Last Updated:
ನಾಯಕ ಶುಭ್ಮನ್ ಗಿಲ್ (114) ಮತ್ತು ರವೀಂದ್ರ ಜಡೇಜಾ (41) ಅಜೇಯರಾಗಿ ಉಳಿದಿದ್ದಾರೆ. ಇಬ್ಬರೂ 99 ರನ್ಗಳ ಜೊತೆಯಾಟ ನಡೆಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದ್ದಾರೆ.
ಆಂಡರ್ಸನ್-ತೆಂಡೂಲ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಪಂದ್ಯ ಭಾರತ ಮತ್ತು ಇಂಗ್ಲೆಂಡ್ ನಡುವೆ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಇಂಗ್ಲೆಂಡ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನ ಮೊದಲ ದಿನ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಕಳೆದುಕೊಂಡು 304 ರನ್ ಗಳಿಸಿದೆ. ನಾಯಕ ಶುಭ್ಮನ್ ಗಿಲ್ (114) ಮತ್ತು ರವೀಂದ್ರ ಜಡೇಜಾ (41) ಅಜೇಯರಾಗಿ ಉಳಿದಿದ್ದಾರೆ. ಇಬ್ಬರೂ ಅರ್ಧಶತಕದ ಜೊತೆಯಾಟ ನಡೆಸಿ 2ನೇ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದ್ದಾರೆ.
ಬ್ಯಾಟಿಂಗ್ ಆರಂಭಿಸಿದ ಭಾರತ ತಂಡ ಇನ್ನಿಂಗ್ಸ್‌ನ ಒಂಬತ್ತನೇ ಓವರ್ ನಲ್ಲಿ ಮೊದಲ ಆಘಾತ ಎದುರಿಸಿತು. ಕೆಎಲ್ ರಾಹುಲ್ 26 ಎಸೆತಗಳಲ್ಲಿ ಕೇವಲ 2 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಕ್ರಿಸ್ ವೋಕ್ಸ್ ರಾಹುಲ್ರನ್ನ ಕ್ಲೀನ್ ಬೌಲ್ಡ್ ಮಾಡಿದರು. ನಂತರ ಜೈಸ್ವಾಲ್ ಜೊತೆ ಸೇರಿದ ಕರುಣ್ ನಾಯರ್ 50 ಎಸೆತಗಳಲ್ಲಿ 31 ರನ್ ಗಳಿಸಿ ಔಟಾದರು. ಆದರೆ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನ ಮುಂದುವಿರಿಸದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 107 ಎಸೆತಗಳಲ್ಲಿ 87 ರನ್ ಗಳಿಸಿ ಔಟಾದರು. ಜೈಸ್ವಾಲ್ 2ನೇ ವಿಕೆಟ್ ಜೊತೆಯಾಟದಲ್ಲಿ ಕರುಣ್ ನಾಯರ್ ಜೊತೆ ಸೇರಿ80 ರನ್ ಸೇರಿಸಿದರು. ನಂತರ ಗಿಲ್ ಜೊತೆಗೆ 66 ರನ್ ಸೇರಿಸಿ ಬೆನ್ ಸ್ಟೋಕ್ಸ್ಗೆ ವಿಕೆಟ್ ಒಪ್ಪಿಸಿದರು.
ಕಳೆದ ಪಂದ್ಯದಲ್ಲಿ ಎರಡೂ ಇನ್ನಿಂಗ್ಸ್‌ನಲ್ಲಿ ಶತಕ ಸಿಡಿಸಿದ್ದ ರಿಷಭ್ ಪಂತ್ ಇಂದು 42 ಎಸೆತಗಳಲ್ಲಿ ತಲಾ ಒಂದು ಬೌಂಡರಿ, ಸಿಕ್ಸರ್ ಸಹಿತ 25 ರನ್ ಗಳಿಸಿ ಶೋಯಬ್ ಬಶೀರ್ಗೆ ವಿಕೆಟ್ ಒಪ್ಪಿಸಿದರು. ಶಾರ್ದೂಲ್ ಠಾಕೂರ್ ಬದಲಿಗೆ ತಂಡ ಸೇರಿದ್ದ ನಿತೀಶ್ ಕುಮಾರ್ ರೆಡ್ಡಿ ಕೇವಲ 6 ಎಸೆತಗಳಲ್ಲಿ ಒಂದು ರನ್ ಗಳಿಸಿ ಜೈಸ್ವಾಲ್ ಔಟ್ ಆದ ನಂತರದ ಓವರ್ನಲ್ಲೇ ವಿಕೆಟ್ ಒಪ್ಪಿಸಿದರು.
ನಂತರ 6ನೇ ವಿಕೆಟ್ಗೆ ಒಂದಾದ ರವೀಂದ್ರ ಜಡೇಜಾ ಮತ್ತು ನಾಯಕ ಶುಭ್ಮನ್ ಗಿಲ್ ಮೊದಲ ದಿನದ ಆಟದ ಅಂತ್ಯದವರೆಗೂ ಕ್ರೀಸ್ ವಿಕೆಟ್ ಕೊಡದೆ 99 ರನ್ಗಳ ಜೊತೆಯಾಟ ನಡೆಸಿದರು. 199 ಎಸೆತಗಳಲ್ಲಿ 100 ರನ್ ಗಳಿಸಿದ ಗಿಲ್, ಒಟ್ಟಾರೆ 216 ಎಸೆತಗಳಲ್ಲಿ 12 ಬೌಂಡರಿಗಳ ಸಹಿತ ಅಜೇಯ 114 ರನ್ಗಳಿಸಿದರು. ಇದು ಅವರ ವೃತ್ತಿ ಜೀವನದ 7ನೇ ಟೆಸ್ಟ್ ಶತಕವಾಗಿದೆ. ಜಡೇಜಾ 67 ಎಸೆತಗಳಲ್ಲಿ 5 ಬೌಂಡರಿ ಸಹಿತ 41 ರನ್ಗಳಿಸಿದರು.
ಇಂಗ್ಲೆಂಡ್ ಪರ ಕ್ರಿಸ್ ವೋಕ್ಸ್ 59ಕ್ಕೆ2, ಬ್ರೈಡನ್ ಕಾರ್ಸ್, ನಾಯಕ ಬೆನ್ ಸ್ಟೋಕ್ಸ್ 58ಕ್ಕೆ1, ಶೋಯಭ್ ಬಶೀರ್ 65ಕ್ಕೆ 1 ವಿಕೆಟ್ ಪಡೆದು ಮಿಂಚಿದರು.
ನ್ಯೂಸ್ 18 ಕನ್ನಡ ಕ್ರೀಡಾ ವಿಭಾಗದಲ್ಲಿ ಕ್ರಿಕೆಟ್ ಅಪ್ಡೇಟ್ಸ್, ಮ್ಯಾಚ್ ಅಪ್ಡೇಟ್ಸ್, ಮ್ಯಾಚ್ ರಿವೀವ್ಸ್, ಲೈವ್ ಸ್ಕೋರ್ಗಳು, ಪಂದ್ಯ ವಿಶ್ಲೇಷಣೆ, ಆಟಗಾರರ ಪ್ರೊಫೈಲ್ಗಳು ಮತ್ತು ಇತರ ಕ್ರೀಡೆಗಳಿಗೆ ಸಂಬಂಧಿಸಿದ ಸುದ್ದಿಗಳನ್ನು ಪಡೆಯಿರಿ. ಹೆಚ್ಚಿನ ಸುದ್ದಿಗಳಿಗಾಗಿ ನ್ಯೂಸ್ 18 ಕನ್ನಡ ಫಾಲೋ ಮಾಡಿ
July 02, 2025 11:32 PM IST