Last Updated:
ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಫೈನಲ್ ಪಂದ್ಯದಿಂದ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಹಾರ್ದಿಕ್ ಪಾಂಡ್ಯ ಹೊರಗುಳಿದಿರುವುದು ಟೀಮ್ ಇಂಡಿಯಾ ಅಭಿಮಾನಿಗಳಿಗೆ ಬೇಸರ ತಂದಿದೆ. ಪಾಂಡ್ಯ ಬದಲಿಗೆ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ.
ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಬಹುನಿರೀಕ್ಷಿತ ಏಷ್ಯಾಕಪ್ 2025 ರ ಫೈನಲ್ ಪಂದ್ಯ ಆರಂಭವಾಗಿದೆ. ಈ ಹೈವೋಲ್ಟೇಜ್ ಫೈನಲ್‌ನಲ್ಲಿ ಭಾರತಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ. ಏಷ್ಯಾ ಕಪ್ ಫೈನಲ್‌ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಟಾಸ್ ಮಾಡುವಾಗಲೇ ಟೀಮ್ ಇಂಡಿಯಾ ಆಘಾತ ಎದುರಿಸಿದೆ. ಮ್ಯಾಚ್ ವಿನ್ನರ್ ಪ್ಲೇಯರ್ ಹಾರ್ದಿಕ್ ಪಾಂಡ್ಯ ಪಂದ್ಯದಿಂದ ಹೊಗುಳಿದಿದ್ದಾರೆ. ಈ ಸ್ಟಾರ್ ಆಟಗಾರನ ಬದಲಿಗೆ ರಿಂಕು ಸಿಂಗ್ ಪ್ಲೇಯಿಂಗ್-11 ರಲ್ಲಿ ಸ್ಥಾನ ಪಡೆದಿದ್ದಾರೆ.
ಪಾಕಿಸ್ತಾನ ವಿರುದ್ಧದ ಹೈವೋಲ್ಟೇಜ್ ಫೈನಲ್ ಪಂದ್ಯದಿಂದ ಭಾರತ ತಂಡದ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೊರಗುಳಿದಿದ್ದಾರೆ. ಹಾರ್ದಿಕ್ ಪಾಂಡ್ಯ ಹೊರಗುಳಿದಿರುವುದು ಟೀಮ್ ಇಂಡಿಯಾ ಅಭಿಮಾನಿಗಳಿಗೆ ಬೇಸರ ತಂದಿದೆ. ಪಾಂಡ್ಯ ಬದಲಿಗೆ ಸ್ಫೋಟಕ ಬ್ಯಾಟರ್ ರಿಂಕು ಸಿಂಗ್ ಅವರನ್ನು ಆಡುವ ಹನ್ನೊಂದರಲ್ಲಿ ಸೇರಿಸಲಾಗಿದೆ.
ಏಷ್ಯಾಕಪ್ 2025 ರ ಫೈನಲ್ ಪಂದ್ಯದಲ್ಲಿ ಭಾರತ ಮೂರು ಬದಲಾವಣೆಗಳನ್ನು ಮಾಡಿದೆ. ಶ್ರೀಲಂಕಾ ವಿರುದ್ಧದ ಸೂಪರ್ 4 ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಮತ್ತು ಶಿವಂ ದುಬೆ ತಂಡಕ್ಕೆ ಮರಳಿದ್ದಾರೆ. ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ.
ಹಾರ್ದಿಕ್ ಪಾಂಡ್ಯ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಫೈನಲ್ ಪಂದ್ಯದಲ್ಲಿ ಆಡುತ್ತಿಲ್ಲ. ಟಾಸ್ ಸಮಯದಲ್ಲಿ ಸೂರ್ಯಕುಮಾರ್ ಯಾದವ್, “ದುರದೃಷ್ಟವಶಾತ್, ಹಾರ್ದಿಕ್ ಗಾಯದ ಕಾರಣದಿಂದಾಗಿ ಪಂದ್ಯದಿಂದ ಹೊರಗುಳಿದಿದ್ದಾರೆ” ಎಂದು ಹೇಳಿದರು.
ಶ್ರೀಲಂಕಾ ವಿರುದ್ಧದ ಕೊನೆಯ ಸೂಪರ್ 4 ಪಂದ್ಯದಲ್ಲಿ, ಹಾರ್ದಿಕ್ ಮೊದಲ ಓವರ್ ಬೌಲಿಂಗ್ ಮಾಡಿದ ನಂತರ ಮೈದಾನವನ್ನು ತೊರೆದರು. ನಂತರ ಅವರು ಮೈದಾನಕ್ಕೆ ಹಿಂತಿರುಗಲಿಲ್ಲ. ತಂಡದ ಬೌಲಿಂಗ್ ಕೋಚ್ ಮಾರ್ನೆ ಮಾರ್ಕೆಲ್ ಅವರು ಸ್ನಾಯು ಸೆಳೆತದಿಂದ ಆಡಲು ಸಾಧ್ಯವಾಗಲಿಲ್ಲ. ಫೈನಲ್ ಪಂದ್ಯಕ್ಕೂ ಮುನ್ನ ಅವರು ಫಿಟ್ ಆಗುತ್ತಾರೆ ಎಂದು ಮಾಹಿತಿ ನೀಡಿದ್ದರು. ಆದರೆ ಫೈನಲ್ ಪಂದ್ಯಕ್ಕೆ ಪಾಂಡ್ಯ ಫಿಟ್ ಇಲ್ಲದ ಕಾರಣ ಹೊರಗುಳಿದಿದ್ದಾರೆ.
ಪಾಕಿಸ್ತಾನ ಪ್ಲೇಯಿಂಗ್ XI: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸೈಮ್ ಅಯೂಬ್, ಸಲ್ಮಾನ್ ಅಲಿ ಅಘಾ (ನಾಯಕ), ಹುಸೇನ್ ತಲಾತ್, ಮೊಹಮ್ಮದ್ ಹ್ಯಾರಿಸ್ (ವಿಕೀ), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಅಬ್ರಾರ್ ಅಹ್ಮದ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್
ಭಾರತ ಪ್ಲೇಯಿಂಗ್ XI: ಅಭಿಷೇಕ್ ಶರ್ಮಾ, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೀ), ಶಿವಂ ದುಬೆ, ಅಕ್ಸರ್ ಪಟೇಲ್, ರಿಂಕು ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ
September 28, 2025 8:09 PM IST