Last Updated:
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಆ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 207 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತು.
ಇಂಡಿಯನ್ ಪ್ರೀಮಿಯರ್ ಲೀಗ್ 66ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಪಂಜಾಬ್ ಕಿಂಗ್ಸ್ ತಂಡಗಳು ಜೈಪುರದ ಸವಾಯಿ ಮಾನ್ಸಿಂಗ್ ಕ್ರಿಕೆಟ್ ಮೈದಾನದಲ್ಲಿ ಜರುಗಿತು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ಪರವಾಗಿ ನಾಯಕ ಶ್ರೇಯಸ್ ಅಯ್ಯರ್ ಅಬ್ಬರದ ಅರ್ಧಶತಕ ಹಾಗೂ ಮಾರ್ಕಸ್ ಸ್ಟೋಯಿನಸ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಆ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ 207 ರನ್‌ಗಳ ಬೃಹತ್ ಟಾರ್ಗೆಟ್ ನೀಡಿತು.