Delhi Earthquake: ಬೆಳ್ಳಂಬೆಳಗ್ಗೆ ದೆಹಲಿಯಲ್ಲಿ ಪ್ರಬಲ ಭೂಕಂಪ; ನಿದ್ರೆಯಲ್ಲಿದ್ದ ರಾಷ್ಟ್ರ ರಾಜಧಾನಿ ಜನರಿಗೆ ಶಾಕ್!
ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್ಸಿಆರ್ನಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಈ ಭೂಕಂಪ ಸಂಭವಿಸಿದೆ.
ದೆಹಲಿ-ಎನ್ಸಿಆರ್ನಲ್ಲಿ (Delhi NCR) ಇಂದು ಮುಂಜಾನೆ ತೀವ್ರ ಭೂಕಂಪನ (Earthquake) ಸಂಭವಿಸಿದೆ. ಈ ಭೂಕಂಪ ಎಷ್ಟು ಪ್ರಬಲವಾಗಿತ್ತೆಂದರೆ ಹಾಸಿಗೆಯಿಂದ ಕಿಟಕಿಯವರೆಗೆ ಎಲ್ಲವೂ ಅಲುಗಾಡಲು ಪ್ರಾರಂಭಿಸಿತು. ಹಲವು ವರ್ಷಗಳ ನಂತರ, ಸೋಮವಾರ ಬೆಳಿಗ್ಗೆ ದೆಹಲಿ-ಎನ್ಸಿಆರ್ನಲ್ಲಿ ಇಂತಹ ಬಲವಾದ ಭೂಕಂಪನದ ಅನುಭವವಾಗಿದೆ. ಭೂಕಂಪದ ಪರಿಣಾಮವಾಗಿ ಭೂಮಿಯು ಕೆಲವು ಸೆಕೆಂಡುಗಳ ಕಾಲ ನಡುಗಿತು (Trembled). ಗಾಢ ನಿದ್ರೆಯಲ್ಲಿದ್ದ (Deep Sleep) ಜನರು ಸಹ ಭಯದಿಂದ ಮನೆಗಳಿಂದ ಹೊರಗೆ ಓಡಲು ಪ್ರಾರಂಭಿಸಿದರು.
ಈ ಭೂಕಂಪದಲ್ಲಿ ಯಾವುದೇ ಹಾನಿಯಾದ ಬಗ್ಗೆ ಇದುವರೆಗೆ ಮಾಹಿತಿ ಬಂದಿಲ್ಲ. ದೆಹಲಿ, ನೋಯ್ಡಾ, ಗಾಜಿಯಾಬಾದ್ ಮತ್ತು ಗುರುಗ್ರಾಮ್ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್ಸಿಆರ್ನಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಈ ಭೂಕಂಪ ಸಂಭವಿಸಿದೆ.