GT vs DC: ಡೆಲ್ಲಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗುಜರಾತ್! ಟೈಟಾನ್ಸ್‌ಗೆ ಘಾತಕ ವೇಗಿ ಕಂಬ್ಯಾಕ್ | Gujarat Titans Have Won the toss and choose to bowling first against to DC

GT vs DC: ಡೆಲ್ಲಿ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗುಜರಾತ್! ಟೈಟಾನ್ಸ್‌ಗೆ ಘಾತಕ ವೇಗಿ ಕಂಬ್ಯಾಕ್ | Gujarat Titans Have Won the toss and choose to bowling first against to DC

Last Updated:

ಗುಜರಾತ್ ಟೈಟನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ಮುಖಾಮುಖಿ. ಟಾಸ್ ಗೆದ್ದ ಗುಜರಾತ್ ಮೊದಲು ಬೌಲಿಂಗ್ ಆಯ್ಕೆ. ಡೆಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿ.

ಡೆಲ್ಲಿ ಕ್ಯಾಪಿಟಲ್ಸ್  vs ಪಂಜಾಬ್ಡೆಲ್ಲಿ ಕ್ಯಾಪಿಟಲ್ಸ್  vs ಪಂಜಾಬ್
ಡೆಲ್ಲಿ ಕ್ಯಾಪಿಟಲ್ಸ್ vs ಪಂಜಾಬ್

ಇಂಡಿಯನ್ ಪ್ರೀಮಿಯ್ ಲೀಗ್ (IPL) 60 ನೇ ಪಂದ್ಯದಲ್ಲಿ ಟೂರ್ನಿಯ ಎರಡು ಬಲಿಷ್ಠ ತಂಡಗಳಾದ ಗುಜರಾತ್ ಟೈಟನ್ಸ್ (GT) ಹಾಗೂ ಡೆಲ್ಲಿ ಕ್ಯಾಪಿಟಲ್ಸ್ (DC) ತಂಡಗಳು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಮೈದಾದನಲ್ಲಿ ಮುಖಾಮುಖಿಯಾಗಲಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮಾನ್ ಗಿಲ್ (Shubhman Gill) ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಟೂರ್ನಿಯನ್ನು ಉತ್ತಮವಾಗಿ ಆರಂಭಿಸಿದ ಡೆಲ್ಲಿ ಕ್ಯಾಪಿಟಲ್ಸ್ ಬಳಿಕ ನಿರಂತರವಾಗಿ ಸೋಲುವ ಮೂಲಕ ಸಂಕಷ್ಟಕ್ಕೆ ಸಿಲುಕಿದೆ. ಹಾಗಾಗಿ ಡೆಲ್ಲಿ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿ.

ಐಪಿಎಲ್‌ನಲ್ಲಿ ಇದುವರೆಗೆ ಉಭಯ ತಂಡಗಳು 6 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಉಭಯ ತಂಡಗಳು ತಲಾ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿವೆ. ಇನ್ನು ಕಳೆದ ಕೆಲವು ಪಂದ್ಯಗಳಿಂದ ಹೊರಗುಳಿದಿದ್ದ ಕಗಿಸೋ ರಬಾಡ ಗುಜರಾತ್ ತಂಡಕ್ಕೆ ಮರಳಿದ್ದು, ತಂಡಕ್ಕೆ ಮತ್ತಷ್ಟು ಬಲ ತಂದುಕೊಟ್ಟಿದೆ.

ಐಪಿಎಲ್ 2025 ರಲ್ಲಿ 11 ಪಂದ್ಯಗಳನ್ನು ಆಡಿರುವ ಗುಜರಾತ್ ಟೈಟಾನ್ಸ್ 8 ಪಂದ್ಯಗಳಲ್ಲಿ ಗೆದ್ದು, 8 ರಲ್ಲಿ ಸೋಲುವ ಮೂಲಕ 16 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಇಂದಿನ ಪಂದ್ಯವನ್ನು ಗೆದ್ದರೆ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೆ ಏರಲಿದೆ, ಹಾಗೂ ತನ್ನ ಪ್ಲೇ ಆಫ್ ಸ್ಥಾನವನ್ನು ಖಚಿತಪಡಿಸಿಕೊಳ್ಳಲಿದೆ.

ಇನ್ನೂ ಟೂರ್ನಿಯಲ್ಲಿ ಉತ್ತಮ ಆರಂಭ ಕಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ಸತತ ಸೋಲುಗಳಿಂದ ಸಂಕಷ್ಟಕ್ಕೆ ಸಿಲುಕಿದೆ. ಸದ್ಯ ಆಡಿರುವ 11 ಪಂದ್ಯಗಳಲ್ಲಿ 6 ಗೆಲುವು 4 ಸೋಲು ಹಾಗೂ 1 ಪಂದ್ಯ ರದ್ದಾಗುವ ಮೂಲಕ 13 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 5ನೇ ಸ್ಥಾನದಲ್ಲಿದೆ. ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ಇಂದಿನ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಡೆಲ್ಲಿ ಕ್ಯಾಪಿಟಲ್ಸ್ (ಪ್ಲೇಯಿಂಗ್ XI): ಫಾಫ್ ಡು ಪ್ಲೆಸಿಸ್, ಅಭಿಷೇಕ್ ಪೊರೆಲ್, ಸಮೀರ್ ರಿಜ್ವಿ, ಕೆಎಲ್ ರಾಹುಲ್(ವಿಕೀ), ಅಕ್ಷರ್ ಪಟೇಲ್(ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಕುಲದೀಪ್ ಯಾದವ್, ಟಿ ನಟರಾಜನ್, ಮುಸ್ತಫಿಜುರ್ ರೆಹಮಾನ್

ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ಶುಭಮನ್ ಗಿಲ್ (ನಾಯಕ), ಜೋಸ್ ಬಟ್ಲರ್ (ವಿಕೀ), ಶೆರ್ಫೇನ್ ರುದರ್‌ಫೋರ್ಡ್, ಶಾರುಖ್ ಖಾನ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಕಗಿಸೊ ರಬಾಡ, ಅರ್ಷದ್ ಖಾನ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ