Last Updated:
ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಿನ ಮೊದಲ ಟಿ20 ಪಂದ್ಯ ಅಕ್ಟೋಬರ್ 29 ರಂದು ಕ್ಯಾನ್‌ಬೆರಾದ ಮನುಕಾ ಓವಲ್‌ನಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಹೆಸರು ಚರ್ಚೆ ಆಗುತ್ತಿದೆ.
ಭಾರತ ಮತ್ತು ಆಸ್ಟ್ರೇಲಿಯಾ(India vs Australia) ನಡುವಿನ ಐದು ಪಂದ್ಯಗಳ ಟಿ20 ಸರಣಿ(T20 series) ನಾಳೆ ಅಂದರೆ ಅಕ್ಟೋಬರ್ 29 ರಿಂದ ಆರಂಭವಾಗಲಿವೆ. ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ(Team India) ಏಕದಿನ ಸರಣಿಯನ್ನು 2-1 ಅಂತರದಿಂದ ಸೋತಿದೆ. ಭಾರತ ಮತ್ತು ಆಸ್ಟ್ರೇಲಿಯಾ ಯಾವಾಗಲೂ ಪರಸ್ಪರ ಪೈಪೋಟಿ ನಡೆಸುತ್ತಿವೆ. ಆಸೀಸ್ ನೆಲದಲ್ಲಿ ರೋಹಿತ್ ಶರ್ಮಾ(Rohit Sharma) ಮತ್ತು ವಿರಾಟ್ ಕೊಹ್ಲಿ(Virat Kohli) ಇಲ್ಲದೆ ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿಯನ್ನು ಟೀಮ್ ಇಂಡಿಯಾ ಆಡುತ್ತಿರುವುದು ಇದೇ ಮೊದಲು. ಆದರೆ, ಟಿ20 ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾದ ಸ್ಪೋಟಕ ಬ್ಯಾಟರ್ ಅಭಿಷೇಕ್ ಶರ್ಮಾ(Abhishek Sharma) ಹೆಸರು ಸದ್ದು ಮಾಡುತ್ತಿದೆ.
ಅಭಿಷೇಕ್ ಶರ್ಮಾ ಆಸ್ಟ್ರೇಲಿಯಾ ತಂಡಕ್ಕೆ ಕಂಟಕವಾಗಬಹುದು. ಹೀಗಾಗಿ ಟಿ20 ಸರಣಿ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್ ನೀಡಿರುವ ಅಚ್ಚರಿ ಹೇಳಿಕೆ ಸಂಚಲನ ಮೂಡಿಸಿದೆ. ಇದರ ಬೆನ್ನಲ್ಲೇ ಅಭಿಷೇಕ್ ಶರ್ಮಾ ಅಗ್ರೆಸ್ಸೀವ್ ಬ್ಯಾಟಿಂಗ್ಗೆ ಕಾಂಗೂರು ಪಡೆ ಹೆದರಿದ್ಯಾ? ಎಂಬ ಪ್ರಶ್ನೆ ಎದುರಾಗಿದೆ.
ಆಸ್ಟ್ರೇಲಿಯಾ ವಿರುದ್ಧ ಟಿ20 ಸರಣಿ ಭಾರತ ತಂಡಕ್ಕೆ ನಿರ್ಣಾಯಕವಾಗಲಿದೆ. ಏಕದಿನ ಸೋಲಿನ ನಂತರ ಟೀಮ್ ಇಂಡಿಯಾ ಈ ಪ್ರವಾಸವನ್ನು ಗೆಲುವಿನೊಂದಿಗೆ ಕೊನೆಗೊಳಿಸುವ ನಿರೀಕ್ಷೆಯಲ್ಲಿದೆ. ಸರಣಿ ಆರಂಭಕ್ಕೂ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಆಸ್ಟ್ರೇಲಿಯಾದ ನಾಯಕ ಮಿಚೆಲ್ ಮಾರ್ಷ್ ಅಭಿಷೇಕ್ ಶರ್ಮಾ ಬಗ್ಗೆ ಮಾತನಾಡಿದ್ದಾರೆ. ಅಭಿಷೇಕ್ ಶರ್ಮಾ ಆಸ್ಟ್ರೇಲಿಯಾ ತಂಡಕ್ಕೆ ಸವಾಲಾಗಬಹುದು ಎಂದು ಮಿಚೆಲ್ ಮಾರ್ಷ್ ಹೇಳಿದ್ದಾರೆ. ಆಸೀಸ್ ಆಟಗಾರರು ಅಭಿಷೇಕ್ ಶರ್ಮಾ ಆಗಮನಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಅಭಿಷೇಕ್ ಅವರ ಹೆಸರು ಹೆಚ್ಚು ಚರ್ಚೆ ಆಗುತ್ತಿದೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಮಿಚೆಲ್ ಮಾರ್ಷ್, ಅಭಿಷೇಕ್ ಒಬ್ಬ ಪ್ರತಿಭಾನ್ವಿತ ಆಟಗಾರ. ಅವರು ತಮ್ಮ ತಂಡಕ್ಕಾಗಿ ಇನ್ನಿಂಗ್ಸ್ ಆರಂಭಿಸುವುದರ ಜೊತೆಗೆ ಬಿಗ್ ಇನ್ನಿಂಗ್ಸ್ ಆಡುತ್ತಾರೆ. ಅವರು ಈ ಹಿಂದೆ ಸನ್‌ರೈಸರ್ಸ್ ಹೈದರಾಬಾದ್ ಪರ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅಭಿಷೇಕ್ ನಮಗೆ ದೊಡ್ಡ ಸವಾಲಾಗಿರುತ್ತಾರೆ ಎಂಬುದರಲ್ಲಿ ಸಂದೇಹವಿಲ್ಲ. ಆದರೆ ಅಂತಹ ಗ್ರೇಟ್ ಆಟಗಾರನ ವಿರುದ್ಧ ತನ್ನನ್ನು ತಾನು ಪರೀಕ್ಷಿಸಿಕೊಳ್ಳಲು ಇದು ಒಂದು ಉತ್ತಮ ಅವಕಾಶವಾಗಿದೆ. ನಾವು ಅವರಿಗಾಗಿ ಕಾತರದಿಂದ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಅಭಿಷೇಕ್ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನವನ್ನು 2024 ರಲ್ಲಿ ಪ್ರಾರಂಭಿಸಿದರು. ಅವರು ಟೀಮ್ ಇಂಡಿಯಾ ಪರ 24 ಪಂದ್ಯಗಳಲ್ಲಿ 23 ಇನ್ನಿಂಗ್ಸ್‌ಗಳಲ್ಲಿ 196.90 ರ ಅದ್ಭುತ ಸ್ಟ್ರೈಕ್ ರೇಟ್‌ನಲ್ಲಿ 849 ರನ್ ಗಳಿಸಿದ್ದಾರೆ. ಅಭಿಷೇಕ್ ಎರಡು ಶತಕಗಳು ಮತ್ತು ಐದು ಅರ್ಧಶತಕಗಳನ್ನು ಬಾರಿಸಿದ್ದಾರೆ. ಅವರ ವೃತ್ತಿಜೀವನದ ಗರಿಷ್ಠ ಸ್ಕೋರ್ 135 ರನ್‌ಗಳು. ಅಭಿಷೇಕ್ ತಮ್ಮ ಸಣ್ಣ ವೃತ್ತಿಜೀವನದಲ್ಲಿ 60 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ.
October 28, 2025 8:31 PM IST