Last Updated:
4ನೇ ದಿನ ಇಂಗ್ಲೆಂಡ್ ತಂಡ 669ಕ್ಕೆ ಆಲೌಟ್ ಆಗುವ ಮೂಲಕ 311 ರನ್‌ಗಳ ಮುನ್ನಡೆ ಸಾಧಿಸಿದೆ. ಇದೀಗ ಭಾರತ 2ನೇ ಇನ್ನಿಂಗ್ಸ್‌ನಲ್ಲಿ ಮೊದಲ ಓವರ್ನಲ್ಲೇ 2 ವಿಕೆಟ್ ಕಳೆದುಕೊಂಡರೂ, ಕೆಎಲ್ ರಾಹುಲ್ ಹಾಗೂ ನಾಯಕ ಗಿಲ್ ಇಬ್ಬರು ಅರ್ಧಶತಕ ಸಿಡಿಸಿ 4ನೇ ದಿನ ಭಾರತದ ಪತನವನ್ನ ತಡೆದಿದ್ದಾರೆ. ನಾಳೆ ಕೊನೆಯ ದಿನವಾಗಿದ್ದು, ಟೀಮ್ ಇಂಡಿಯಾ ಸೋಲು ತಪ್ಪಿಸಿಕೊಳ್ಳುವುದೇ ದೊಡ್ಡ ಸಾಧನೆಯಾಗಿದೆ.
ಇಂಗ್ಲೆಂಡ್ ವಿರುದ್ಧದ(India vs England) ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಭಾರೀ ಹಿನ್ನಡೆ ಅನುಭವಿಸಿದೆ. ಈ ಪಂದ್ಯ ಭಾರತದ ಕೈತಪ್ಪಿದ್ದು, ಸರಣಿ ಗೆಲ್ಲುವ ಆಸೆಯನ್ನ ಜೀವಂತವಾಗಿರಿಸಿಕೊಳ್ಳಬೇಕಾದರೆ, ಈ ಪಂದ್ಯವನ್ನ ಡ್ರಾ ಮಾಡಿಕೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಟೀಮ್ ಇಂಡಿಯಾ ನಾಯಕ ಶುಭ್ಮನ್ ಗಿಲ್ ಹಾಗೂ ಕನ್ನಡಿಗ ಕೆಎಲ್ ರಾಹುಲ್ 60 ಕ್ಕೂ ಹೆಚ್ಚು ಓವರ್ಗಳ ಕಾಲ ಬ್ಯಾಟಿಂಗ್ ಭಾರತಕ್ಕೆ ಸೋಲು ತಪ್ಪಿಸಲು ಹೋರಾಡುತ್ತಿದ್ದಾರೆ. 4ನೇ ದಿನ ಇಂಗ್ಲೆಂಡ್ ತಂಡ 669ಕ್ಕೆ ಆಲೌಟ್ ಆಗುವ ಮೂಲಕ 311 ರನ್‌ಗಳ ಮುನ್ನಡೆ ಸಾಧಿಸಿದೆ. ಇದೀಗ ಭಾರತ 2ನೇ ಇನ್ನಿಂಗ್ಸ್‌ನಲ್ಲಿ ಮೊದಲ ಓವರ್ನಲ್ಲೇ 2 ವಿಕೆಟ್ ಕಳೆದುಕೊಂಡರೂ, ಕೆಎಲ್ ರಾಹುಲ್ ಹಾಗೂ ನಾಯಕ ಗಿಲ್ ಇಬ್ಬರು ಅರ್ಧಶತಕ ಸಿಡಿಸಿ 4ನೇ ದಿನ ಭಾರತದ ಪತನವನ್ನ ತಡೆದಿದ್ದಾರೆ. ನಾಳೆ ಕೊನೆಯ ದಿನವಾಗಿದ್ದು, ಟೀಮ್ ಇಂಡಿಯಾ ಸೋಲು ತಪ್ಪಿಸಿಕೊಳ್ಳುವುದೇ ದೊಡ್ಡ ಸಾಧನೆಯಾಗಿದೆ.
ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಮೊದಲ ಇನ್ನಿಂಗ್ಸ್‌ನಲ್ಲಿ 358 ರನ್‌ಗಳಿಗೆ ಆಲೌಟ್ ಆಗಿತ್ತು. ಆರಂಭಿಕರಾದ ಯಶಸ್ವಿ ಜೈಸ್ವಾಲ್ (58) ಮತ್ತು ಕೆಎಲ್ ರಾಹುಲ್ (46) ಉತ್ತಮ ಪ್ರದರ್ಶನ ನೀಡಿದರೆ, ಸಾಯಿ ಸುದರ್ಶನ್ (61) ಮತ್ತು ರಿಷಭ್ ಪಂತ್ (54) ಅರ್ಧಶತಕ ಗಳಿಸಿದರು. ಆಲ್ ರೌಂಡರ್ ಶಾರ್ದೂಲ್ ಠಾಕೂರ್ 41 ರನ್ ಗಳಿಸಿದ್ದರು. ಇಂಗ್ಲೆಂಡ್ ಪರ ಸ್ಟೋಕ್ಸ್ ಐದು ವಿಕೆಟ್ ಪಡೆದರೆ, ಜೋಫ್ರಾ ಆರ್ಚರ್ ಮೂರು, ಕ್ರಿಸ್ ವೋಕ್ಸ್ ಮತ್ತು ಲಿಯಾಮ್ ಡಾಸನ್ ತಲಾ ಒಂದು ವಿಕೆಟ್ ಪಡೆದಿದ್ದರು.
ನಂತರ ಬ್ಯಾಟಿಂಗ್ ಮಾಡಲು ಇಳಿದ ಇಂಗ್ಲೆಂಡ್ ಒಟ್ಟು 669 ರನ್ ಗಳಿಸುವ ಮೂಲಕ 311 ರನ್ಗಳಿಸಿದೆ. ಆರಂಭಿಕರಾದ ಜ್ಯಾಕ್ ಕ್ರಾಲಿ (84), ಬೆನ್ ಡಕೆಟ್ (94, ಒನ್ ಡೌನ್ ಬ್ಯಾಟ್ಸ್‌ಮನ್ ಓಲಿ ಪೋಪ್ (71) ಅದ್ಭುತ ಅರ್ಧಶತಕ ಗಳಿಸಿದರು. ಜೋ ರೂಟ್ (150) ಮತ್ತು ನಾಯಕ ಬೆನ್ ಸ್ಟೋಕ್ಸ್ (141) ಭರ್ಜರಿ ಶತಕ ಸಿಡಿಸಿ ಬೃಹತ್ ಮೊತ್ತಕ್ಕೆ ನೆರವಾದರು. ಪರಿಣಾಮವಾಗಿ, ಇಂಗ್ಲೆಂಡ್ ಒಟ್ಟು 669 ರನ್ ಗಳಿಸಿತು, ಮೊದಲ ಇನ್ನಿಂಗ್ಸ್‌ನಲ್ಲಿ 311 ರನ್‌ಗಳ ಬೃಹತ್ ಮುನ್ನಡೆ ಸಾಧಿಸಿತು. ಭಾರತದ ಪರ ರವೀಂದ್ರ ಜಡೇಜಾ ನಾಲ್ಕು ವಿಕೆಟ್ ಪಡೆದರೆ, ವಾಷಿಂಗ್ಟನ್ ಸುಂದರ್ ಮತ್ತು ಜಸ್ಪ್ರೀತ್ ಬುಮ್ರಾ ತಲಾ ಎರಡು ವಿಕೆಟ್ ಪಡೆದರು. ಅನ್ಶುಲ್ ಕಾಂಬೋಜ್ ಮತ್ತು ಮೊಹಮ್ಮದ್ ಸಿರಾಜ್ ತಲಾ ಒಂದು ವಿಕೆಟ್ ಪಡೆದರು.
ಈ ಹಿನ್ನೆಲೆಯಲ್ಲಿ ಶನಿವಾರ ನಾಲ್ಕನೇ ದಿನದಾಟದಲ್ಲಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಆರಂಭದಿಂದಲೇ ತೀವ್ರ ಹಿನ್ನಡೆ ಅನುಭವಿಸಿತು. ಮೊದಲ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸಿದ್ದ ಆರಂಭಿಕ ಯಶಸ್ವಿ ಜೈಸ್ವಾಲ್ ಮತ್ತು ಒನ್-ಡೌನ್ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್ ಈ ಬಾರಿ ಶೂನ್ಯಕ್ಕೆ ಔಟಾದರು.
ಟೀಮ್ ಇಂಡಿಯಾ ಇನ್ನಿಂಗ್ಸ್‌ನ ನಾಲ್ಕನೇ ಎಸೆತದಲ್ಲಿ ಇಂಗ್ಲೆಂಡ್ ವೇಗಿ ಕ್ರಿಸ್ ವೋಕ್ಸ್ ಜೈಸ್ವಾಲ್ ಮತ್ತು ಐದನೇ ಎಸೆತದಲ್ಲಿ ಸಾಯ್ ಅವರನ್ನು ಡಕ್ ಔಟ್ ಮಾಡಿದರು. ಮೊದಲ ಓವರ್ ನಲ್ಲೇ ಎರಡು ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ನಾಯಕ ಗಿಲ್ ಮತ್ತು ಕೆಎಲ್ ರಾಹುಲ್ ರಕ್ಷಿಸಿದರು. 4ನೇ ದಿನದಾಟದ ಅಂತ್ಯಕ್ಕೆ ಭಾರತ 2 ವಿಕೆಟ್ ಕಳೆದುಕೊಂಡು ರನ್ಗಳಿಸಿದೆ. ಭಾನುವಾರ ಪಂದ್ಯದ ಕೊನೆಯ ದಿನವಾಗಿದ್ದು, ಟೀಮ್ ಇಂಡಿಯಾ 63 ಓವರ್ಗಳಲ್ಲಿ 2 ವಿಕೆಟ್ ಕಳೆದುಕೊಂಡು 172 ರನ್ಗಳಿಸಿದೆ. ಕೆಎಲ್ ರಾಹುಲ್ ಎಸೆತಗಳಲ್ಲಿ 86 ರನ್ಗಳಿಸಿದ್ದರೆ, ಗಿಲ್ 77 ರನ್ಗಳಿಸಿ ಕೊನೆಯ ದಿನಕ್ಕೆ ಬ್ಯಾಟಿಂಗ್ ಕಾಯ್ದಿರಿಸಿದ್ದಾರೆ.
July 26, 2025 11:14 PM IST