರಘುವಂಶಿ, ಆಂಡ್ರೆ ರಸೆಲ್, ರೋವ್ಮನ್ ಪೊವೆಲ್, ಹರ್ಷಿತ್ ರಾಣಾ, ಅನುಕುಲ್ ರಾಯ್, ವರುಣ್ ಚಕ್ರವರ್ತಿ ಸ್ಥಾನ ಪಡೆದಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್(ಕೀಪರ್), ಕರುಣ್ ನಾಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ದುಷ್ಮಂತ ಚಮೀರಾ, ಮುಖೇಶ್ ಕುಮಾರ್ ಸ್ಥಾನ ಪಡೆದುಕೊಂಡಿದ್ದಾರೆ.
April 29, 2025 9:27 PM IST